ಬೆಂಗಳೂರು ವಿಶ್ವವಿದ್ಯಾಲಯ | ವಾಹನ ಸಂಚಾರ ಹೆಚ್ಚಳ; ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ

Date:

Advertisements

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ದಿನದಿಂದ ದಿನಕ್ಕೆ ಸಾರ್ವಜನಿಕ ವಾಹನಗಳ ಸಂಚಾರ ಏರಿಕೆಯಾಗುತ್ತಲೇ ಇದೆ. ಇದರಿಂದ ಆವರಣದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಪಘಾತದ ಭೀತಿಯಲ್ಲಿಯೇ ಆವರಣದಲ್ಲಿ ಓಡಾಡುವಂತಾಗಿದೆ. ಈ ಹಿನ್ನೆಲೆ, ಸಾರ್ವಜನಿಕ ವಾಹನಗಳ ಓಡಾಟಕ್ಕೆ ಕಡಿವಾಣ ಹಾಕಬೇಕೆಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಲವು ಬಾರಿ ಪ್ರತಿಭಟನೆ ಮಾಡಿದ್ದಾರೆ. ಇದೀಗ, ಈ ಒತ್ತಡ ಜಾಸ್ತಿಯಾಗಿದೆ.

ಸದ್ಯ ಜ್ಞಾನಭಾರತಿ ಆವರಣದಲ್ಲಿ ವಾಹನ ಸಂಚಾರ ದಟ್ಟಣೆ ಏರಿಕೆಯಾಗಿದೆ. ವಿದ್ಯಾರ್ಥಿಗಳ ಅಪಘಾತಗಳ ಸಂಖ್ಯೆ ಸಹ ಹೆಚ್ಚಾದ ಹಿನ್ನೆಲೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ ಸಿಟಿಯ ಮಧ್ಯೆ ಇದ್ದು, ಉಲ್ಲಾಳ, ಮಲ್ಲತ್‌ಹಳ್ಳಿಯಿಂದ ನಾಗರಭಾವಿಗೆ ತೆರಳಲು ಅನುಕೂಲವಾಗಿದೆ. ಅಲ್ಲದೇ, ಮಲ್ಲತ್‌ಹಳ್ಳಿಯಿಂದ ನಾಯಂಡಹಳ್ಳಿಗೆ ತೆರಳಲು ಅನುಕೂಲಕರವಾಗಿದೆ. ಇದೀಗ, ನಾಗರಬಾವಿ ಕಡೆಯಿಂದ ವಿಶ್ವವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ನಾನಾ ಸಮಸ್ಯೆಗಳಿಗೆ ಕಾರಣವಾಗಿದೆ. ಈ ಪ್ರದೇಶದಲ್ಲಿ ಜನರ ಸಂಚಾರ ಹೆಚ್ಚಾಗಿದೆ. ಹೀಗಾಗಿ, ಅಪಘಾತ ಉಂಟಾಗುವ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಾಗಿ ಕಳವಳ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಬೇಕು. ಪರ್ಯಾಯ ವ್ಯವಸ್ಥೆ ರೂಪಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

Advertisements

ಈ ಆವರಣದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ. ಬೈಕ್, ಕಾರು, ಆಟೋ, ಬಸ್ ಸೇರಿದಂತೆ ಇನ್ನಿತರ ವಾಹನಗಳು ಕ್ಯಾಂಪಸ್‌ನಲ್ಲಿ ಸಂಚಾರ ಮಾಡುತ್ತಿವೆ. ಕ್ಯಾಂಪಸ್‌ನ ಹಾಸ್ಟೆಲ್‌ನಲ್ಲಿ ನೆಲೆಸಿರುವ ವಿದ್ಯಾರ್ಥಿಗಳು ನಿತ್ಯ ರಸ್ತೆ ದಾಟಲು ಪರದಾಡುವಂತಾಗಿದೆ.

ಈ ಸುದ್ದಿ ಓದಿದ್ದೀರಾ? ಅಯೋಧ್ಯೆ | ರಾಮಮಂದಿರದಲ್ಲಿ ಗುಂಡಿನ ಸದ್ದು; ಎಸ್​ಎಸ್​ಎಫ್ ಯೋಧ ಸಾವು

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರಕ್ಕೆ ಪತ್ರ ಬರೆದು, “ಜ್ಞಾನಭಾರತಿ ವಿವಿಯ ವಾಹನಗಳ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದು, ಸಾರ್ವಜನಿಕರಿಗೆ ಪರ್ಯಾಯ ರಸ್ತೆ ಕಲ್ಪಿಸಬೇಕು” ಎಂದು ಒತ್ತಾಯ ಮಾಡಿದ್ದಾರೆ.

ವಿದ್ಯಾರ್ಥಿಗಳ ಮನವಿ ಬಗ್ಗೆ ಬೆಂವಿವಿ ಕೂಡಾ ಗಂಭೀರವಾಗಿ ಪರಿಗಣಿಸಿದ್ದು, ಪರ್ಯಾಯ ರಸ್ತೆ ಕಲ್ಪಿಸುವ ಬಗ್ಗೆ ಕೂಡಾ ಯೋಜಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X