ಬೆಂಗಳೂರಿನ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನನ್ನು ವಿಚಾರಣೆ ನಡೆಸಿದಾಗ ಆತನ ಹೇಳಿಕೆ ಕೇಳಿ ಪೊಲೀಸರು ಬೆರಗಾಗಿದ್ದಾರೆ.
ಮಹದೇವಪುರ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ಗೆ ಬುಧವಾರ ತಡರಾತ್ರಿ ಕರೆ ಬಂದಿದ್ದು, ಶೀಘ್ರದಲ್ಲೇ ಬಾಂಬ್ ಸ್ಫೋಟವಾಗುತ್ತದೆ ಎಂದು ಬೆದರಿಕೆ ಹಾಕಲಾಗಿತ್ತು. ಕೂಡಲೇ ರೆಸ್ಟೋರೆಂಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಾತ್ರಿ ಇಡೀ ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ
ಬಳಿಕ ಅನುಮಾನ ಮೂಡಿದ ಹಿನ್ನೆಲೆ, ಇಂದಿರಾನಗರ ಬ್ರಾಂಚ್ನಲ್ಲಿ ಕೆಲಸ ಮಾಡುತ್ತಿದ್ದ ವೇಲು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಂಬಳ ಕೊಡದ ಹಿನ್ನೆಲೆ ರೆಸ್ಟೋರೆಂಟ್ಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದೇನೆ ಎಂದು ವೇಲು ತಿಳಿಸಿದ್ದಾನೆ.
ಪ್ರಕರಣ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.