ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟಲ್‌ವೊಂದರಲ್ಲಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ರಂಗನಾಥ್ ನಾಯಕ್ (27) ಮೃತ ವಿದ್ಯಾರ್ಥಿ. ಇವರು ಮೂಲತಃ ಚಿಕ್ಕಬಳ್ಳಾಪುರದವರು. ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟೆಲ್‌ವೊಂದರಲ್ಲಿ ನೆಲೆಸಿ ಪಿಎಚ್‌ಡಿ ವ್ಯಾಸಾಂಗ ಮಾಡುತ್ತಿದ್ದರು.
ವಿದ್ಯಾರ್ಥಿ ರಂಗನಾಥ್ ನಾಯಕ್ ಕಳೆದ ಕೆಲ ತಿಂಗಳುಗಳ ಹಿಂದೆ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದರು. ನಂತರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಆಯುರ್ವೇದಿಕ್ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಬುಧವಾರ ಬೆಳಗ್ಗೆ ಕ್ಯಾಂಟೀನ್‌ಗೆ ತೆರಳಿ ತಿಂಡಿ ತಿಂದು ರೂಮ್‌ಗೆ ಬಂದು ಡೋರ್ ಲಾಕ್ ಮಾಡಿಕೊಂಡು ಮಲಗಿದ್ದರು. ಮಧ್ಯಾಹ್ನ ರೂಮ್‌ಮೇಟ್ ಬಾಗಿಲು ಬಡಿದಾಗ ತೆಗೆದಿರಲಿಲ್ಲ. ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಡಿಮೆ ಸಮಯದಲ್ಲಿ ಝೀರೋ ಬ್ಯಾಕ್ಟೀರಿಯಲ್ ಸಂಸ್ಕರಿಸಿದ ನೀರು ಉತ್ಪಾದನೆ; ದೇಶೀಯ ತಂತ್ರಜ್ಞಾನ ಅಳವಡಿಕೆ
ಮೇಲ್ನೋಟಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.