ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ಮಾಡುವ ವೇಳೆ, ಬೆಂಗಳೂರಿನ ಹೆಬ್ಬಾಳ ಸಂಚಾರ ಪೊಲೀಸ್ ಸಿಬ್ಬಂದಿಗೆ ನಾಲ್ವರು ಕೀಡಿಗೇಡಿಗಳು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಘಟನೆ ನಡೆದಿದೆ.
ಕರ್ತವ್ಯನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಾಲ್ವರು ಕೀಡಿಗೇಡಿಗಳನ್ನು ಬೆಂಗಳೂರಿನ ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆದೇಶ್, ಅಬ್ದುಲ್, ಕಿರಣ್ ಹಾಗೂ ನವೀನ್ ಕುಮಾರ್ ಬಂಧಿತರು. ಬೆಂಗಳೂರಿನ ಹೆಬ್ಬಾಳ ರಿಂಗ್ ರಸ್ತೆಯ ಬಳಿ ಶನಿವಾರ ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮಾಡುತ್ತಿದ್ದರು.
ಈ ವೇಳೆ, ಕಾರಿನಲ್ಲಿ ಬಂದಿದ್ದ ನಾಲ್ವರು ಬಂಧಿತರನ್ನು ಪೊಲೀಸರು ತಡೆದು ತಪಾಸಣೆ ಮಾಡುತ್ತಿದ್ದರು. ಈ ವೇಳೆ, ಕಾರಿನ ಚಾಲಕ ನವೀನ್ ಕುಮಾರ್ ಮದ್ಯಪಾನ ಮಾಡಿರುವುದು ದೃಢವಾಗಿತ್ತು. ಕರ್ತವ್ಯನಿರತ ಸಂಚಾರ ಪೊಲೀಸರಿಗೆ ಬಂಧಿತ ನಾಲ್ವರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಫೆಬ್ರುವರಿ 6ರಿಂದ ₹29ಗೆ ಸಿಗಲಿದೆ ‘ಭಾರತ್ ಬ್ರ್ಯಾಂಡ್’ ಅಕ್ಕಿ
ಈ ಘಟನೆ ಬಳಿಕ ಸಂಚಾರ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಕೊಡಿಗೆಹಳ್ಳಿ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಕೋಡಿಗೇಹಳ್ಳಿ ಠಾಣಾ ಪೊಲೀಸರು ನಾಲ್ವರೂ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.