ಬೆಂಗಳೂರು | ಮದ್ಯ ಸೇವಿಸಿ ಕರ್ತವ್ಯನಿರತ ಪೊಲೀಸರಿಗೆ ನಿಂದನೆ: ನಾಲ್ವರ ಬಂಧನ

Date:

ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ಮಾಡುವ ವೇಳೆ, ಬೆಂಗಳೂರಿನ ಹೆಬ್ಬಾಳ ಸಂಚಾರ ಪೊಲೀಸ್ ಸಿಬ್ಬಂದಿಗೆ ನಾಲ್ವರು ಕೀಡಿಗೇಡಿಗಳು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಘಟನೆ ನಡೆದಿದೆ.

ಕರ್ತವ್ಯನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಾಲ್ವರು ಕೀಡಿಗೇಡಿಗಳನ್ನು ಬೆಂಗಳೂರಿನ ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆದೇಶ್, ಅಬ್ದುಲ್, ಕಿರಣ್ ಹಾಗೂ ನವೀನ್ ಕುಮಾರ್ ಬಂಧಿತರು. ಬೆಂಗಳೂರಿನ ಹೆಬ್ಬಾಳ ರಿಂಗ್ ರಸ್ತೆಯ ಬಳಿ ಶನಿವಾರ ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರು ಡ್ರಿಂಕ್ ಅಂಡ್​​ ಡ್ರೈವ್ ತಪಾಸಣೆ ಮಾಡುತ್ತಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ, ಕಾರಿನಲ್ಲಿ ಬಂದಿದ್ದ ನಾಲ್ವರು ಬಂಧಿತರನ್ನು ಪೊಲೀಸರು ತಡೆದು ತಪಾಸಣೆ ಮಾಡುತ್ತಿದ್ದರು. ಈ ವೇಳೆ, ಕಾರಿನ ಚಾಲಕ‌ ನವೀನ್ ಕುಮಾರ್ ಮದ್ಯಪಾನ ಮಾಡಿರುವುದು ದೃಢವಾಗಿತ್ತು. ಕರ್ತವ್ಯನಿರತ ಸಂಚಾರ ಪೊಲೀಸರಿಗೆ ಬಂಧಿತ ನಾಲ್ವರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಫೆಬ್ರುವರಿ 6ರಿಂದ ₹29ಗೆ ಸಿಗಲಿದೆ ‘ಭಾರತ್ ಬ್ರ್ಯಾಂಡ್’ ಅಕ್ಕಿ

ಈ ಘಟನೆ ಬಳಿಕ ಸಂಚಾರ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಕೊಡಿಗೆಹಳ್ಳಿ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ.

ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಕೋಡಿಗೇಹಳ್ಳಿ ಠಾಣಾ ಪೊಲೀಸರು ನಾಲ್ವರೂ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

545 ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್‌ 1...

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...