ಬೆಂಗಳೂರು | ಐಪಿಎಲ್‌ ಪಂದ್ಯ: ರಾತ್ರಿ 11.30ರವರೆಗೆ ಮೆಟ್ರೋ ರೈಲು ಸಂಚಾರ ವಿಸ್ತರಣೆ

Date:

ಟಾಟಾ ಐಪಿಎಲ್‌ ಟಿ-20 ಕ್ರಿಕೆಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಪಂದ್ಯ ವೀಕ್ಷಣೆಗಾಗಿ ಹಲವಾರು ಜನ ಆಗಮಿಸುವ ನಿರೀಕ್ಷೆಯಿದ್ದು, ಈ ಹಿನ್ನೆಲೆ, ಸಾರ್ವಜನಿಕರ ಅನುಕೂಲಕ್ಕಾಗಿ ಮಾರ್ಚ್‌ 25, 29 ಹಾಗೂ ಎಪ್ರಿಲ್ 2 ರಂದು ಎಲ್ಲ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ರಾತ್ರಿ 11.30ಕ್ಕೆ ಕೊನೆಯ ರೈಲು ಸೇವೆ ಹೊರಡುತ್ತದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೇಳಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಎಂಆರ್‌ಸಿಎಲ್‌, “ಈ ಪಂದ್ಯ ನಡೆಯುವ ದಿನಗಳಲ್ಲಿ, ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳು ₹50 ಮಾರಾಟಕ್ಕೆ ಲಭ್ಯವಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಪ್ರಯಾಣಿಕರು ಕ್ಯೂಆರ್‌ ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಹಾಗೂ ಎನ್‌ಸಿಎಮ್‌ಸಿ ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 234 ರೌಡಿಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ

ಹಾಗೆಯೇ, ಬೆಂಗಳೂರಿನ ಬಿಡದಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಮಾರ್ಚ್‌ 24 (ಭಾನುವಾರ) ದಂದು ನಿಗದಿಯಾಗಿರುವ ಬಿಡದಿ ಹಾಫ್ ಮ್ಯಾರಥಾನ್‌ನಲ್ಲಿ ಸಾರ್ವಜನಿಕರು ಭಾಗವಹಿಸಲು ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ತನ್ನ ಎಲ್ಲ ನಾಲ್ಕು ಟರ್ಮಿನಲ್‌ಗಳಿಂದ ಮತ್ತು ಇಂಟರ್‌ಚೇಂಜ್ ಸ್ಟೇಷನ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ – ಮೆಜೆಸ್ಟಿಕ್‌ನಿಂದ ಬೆಳಿಗ್ಗೆ 7 ಗಂಟೆ ಬದಲಾಗಿ 4:30 ಗಂಟೆಯಿಂದ ಮೆಟ್ರೋ ರೈಲು ಸೇವೆಗಳನ್ನು ಪ್ರಾರಂಭಿಸುತ್ತದೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...