ಬೆಂಗಳೂರು | ಸಾಲು ಸಾಲು ರಜೆಯಿಂದ ಸಂಚಾರ ದಟ್ಟಣೆ : ತಮ್ಮ ಊರಿನತ್ತ ಮುಖ ಮಾಡಿದ ಜನರು

Date:

ಸಾಲು ಸಾಲು ರಜೆ ಇರುವ ಕಾರಣ, ಜನರು ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆ, ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಳವಾಗಿದೆ.

ಗಣರಾಜ್ಯೋತ್ಸವ ಸೇರಿದಂತೆ ಮೂರು ದಿನಗಳ ಕಾಲ ರಜೆ ಇದ್ದು, ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

ವಾಹನ ಸವಾರರು ಮಾರ್ಗ ಮಧ್ಯೆ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡು ಹೈರಾಣಾಗಿದ್ದಾರೆ. ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಸಂಚಾರ ಪೊಲೀಸರು ಹರಸಾಹಸ ಪಡುವಂತಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಖಾಸಗಿ ಬಸ್ ದರ ಹೆಚ್ಚಳ

ಮೂರು ದಿನಗಳ ಕಾಲ ಸಾಲು ರಜೆ ಇರುವ ಹಿನ್ನೆಲೆ, ಬೆಂಗಳೂರಿಗೆ ಉದ್ಯೋಗ ಅರಸಿ ಬಂದು ಇಲ್ಲಿಯೇ ನೆಲೆಸಿರುವ ಜನರು ಇದೀಗ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ.

ಗಣರಾಜೋತ್ಸವ, ನಾಲ್ಕನೇ ಶನಿವಾರ ಹಾಗೂ ಭಾನುವಾರ ಇರುವ ಸಾಲು ಸಾಲು ರಜೆಗಳನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲೀಕರು, ದುಪ್ಪಟ್ಟು ಟಿಕೆಟ್ ದರ ನಿಗದಿ ಮಾಡಿ ಜನರಿಂದ ಪೀಕುತ್ತಿದ್ದಾರೆ. ಆದರೂ, ಬೆಂಗಳೂರಿನಿಂದ ನಾನಾ ಕಡೆ ತೆರಳುವ ಖಾಸಗಿ ಬಸ್‌ಗಳು ಬಹುತೇಕ ತುಂಬಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಶೇ.25 ರಷ್ಟು ಸೈಬರ್ ಅಪರಾಧ ಪ್ರಕರಣ ದಾಖಲು: ಡಿಜಿ ಐಜಿಪಿ ಅಲೋಕ್ ಮೋಹನ್

ಇಂದಿನ ಟಿಕೆಟ್ ದರ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ₹1250- ₹1600, ಹುಬ್ಬಳ್ಳಿಗೆ ₹1700-₹2500, ಮಂಗಳೂರಿಗೆ ₹1550-₹2000, ಕಲಬುರಗಿಗೆ ₹1900-₹2300, ಮಡಿಕೇರಿಗೆ ₹950-₹1600, ಉಡುಪಿಗೆ ₹1700-₹2200, ಧಾರವಾಡಕ್ಕೆ ₹1400-₹1850, ಬೆಳಗಾವಿಗೆ ₹1300-₹1800, ದಾವಣಗೆರೆಗೆ ₹900-₹1300, ಚಿಕ್ಕಮಗಳೂರುಗೆ ₹1100-₹1300, ಬೀದರ್‌ಗೆ ₹1600-₹2000, ರಾಯಚೂರಿಗೆ ₹1250-₹1600 ದರವಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಬಾಕಿ ಹಣ ಬಿಡುಗಡೆಯಾಗುವವರೆಗೆ ಕಾನೂನು ಹೋರಾಟ ನಿಲ್ಲಲ್ಲ : ಕೃಷ್ಣ ಬೈರೇಗೌಡ

ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ ರೂ.18,172 ಕೋಟಿ ಬರ ಪರಿಹಾರ ಬಿಡುಗಡೆಯಾಗಬೇಕಿತ್ತು....

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...