ವಿವಾಹದ ಆನ್​ಲೈನ್ ನೋಂದಣಿ ಪ್ರಕ್ರಿಯೆಗೆ ಫೆ.15 ರಿಂದ ಪ್ರಾಯೋಗಿಕ ಚಾಲನೆ

Date:

ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ವಿವಾಹದ ಆನ್‌ಲೈನ್ ನೋಂದಣಿ ಸೌಲಭ್ಯವನ್ನು ಕರ್ನಾಟಕ ಸರ್ಕಾರ ಗುರುವಾರ (ಫೆಬ್ರವರಿ 15) ಪ್ರಾರಂಭಿಸಿದೆ.

- Advertisement -

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಮಲ್ಲೇಶ್ವರಂ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ವಿವಾಹದ ಆನ್​ಲೈನ್ ನೋಂದಣಿ ಪ್ರಕ್ರಿಯೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಿದರು. ಅದೇ ರೀತಿ, ವಿಶೇಷ ವಿವಾಹ ಕಾಯ್ದೆ 1954ರ ಅಡಿಯಲ್ಲಿ ವಿವಾಹ ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕೂಡ ಆನ್‌ಲೈನ್‌ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹಿಂದೂ ವಿವಾಹಗಳ ನೋಂದಣಿ ಕಾಯಿದೆ-1955ರಡಿ ವಿವಾಹ ನೋಂದಣಿ ಸರಳೀಕರಣಗೊಳಿಸಿದ್ದು, ವಿವಾಹಿತರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಿ ಉಪನೋಂದಣಾಧಿಕಾರಿಗಳು ಅನುಮೋದಿಸಿದ ನಂತರ ನಿಗದಿತ ಶುಲ್ಕ ಪಾವತಿಸಿ ಆನ್‌ಲೈನ್‌ನಲ್ಲಿಯೇ ವಿವಾಹ ದೃಢೀಕರಣ ಪತ್ರ ಪಡೆಯಲು ಆನ್‌ಲೈನ್‌ ಹಿಂದೂ ವಿವಾಹ ನೋಂದಣಿ ತಂತ್ರಾಂಶ ವ್ಯವಸ್ಥೆ ಕಲ್ಪಿಸಲಾಗಿದೆ.

ಅಲ್ಲದೆ, ವಿಶೇಷ ವಿವಾಹಗಳ ನೋಂದಣಿ ಕಾಯಿದೆ- 1955ರಡಿ ಉಪನೋಂದಣಿ ಕಚೇರಿಗಳಲ್ಲಿ ರಿಜಿಸ್ಟರ್ಡ್‌ ಮ್ಯಾರೇಜ್‌ ಆಗುವವರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಲು ವಿಶೇಷ ವಿವಾಹಗಳ ನೋಂದಣಿ ತಂತ್ರಾಂಶವನ್ನೂ ಅಳವಡಿಸಲಾಗಿದೆ.

ರಿಜಿಸ್ಟರ್ಡ್‌ ಮ್ಯಾರೇಜ್‌ಗೆ ಆನ್‌ಲೈನ್‌ ಮೂಲಕವೇ ದಿನಾಂಕ ಮತ್ತು ಸಮಯ ನಿಗದಿಪಡಿಸಿಕೊಂಡು ನಂತರ ಕಚೇರಿಯಲ್ಲಿ ಬಂದು ವಿವಾಹವಾಗುವ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯದ ಎಲ್ಲ ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೂ ಈ ಸೌಲಭ್ಯಗಳನ್ನು ಈ ತಿಂಗಳ ಅಂತ್ಯದೊಳಗೆ ವಿಸ್ತರಿಸಲಾಗುತ್ತದೆ. ಆಧಾರ್ ದೃಢೀಕರಣವನ್ನು ನೀಡಲು ಬಯಸುವವರು ಮನೆಯಿಂದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆದರೆ, ಆಧಾರ್ ದೃಢೀಕರಣವನ್ನು ಮಾಡದಿರುವವರು ಸಬ್–ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡುವ ಮೂಲಕ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳಬಹುದು.

ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ಮಾಡಲಾಗಿದೆ. ಎಲ್ಲ ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಒದಗಿಸಿದ ನಂತರ, ಸಬ್‌ರಿಜಿಸ್ಟ್ರಾರ್ ಕಚೇರಿಗೆ ನೋಂದಣಿಗೆ ಭೇಟಿ ನೀಡಬೇಕಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕದ್ದ ಫೋನ್ ಪೋಸ್ಟ್‌ ಮೂಲಕ ಹಿಂತಿರುಗಿಸಿದರೆ ಪ್ರಕರಣ ದಾಖಲಿಸಲ್ಲ: ಪೊಲೀಸ್ ಇಲಾಖೆ

“ಈಗ ಹಿಂದೂ ವಿವಾಹ ಕಾಯಿದೆಯಡಿ ತಮ್ಮ ವಿವಾಹವನ್ನು ನೋಂದಾಯಿಸಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಬೇಕಾಗಿಲ್ಲ. ಮದುವೆಯ ಆಮಂತ್ರಣ, ವಿಡಿಯೋ, ಆಧಾರ್ ಒದಗಿಸುವ ಮೂಲಕ ಮನೆಯ ಸೌಕರ್ಯದಲ್ಲಿ ಪ್ರಮಾಣಪತ್ರವನ್ನು ರಚಿಸಲಾಗುತ್ತದೆ. ಪಾರದರ್ಶಕತೆ ಮತ್ತು ಸೇವಾ ವಿತರಣೆಯ ಕಡೆಗೆ ಇನ್ನೂ ಒಂದು ಹೆಜ್ಜೆ” ಎಂದು ಕಂದಾಯ ಸಚಿವ ಕೃಷ್ಣಬೈರೆಗೌಡ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ರಾಜ್ಯದಲ್ಲಿ ಶೇ.30ರಷ್ಟು ವಿವಾಹಗಳು ಮಾತ್ರ ನೋಂದಣಿಯಾಗುತ್ತಿವೆ. ಹಾಗಾಗಿ, ವಿವಾಹವಾಗುವ ಎಲ್ಲರೂ ತಪ್ಪದೇ ವಿವಾಹ ನೋಂದಣಿ ಮಾಡಿಸಬೇಕು. ನಮ್ಮ ಸರ್ಕಾರ ರಚನೆಯಾದ ನಂತರ ಕಂದಾಯ ಇಲಾಖೆ ಸೇವೆಗಳನ್ನು ಸರಳೀಕರಣಗೊಳಿಸಲು ಸಾಕಷ್ಟು ಸುಧಾರಣೆ ಮಾಡಲಾಗಿದೆ. ಈ ರೀತಿಯ ಜನಸ್ನೇಹಿ ಸುಧಾರಣೆಗಳು ನಿರಂತರವಾಗಿ ನಡೆಯಲಿವೆ. ಕೇವಲ ಕಂದಾಯ, ಆದಾಯ ಸಂಗ್ರಹವಷ್ಟೇ ಇಲಾಖೆಯ ಆದ್ಯತೆಯಾಗಿರದೆ, ಜನಪರ ಆಡಳಿತ ಸುಧಾರಣೆಯೂ ನಮ್ಮ ದಿಕ್ಸೂಚಿಯಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...