ಬೆಂಗಳೂರು | ಅಪರಿಚಿತ ವಾಹನ ಡಿಕ್ಕಿ: ಫ್ಲೈ ಓವರ್‌ನಿಂದ ಬಿದ್ದು ಯುವಕ ಸಾವು

Date:

ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತ ಸಂಭವಿಸುತ್ತಿವೆ. ಇದೀಗ, ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಫ್ಲೈಓವರ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮುಖ್ಯ ರಸ್ತೆಯ ಮುಂಭಾಗದಲ್ಲಿರುವ ಫ್ಲೈ ಓವರ್ ಮೇಲೆ ನಡೆದಿದೆ.

- Advertisement -

ಮೃತ ಯುವಕ ಪ್ರಸಾದ್ ಎಂದು ಗುರುತಿಸಲಾಗಿದೆ. ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ರಭಸಕ್ಕೆ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಪ್ರಸಾದ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಂಬಂಧಪಟ್ಟ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೋಕಸಭೆ ಚುನಾವಣೆ | ಏ.13ರಿಂದ ಅಂಚೆ ಮತದಾನ

ಸ್ಕೂಟರ್​ಗೆ ಡಿಕ್ಕಿ ಸವಾರ ಸಾವು

ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಪ್ರಕರಣ ನಡೆದಿದ್ದು, ಅಪರಿಚಿತ ವಾಹನವೊಂದು ಸ್ಕೂಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮುಖೇಶ್ (22) ಮೃತ ದುರ್ದೈವಿ. ಏ.12ರ ರಾತ್ರಿ 9.30ರ ಸುಮಾರಿಗೆ ಬೈಕ್​ನಲ್ಲಿ ಮುಖೇಶ್ ತಮ್ಮ ಬೈಕ್ ನಲ್ಲಿ ನೈಸ್ ರಸ್ತೆಯ ಹೊಸಕೆರೆಹಳ್ಳಿ ಕಡೆಯಿಂದ ಸೋಂಪುರ ಕ್ಲವರ್ ಲೀಫ್ ಕಡೆಗೆ ತೆರಳುತ್ತಿದ್ದರು. ಈ ವೇಳೆ, ಅತಿ ವೇಗ ಮತ್ತು ನಿರ್ಲಕ್ಷತೆಯಿಂದ ಬಂದ ಅಪರಿಚಿತ ವಾಹನವೊಂದು ಮುಖೇಶ್​ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯವಾಗಿ ಮುಖೇಶ್ ಸ್ಥಳದಲ್ಲೇ ​ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ‌ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...