ಬೆಂಗಳೂರು ವಿವಿ | ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Date:

Advertisements

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟಲ್‌ವೊಂದರಲ್ಲಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ರಂಗನಾಥ್ ನಾಯಕ್ (27) ಮೃತ ವಿದ್ಯಾರ್ಥಿ. ಇವರು ಮೂಲತಃ ಚಿಕ್ಕಬಳ್ಳಾಪುರದವರು. ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟೆಲ್‌ವೊಂದರಲ್ಲಿ ನೆಲೆಸಿ ಪಿಎಚ್‌ಡಿ ವ್ಯಾಸಾಂಗ ಮಾಡುತ್ತಿದ್ದರು.

ವಿದ್ಯಾರ್ಥಿ ರಂಗನಾಥ್ ನಾಯಕ್ ಕಳೆದ ಕೆಲ ತಿಂಗಳುಗಳ ಹಿಂದೆ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದರು. ನಂತರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಆಯುರ್ವೇದಿಕ್ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

Advertisements

ಬುಧವಾರ ಬೆಳಗ್ಗೆ ಕ್ಯಾಂಟೀನ್‌ಗೆ ತೆರಳಿ ತಿಂಡಿ ತಿಂದು ರೂಮ್‌ಗೆ ಬಂದು ಡೋರ್ ಲಾಕ್ ಮಾಡಿಕೊಂಡು ಮಲಗಿದ್ದರು. ಮಧ್ಯಾಹ್ನ ರೂಮ್‌ಮೇಟ್ ಬಾಗಿಲು ಬಡಿದಾಗ ತೆಗೆದಿರಲಿಲ್ಲ. ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಡಿಮೆ ಸಮಯದಲ್ಲಿ ಝೀರೋ ಬ್ಯಾಕ್ಟೀರಿಯಲ್‌ ಸಂಸ್ಕರಿಸಿದ ನೀರು ಉತ್ಪಾದನೆ; ದೇಶೀಯ ತಂತ್ರಜ್ಞಾನ ಅಳವಡಿಕೆ

ಮೇಲ್ನೋಟಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X