ಬೆಂಗಳೂರು | ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಭಾರೀ ವಾಹನಗಳಿಗೆ ಸಂಚಾರ ನಿರ್ಬಂಧ

Date:

ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಜನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಬೆಂಗಳೂರಿನ ಎಚ್​ಎಎಲ್​ ಸಂಚಾರ ಪೊಲೀಸರು ಸರ್ವಿಸ್​ ರಸ್ತೆಯಲ್ಲಿ ಭಾರೀ ಸರಕು ಸಾಗಣೆ ವಾಹನಗಳು, ಬಿಎಂಟಿಸಿ ಹಾಗೂ ಖಾಸಗಿ ಬಸ್​ಗಳ ಸಂಚಾರವನ್ನು ನಿಷೇಧಿಸಿದ್ದಾರೆ.

ಬೆಂಗಳೂರು ನಗರ ಎಚ್.ಎ.ಎಲ್ ಏ‌ರ್‌ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ವರ್ತೂರು ರಸ್ತೆ ಮತ್ತು ಹೊರವರ್ತುಲ ರಸ್ತೆಯಲ್ಲಿರುವ ಮಾರತಹಳ್ಳಿ ಬ್ರಿಡ್ಜ್ ಮೇಲೆ ಸಾರ್ವಜನಿಕರ ವಾಹನಗಳ ಸುಗಮ ಸಂಚಾರ ಮಾಡುವ ನಿಟ್ಟಿನಲ್ಲಿ ಮಾರತಹಳ್ಳಿ ಹೊರವರ್ತುಲ ರಸ್ತೆಯ ಕೆ.ಎಲ್.ಎಮ್ ಮಾಲ್ ಸರ್ವೀಸ್ ರಸ್ತೆಯಲ್ಲಿ ಎಲ್.ಜಿ.ವಿ, ಹೆಚ್.ಜಿ.ವಿ, ಹೆಚ್.ಟಿ.ವಿ ಮತ್ತು ಬಸ್‌ಗಳ ಸಂಚಾರಕ್ಕೆ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಸದರಿ ವಾಹನಗಳು ಕಾರ್ತಿಕ್‌ ನಗರ-ಇಸ್ರೋ ಜಂಕ್ಷನ್‌ನಲ್ಲಿ ತಿರುವು ಪಡೆದು ಐ.ಟಿ.ಪಿ.ಎಲ್, ಕಾಡುಗೋಡಿ, ವರ್ತೂರು ಕೋಡಿ ಕಡೆಗೆ ಚಲಿಸಬಹುದಾಗಿದೆ. ಹಾಗೇಯೇ, ಬೆಂಗಳೂರು ನಗರದೊಳಗೆ ಚಲಿಸಲು ಇಸ್ರೋ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ದೊಡ್ಡನಕ್ಕುಂದಿ ಗ್ರಾಮದ ರಸ್ತೆಯ ಮೂಲಕ ಹಳೆ ಏರ್‌ಪೋರ್ಟ್ ರಸ್ತೆ ಮೂಲಕ ಚಲಿಸಬಹುದಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲಘು ವಾಹನ ಮತ್ತು ಶಾಲಾ ವಾಹನಗಳು ಮಾತ್ರ ಕೆ.ಎಲ್.ಎಮ್ ಮಾಲ್ ಸರ್ವೀಸ್ ರಸ್ತೆ ಮೂಲಕ ಮಾರತಹಳ್ಳಿ ಬ್ರಿಡ್ ಮೂಲಕ ಕುಂದಲಹಳ್ಳಿ ಗೇಟ್ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸಲು ಅನುವು ಮಾಡಿಕೊಟ್ಟಿದೆ.

ಈ ಸುದ್ದಿ ಓದಿದ್ದೀರಾ? ಏಪ್ರಿಲ್ ಬಳಿಕವೇ ಇಂದಿರಾ ಕ್ಯಾಂಟೀನ್‌ನಲ್ಲಿ ‘ಮುದ್ದೆ ಭಾಗ್ಯ’

ಸಾರ್ವಜನಿಕರ ವಾಹನಗಳ ಸುಗಮ ಸಂಚಾರದ ಉದ್ದೇಶದಿಂದ ತಾತ್ಕಾಲಿಕ ಸಂಚಾರ ಮಾರ್ಪಾಟು ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರೀಯತೆ, ದೇಶಭಕ್ತಿ ಬಗ್ಗೆ ಬಿಜೆಪಿ ನಮಗೆ ಹೇಳಿಕೊಡಬೇಕಿಲ್ಲ: ಸಚಿವ ಎಂ ಬಿ ಪಾಟೀಲ್‌

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಮತ್ತು ದೇಶ ವಿಭಜನೆಯನ್ನು ತಡೆಯಲು ಶಕ್ತಿ ಮೀರಿ...

ಬಿಎಂಟಿಸಿ | 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500...

ದಾವಣಗೆರೆ | ಗೌರವಧನ ಹೆಚ್ಚಳಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಯವರ ಗಮನಕ್ಕೆ ತರುವಂತೆ...

ದಾವಣಗೆರೆ | ಎರಡು ಕ್ವಿಂಟಲ್ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಂಗಾಲು

ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ...