ಬೆಂಗಳೂರು | ನಿರುದ್ಯೋಗಿ ಯುವಕರಿಗೆ ಸರ್ಕಾರಿ ಕೆಲಸ ಕೊಡಿಸೊದಾಗಿ ನಂಬಿಸಿ ವಂಚನೆ; ದಂಪತಿ ಬಂಧನ

Date:

ನಿರುದ್ಯೋಗಿ ಯುವಕರಿಗೆ ಸರ್ಕಾರಿ ಕೆಲಸ ಕೊಡಿಸೊದಾಗಿ ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಪ್ರಕಾಶ್ ಹಾಗೂ ಮಧು ಪ್ರಕಾಶ್ ಬಂಧಿತ ಆರೋಪಿಗಳು. ಇವರಿಬ್ಬರು ನಿರುದ್ಯೋಗಿ ಯುವಕರನ್ನು ಟಾರ್ಗೆಟ್‌ ಮಾಡಿ ಅವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದರು. ರಾಜಕಾರಣಿಗಳ ಪರಿಚಯವಿದೆ. ಜತೆಗೆ ನಾನಾ ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳು ಪರಿಚಯವಿದ್ದಾರೆ. ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ಕೆಲಸ ಕೊಡಿಸುತ್ತೇವೆ ಎಂದು ನಿರುದ್ಯೋಗಿ ಯುವಕರನ್ನು ನಂಬಿಸಿದ್ದಾರೆ.

ಬಳಿಕ ನಿರುದ್ಯೋಗಿ ಯುವಕರಿಂದ ಲಕ್ಷ ಲಕ್ಷ ಹಣ ಪಡೆದು ಮೋಸ ಮಾಡುತ್ತಿದ್ದರು. ಓರ್ವ ನಿರುದ್ಯೋಗಿಯಿಂದ ₹6 ಲಕ್ಷ ಹಣ ಪಡೆದು ಕೆಲಸ ಕೊಡಿಸದೇ ಸತಾಯಿಸುತ್ತಿದ್ದರು. ಈ ಆರೋಪಿಗಳ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಅಲ್ಲದೇ, ನಗರದ ಹಲವು ಠಾಣೆಗಳಲ್ಲಿ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿವಾಹೇತರ ಸಂಬಂಧ ಆರೋಪ; ಪತ್ನಿ ಮೇಲೆ ನಡುರಸ್ತೆಯಲ್ಲೇ ಹಲ್ಲೆಗೈದ ದುಷ್ಟ ಪತಿ

ಸದ್ಯ ವಿದ್ಯಾರಣ್ಯಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಲಕ್ಷ ನಗದು ಹಣ, 4 ಫೋನ್, ಒಂದು‌‌ ದ್ವಿಚಕ್ರ ವಾಹನ, 6 ಬ್ಯಾಂಕ್ ಅಕೌಂಟ್‌ಗೆ ಸೇರಿದಂತೆ 16 ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್, 11 ನಾನಾ ಕಂಪನಿಯ ವಾಚ್‌ಗಳು, ಚಿನ್ನದಂತೆ ಕಾಣುವ 2 ನಕಲಿ‌ ಬ್ರೇಸ್ ಲೈಟ್, 1 ಚೈನ್, 2 ಉಂಗುರ, 2 ಪೆಂಡೆಂಟ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆಗಾಲ ಶುರು: ಹಾವುಗಳ ಬಗ್ಗೆ ಎಚ್ಚರಿಕೆ ವಹಿಸಲು ಬಿಬಿಎಂಪಿ ಮನವಿ

ಪೂರ್ವ ಮುಂಗಾರು ಮಳೆ ಶುರುವಾದ ಬೆನ್ನಲ್ಲೇ ಈಗ ಬೆಂಗಳೂರಿನ ಜನ ವಸತಿ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...