ಬೆಂಗಳೂರು | ಪ್ರಿಯಕರನ ಜತೆ ಸೇರಿ ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ

Date:

ಬೆಂಗಳೂರಿನಲ್ಲಿ ಪೋಷಕರೇ ತಮ್ಮ ಮಕ್ಕಳಿಗೆ ಚಿತ್ರಹಿಂಸೆ ನೀಡಿ ಹಲ್ಲೆ ಮಾಡುವ ಅಮಾನುಷ ಘಟನೆಗಳು ವರದಿಯಾಗುತ್ತಿವೆ. ಇತ್ತೀಚಿಗೆ 2 ವರ್ಷದ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಕುಕ್ಕರ್‌ನಿಂದ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಆ ಘಟನೆ ಬೆನ್ನಲ್ಲೇ ಮತ್ತೊಂಂದು ಘಟನೆ ವರದಿಯಾಗಿದೆ. ತಾಯಿಯೊಬ್ಬಳು ತನ್ನ ಪ್ರಿಯಕರನ ಜತೆಗೆ ಸೇರಿ ಮಗುವನ್ನು ಕಚ್ಚಿ, ಗಾಯದ ಮೇಲೆ ಪ್ರಿಡ್ಜ್‌ನಲ್ಲಿದ್ದ ತಣ್ಣೀರು ಸುರಿದು ಕ್ರೌರ್ಯ ಮೆರೆದಿದ್ದಾಳೆ.

- Advertisement -

ಆಯೇಷಾ ಮಗುವಿಗೆ ಹಿಂಸೆ ನೀಡಿದ ತಾಯಿ. ಈಕೆಗೆ ಇಮ್ರಾನ್ ಖಾನ್‌ ಎಂಬುವವರ ಜತೆಗೆ ಮದುವೆಯಾಗಿ, ಒಂದು ಹೆಣ್ಣು ಮಗು ಜನಿಸಿತ್ತು. ಆಯೇಷಾ ತನ್ನ ಪತಿ ಇಮ್ರಾನ್‌ ಖಾನ್‌ನಿಂದ ವಿಚ್ಛೇದನ ಪಡೆದು ತನ್ನ ತಾಯಿಯ ಮನೆಯಲ್ಲಿ ನೆಲೆಸಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆಯೇಷಾಗೆ ಸಲೀಂ ಎಂಬ ಪ್ರಿಯಕರ ಇದ್ದ ಎನ್ನಲಾಗಿದೆ. ಆತನೊಂದಿಗೆ ಸೇರಿ ಪತಿಯ ಮೇಲಿನ ಕೋಪಕ್ಕೆ ಮಗುವಿಗೆ ಚಿತ್ರಹಿಂಸೆ ನೀಡಿದ್ದಾಳೆ. ಮಗುವಿಗೆ ಕಚ್ಚಿ, ಗಾಯದ ಮೇಲೆ ಫ್ರಿಡ್ಜ್‌ ನೀರು ಹಾಕಿ ಚಿತ್ರಹಿಂಸೆ ನೀಡಿದ್ದಾರೆ. ಇದಲ್ಲದೇ, ಮಗುವಿನ ಕೈಗೆ ಸಿಗರೇಟ್‌ನಿಂದ ಸುಟ್ಟು ಗಾಯ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು; ಸರ್ಕಾರ ಆದೇಶ

ಈ ಬಗ್ಗೆ ಮಗು ತನ್ನ ತಂದೆಗೆ ತಿಳಿಸದಂತೆ ಕೊಲೆ ಬೆದರಿಕೆ ಹಾಕಿದ್ದಾರೆ. ಇದರಿಂದ ಭಯಗೊಂಡ ಮಗು ತಂದೆಯ ಬಳಿ ನಡೆದ ಘಟನೆ ಬಗ್ಗೆ ಹೇಳಿಕೊಂಡಿರಲಿಲ್ಲ. ಕೆಲ ದಿನ ಕಳೆದ ಬಳಿಕ ಮಗು ವಿಚಾರವನ್ನು ತಂದೆ ಬಳಿ ತಿಳಿಸಿದೆ.

ಈ ಬಗ್ಗೆ ಇಮ್ರಾನ್ ಜೆಜೆನಗರ ಪೊಲೀಸ್ ಠಾಣೆಯಲ್ಲಿ ಆಯೇಷಾ, ಆಕೆಯ ಪ್ರಿಯಕರ ಸಲೀಂ ಮತ್ತು ಜಬೀರ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...