ಬೆಂಗಳೂರು | ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ ಪುಡಿರೌಡಿಗಳು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಗಳ ಪುಂಡಾಟ ಹೆಚ್ಚಳವಾಗಿದ್ದು, ರಾತ್ರಿ ವೇಳೆ ಬಸ್ ನಿಲ್ದಾಣದಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಪುಡಿರೌಡಿಗಳು ಕುಡಿದ ಮತ್ತಿನಲ್ಲಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ಲಾಂಗ್ ಬೀಸಿದ ಘಟನೆ ಕುಮಾರಸ್ವಾಮಿ ಲೇಔಟ್‌ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

- Advertisement -

ಏಪ್ರಿಲ್ 4ರ ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ಚಾಲಕ ನಾಗೇಂದ್ರ ಎಂಬುವವರಿಗೆ ತಲೆ, ಕಣ್ಣಿನ ಕೆಳಭಾಗ ಹಾಗೂ ಎಡಕೈಗೆ ಗಾಯವಾಗಿದೆ. ಇನ್ನು ಮಚ್ಚು ಬಿಸುತ್ತಾ ಓಡಿಸಿಕೊಂಡು ಬರುವ ದೃಶ್ಯ ಮೊಬೈಲ್‌ವೊಂದರಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಏ.4ರಂದು ಮಾರ್ಗ ಸಂಖ್ಯೆ 15E/2ರಲ್ಲಿ ಬಿಎಂಟಿಸಿ ಬಸ್ ಚಾಲಕ ನಾಗೇಂದ್ರ ಅವರು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಡರಾತ್ರಿ 15 ಇ ಬಸ್‌ ನಿಲ್ದಾಣದಲ್ಲಿ ಕರ್ತವ್ಯ ಮುಗಿಸಿ ನಿರ್ವಾಹಕ ಹಾಗೂ ಚಾಲಕ ಮಲಗಿದ್ದರು. ಬಸ್ ನಿಲ್ದಾಣಕ್ಕೆ ಬಂದ 4 ಜನ ಅಪರಿಚಿತರು ನಿಲ್ದಾಣದಲ್ಲಿ ಜೋರಾಗಿ ಕೂಗಾಡುತ್ತಿದ್ದರು.

“ಆ ವೇಳೆ ನಾನು ಬಸ್‌ನಲ್ಲಿಯೇ ಕುಳಿತುಕೊಂಡು ಅವರಿಗೆ ಇಲ್ಲಿ ಕೂಗಾಡಬೇಡಿ ಎಂದಿದ್ದೆ. ಆಗ ಅವರಲ್ಲಿ ಒಬ್ಬ ನಾವು ಏನಾದರೂ ಮಾಡುತ್ತೇವೆ ನಿನಗೆ ಯಾಕಲೇ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ” ಎಂದು ನಿರ್ವಾಹಕರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ 10ಕ್ಕೇರಿದ ಕಾಲರಾ ಪ್ರಕರಣಗಳ ಸಂಖ್ಯೆ : ಬೆಂಗಳೂರಿನಲ್ಲಿಯೇ 6 ಪ್ರಕರಣಗಳು!

ಆಗ ಬಸ್‌ನಿಂದ ಕೆಳಗಡೆ ಇಳಿದು ಯಾಕಪ್ಪ ಆ ರೀತಿ ಬೈಯುತ್ತೀಯಾ ಎಂದು ಚಾಲಕ ಕೇಳಿದ್ದು, ಆವಾಗ ಚಾಲಕನ‌ ಮೇಲೆ ಕೈಗಳಿಂದ ಮುಖಕ್ಕೆ ಹಾಗೂ ಕುತ್ತಿಗೆಗೆ ಹಲ್ಲೆ ಮಾಡಿದ್ದಾನೆ. ಆತನ ಪಕ್ಕದಲ್ಲಿದ್ದ ಇನ್ನೊಬ್ಬನಿಂದ ಚಾಲಕನ ತಲೆಗೆ ಮಚ್ಚಿನಿಂದ ದಾಳಿ ನಡೆಸಿದ್ದು, ಮತ್ತೆ ಮಚ್ಚಿನಿಂದ ಹೊಡೆಯಲು ಬಂದಾಗ, ಚಾಲಕ ಹಾಗೂ ನಿರ್ವಾಹಕ ಅಲ್ಲಿಂದ ಓಡಿ‌ ಹೋಗಿದ್ದಾರೆ. ಬಳಿಕ ಕಂಡಕ್ಟರ್ ಸಹಾಯದಿಂದ ವಾಸವಿ ಆಸ್ಪತ್ರೆಗೆ ಹೋಗಿ ಪ್ರಥಮ ಚಿಕಿತ್ಸೆ ಪಡೆದು, ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡು ಚಾಲಕ ದೂರು ನೀಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...