ಬೆಂಗಳೂರು | ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು; ತ್ವರಿತವಾಗಿ ಕಾಮಗಾರಿ ಮುಗಿಸಿದ ಜಲಮಂಡಳಿ

Date:

Advertisements

ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯು ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು ಹರಿಸುವ ಕಾಮಗಾರಿಯನ್ನು ತ್ವರಿತವಾಗಿ ಪೂರೈಸಿದ್ದು, ಕುಸಿದಿರುವ ಅಂತರ್ಜಲವನ್ನು ಮರುಪೂರಣಗೊಳಸಲು ಮುಂದಾಗಿದೆ ಎಂದು ಜಲಮಂಡಳಿ ಹೇಳಿದೆ.

ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನಾಯಂಡಹಳ್ಳಿ ಕೆರೆ, ಕೆಂಗೇರಿ ತ್ಯಾಜ್ಯ ನೀರು ಶುದ್ದೀಕರಣ ಘಟಕದಿಂದ ಸಂಸ್ಕರಿಸಿದ ನೀರನ್ನು ಕೆಂಗೇರಿ ಕೆರೆಗೆ ತುಂಬಿಸಲಾಗುತ್ತಿದೆ. ಸಂಸ್ಕರಿಸಿದ ನೀರನ್ನು ದುಬಾಸಿಪಾಳ್ಯ, ಹೊಸಕೆರಳ್ಳಿ ಹಾಗೂ ಹಲಗೇವಡೆರಹಳ್ಳಿ ಕೆರೆಗಳಿಗೆ ತುಂಬಿಸುವ ಕಾಮಗಾರಿಯೂ ಚಾಲನೆಯಲ್ಲಿದೆ ಎಂದು ಹೇಳಿದೆ.

ಮಾರ್ಚ್‌ 24ರಂದು ಕೆಂಗೇರಿ ಕೆರೆಗೆ ನೀರು ತುಂಬಿಸುವ ಕಾರ್ಯವನ್ನು ಪರಿಶೀಲಿಸಿದ ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ಮಾತನಾಡಿ, “ಎರಡನೇ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿತ್ತು. ಇದರ ಹಿನ್ನಲೆ, ಕೆಲವು ದಿನಗಳ ಹಿಂದೆ ಕೆಂಗೇರಿ ಕೆರೆಗೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಚುರುಕುಗೊಳಿಸುವಂತೆ ಸೂಚಿಸಲಾಗಿತ್ತು. ಮಾರ್ಚ್‌ 24ರಂದು ಕೆರೆಗೆ ನೀರು ಹರಿಸುವ ಪೈಪ್‌ ಲೈನ್‌ ಅಳವಡಿಸಲಾಗಿದ್ದು, ನೀರು ಹರಿಸಲಾಗುತ್ತಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಉತ್ತರಪ್ರದೇಶ | ಹೋಳಿ ಆಚರಣೆ ವೇಳೆ ಮುಸ್ಲಿಂ ಮಹಿಳೆಯರಿಗೆ ಕಿರುಕುಳ; ನಾಲ್ವರ ಬಂಧನ

“ಜಲಮಂಡಳಿಯ ವತಿಯಿಂದ ದಾಖಲೆಯ ಸಮಯದಲ್ಲಿ ಅಗತ್ಯ ಕಾಮಗಾರಿಯನ್ನು ಪೂರೈಸಲಾಗಿದ್ದು, ಬತ್ತಿ ಹೋಗಿದ್ದ ಜಲಮೂಲವಾದ ಕೆಂಗೇರಿ ಕೆರೆಗೆ ಮತ್ತೊಮ್ಮೆ ಜೀವ ಜಲ ತುಂಬಿಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕೆರೆ ತುಂಬಲಿದ್ದು, ಅಂತರ್ಜಲ ಮರುಪೂರಣ ಪ್ರಾರಂಭವಾಗಲಿರುವುದು ಸಂತಸದ ವಿಷಯವಾಗಿದೆ” ಎಂದು ಹೇಳಿದರು.

“ಈಗಾಗಲೇ ನಾಯಂಡಹಳ್ಳಿ ಕೆರೆ ಸೇರಿದಂತೆ 14 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕೆರೆಗಳಿಗೆ ನೀರನ್ನು ತುಂಬಿಸುವುದು ಜಲಮಂಡಳಿಯ ಗುರಿಯಾಗಿದೆ. ನಗರದಲ್ಲಿ ಅವ್ಯಾಹತವಾಗಿ ಅಂತರ್ಜಲದ ಬಳಕೆಯಾಗುತ್ತಿದೆ. ಭವಿಷ್ಯದ ನೀರಿನ ಅವಶ್ಯಕತೆ ಪೂರೈಸಲು ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಜಲಮಂಡಳಿಯ ವತಿಯಿಂದ ಕೈಗೊಳ್ಳಲಾಗುತ್ತಿದೆ” ಎಂದು ರಾಮ್‌ಪ್ರಸಾತ್ ಮನೋಹರ್ ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X