ಬೆಂಗಳೂರು | ಟ್ಯಾಂಕರ್ ನೀರಿಗೆ ದರ ನಿಗದಿ ಮಾಡಿದ ಜಿಲ್ಲಾಡಳಿತ

Date:

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಜನರು ಕುಡಿಯುವ ನೀರಿಗಾಗಿ ಕೂಡ ರಾಜಧಾನಿಯಲ್ಲಿ ಪರಿತಪಿಸುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿದ್ದ ವಾಟರ್‌ ಟ್ಯಾಂಕರ್‌ ಮಾಲೀಕರು ಜನರಿಂದ ದುಪ್ಪಟ್ಟು ಹಣ ಪೀಕಲು ಆರಂಭಿಸಿದ್ದರು. ಸದ್ಯ ಇದಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಬೆಂಗಳೂರು ಜಿಲ್ಲಾಡಳಿತ, ದರ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇದನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

- Advertisement -

ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಸಭೆ ನಡೆಸಿದ್ದರು. ಟ್ಯಾಂಕರ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಅಲ್ಲದೇ, ಮಾರ್ಚ್‌ 7ರೊಳಗೆ ಟ್ಯಾಂಕರ್ ಮಾಲೀಕರು ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದೀಗ, ದುಬಾರಿ ಬೆಲೆಗೆ ಖಾಸಗಿ ಟ್ಯಾಂಕರ್‌ಗಳ ಹಾವಳಿಗೆ ಬ್ರೇಕ್‌ ಹಾಕಲು, ಟ್ಯಾಂಕರ್ ಮಾಲೀಕರ ಜತೆಗೆ ಜಿಲ್ಲಾಡಳಿತ ಸಭೆ ನಡೆಸಿದ್ದು, ದರ ನಿಗದಿ ಮಾಡಿ ಆದೇಶ ಹೊರಡಿಸಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರತಿ 15 ನಿಮಿಷಕ್ಕೊಂದು ರೈಲು ಸಂಚಾರ

ಟ್ಯಾಂಕರ್ ನೀರಿನ ದರ

  • 5 ಕಿ.ಮೀ ವ್ಯಾಪ್ತಿಯ ಒಳಗಡೆಗೆ 6 ಸಾವಿರ ಲೀಟರ್ ನೀರು ಸರಬರಾಜು ಮಾಡುವ ಟ್ಯಾಂಕರ್​ಗೆ ₹600
  • 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 6 ಸಾವಿರ ಲೀಟರ್ ನೀರು ಸರಬರಾಜು ಮಾಡುವ ಟ್ಯಾಂಕರ್‌ಗೆ ₹750
  • 8 ಸಾವಿರ ಲೀಟರ್ ಟ್ಯಾಂಕರ್​ಗೆ ₹700 ದರ ನಿಗದಿ‌‌ ಮಾಡಲಾಗಿದ್ದು, ಇದು 5 ಕಿ.ಮೀ ಒಳಗೆ ಅನ್ವಯವಾಗಲಿದೆ.
  • 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 8 ಸಾವಿರ ಲೀಟರ್ ನೀರು ಸರಬರಾಜು ಮಾಡುವ ಟ್ಯಾಂಕರ್‌ಗೆ ₹850
  • 5 ಕಿಲೋ ಮೀಟರ್ ವ್ಯಾಪ್ತಿಗೆ 1,200 ಲೀಟರ್ ಟ್ಯಾಂಕರ್​​ಗೆ ₹1000.
  • 1200 ಲೀಟರ್ ಟ್ಯಾಂಕರ್​​​ಗೆ ₹1200 ದರ ನಿಗದಿ ಮಾಡಲಾಗಿದ್ದು, ಇದು 10 ಕಿಲೋ ಮೀಟರ್ ವ್ಯಾಪ್ತಿಗೆ ಅನ್ವಯವಾಗಲಿದೆ.
  • ಜಿಎಸ್​​ಟಿ ಸೇರಿಸಿದಂತೆ ಇದೀಗ ಅಧಿಕಾರಿಗಳು ಈ ದರ ನಿಗದಿ ಮಾಡಿದ್ದಾರೆ. ತಿಂಗಳ ಬಾಡಿಗೆ ಒಪ್ಪಿಕೊಳ್ಳುವವರಿಗೆ 5 ಕಿಲೋ ಮೀಟರ್​​​ಗೆ ₹510 ನಿಗದಿಪಡಲಾಗಿದೆ. 10 ಕಿಲೋ ಮೀಟರ್ ಹೋದರೆ ₹650 ದರ ನಿಗದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...