ಬೆಂಗಳೂರು | ಹಲ್ಲೆಗೊಳಗಾದ ಕೇರಳದ ಇಬ್ಬರು ಮಾದಕ ವಸ್ತು ಮಾರಾಟಗಾರರು

Date:

ಬೆಂಗಳೂರಿನ ಸರ್ಜಾಪುರ ರಸ್ತೆಯ ವಿಪ್ರೋ ಗೇಟ್ ಬಳಿ ಭಾನುವಾರ ಆರು ಮಂದಿಯ ತಂಡದಿಂದ ಥಳಿತಕ್ಕೊಳಗಾಗಿದ್ದ ಕೇರಳದ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ದಂಧೆಕೋರರು ಎಂದು ತಿಳಿದುಬಂದಿದೆ.

- Advertisement -

ಎಸ್ ಶಿಜು (25) ಮತ್ತು ತ್ರಿಶೂರ್‌ನ ಡೊನಾಲ್ ವಿಲ್ಸನ್ (27) ಈ ಇಬ್ಬರು ಮಾದಕ ವಸ್ತು ದಂಧೆಕೋರರು. ಮಾದಕವಸ್ತು ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದರು. ಇವರು ಮಾರಾಟ ಮಾಡಿದ ಎಂಡಿಎಂಎ ಮಾದಕ ವಸ್ತುವಿನ ಹಣವನ್ನು ಗ್ಯಾಂಗ್ ಇವರಿಗೆ ಕೊಡುವುದು ಬಾಕಿ ಇತ್ತು. ಹಣ ಕೊಡುವಂತೆ ಕೇಳಿದ್ದಕ್ಕೆ ಗ್ಯಾಂಗ್‌ ಇಬ್ಬರ ಮೇಲೆ ಹಲ್ಲೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ದಾಳಿಯ ಬಗ್ಗೆ ಸುಳಿವು ಪಡೆದ ಪೊಲೀಸರು ವಿಚಾರಣೆ ವೇಳೆ, ಕೊಲ್ಲಂ ಮೂಲದ ಎಸ್ ಶಿಜು (25) ಮತ್ತು ತ್ರಿಶೂರ್ ಡೊನಾಲ್ ವಿಲ್ಸನ್ (27) ಮಾದಕ ದ್ರವ್ಯ ದಂಧೆಕೋರರು ಎಂದು ಪತ್ತೆ ಮಾಡಿದರು. ವರ್ತೂರಿನ ಮುತ್ತಾನಲ್ಲೂರು ಕ್ರಾಸ್ ಬಳಿ ಎಂಡಿಎಂಎ ಕ್ರಿಸ್ಟಲ್‌ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ.

ದಂಧೆಕೋರರ ಮೇಲೆ ಹಲ್ಲೆ ಮಾಡಿದ ಗ್ಯಾಂಗ್‌ನವರ ವಿರುದ್ಧ ಪೊಲೀಸರು ಅವರಿಂದ ದೂರು ಪಡೆದಿದ್ದಾರೆ. ಗ್ಯಾಂಗ್‌ನಲ್ಲಿರುವವರು ಡ್ರಗ್ಸ್ ದಂಧೆಕೋರರೂ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಶಿಜು ಮತ್ತು ವಿಲ್ಸನ್ ಉದ್ಯೋಗ ಅರಸಿ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ಬಂದು ನಗರದ ವರ್ತೂರಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಅವರು ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ಕೆಲಸಕ್ಕೆ ಸೇರಿಕೊಂಡರು. ಜೀವನ ನಿರ್ವಹಣೆ ಮಾಡಲಾಗದೆ, ಮಾರತ್ತಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾದಕ ವಸ್ತು ಮಾರಾಟ ಆರಂಭಿಸಿದ್ದರು.

ವಿಚಾರಣೆ ವೇಳೆ, ಶಿಜು ಮತ್ತು ವಿಲ್ಸನ್ ತಮ್ಮ ಸ್ನೇಹಿತ ಸಂಜು ಮತ್ತು ಇತರ ಐವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ವಿಪ್ರೋ ಗೇಟ್ ಬಳಿ ಡ್ರಗ್ಸ್ ಮಾರಾಟ ಮಾಡಲು ತೆರಳಿದ್ದ ಶಿಜು ಮತ್ತು ವಿಲ್ಸನ್, ಸಂಜು ಅವರನ್ನು ನೋಡಿ ತಮ್ಮಿಂದ ಖರೀದಿಸಿದ ಎಂಡಿಎಂಎ ಕ್ರಿಸ್ಟಲ್‌ಗೆ ಹಣ ನೀಡುವಂತೆ ಕೇಳಿದ್ದಾರೆ. ಇದರಿಂದ ಕುಪಿತಗೊಂಡ ಸಂಜು ಮತ್ತು ಆತನ ಸಹಚರರು ಶಿಜು ಮತ್ತು ವಿಲ್ಸನ್ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 5,059 ಇವಿ ಚಾರ್ಜಿಂಗ್ ಸ್ಟೇಷನ್‌ಗಳೊಂದಿಗೆ ದೇಶದಲ್ಲಿಯೇ ಅಗ್ರಸ್ಥಾನಕ್ಕೇರಿದ ಕರ್ನಾಟಕ

ರವಿವಾರ ಸಂಜೆ ಸರ್ಜಾಪುರಮಾರತ್ತಹಳ್ಳಿ ರಸ್ತೆಯ ಮುತ್ತಾನಲ್ಲೂರು ಕ್ರಾಸ್ನಲ್ಲಿರುವ ಹೋಟೆಲ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶಿಜು ಮತ್ತು ವಿಲ್ಸನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 35,000 ಮೌಲ್ಯದ ಎರಡು ಗ್ರಾಂ ಎಂಡಿಎಂಎ ಕ್ರಿಸ್ಟಲ್‌ಗಳು ಮತ್ತು ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಸಂಜು ಮತ್ತು ಇತರ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...