ಬೆಂಗಳೂರು | ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದರೆ ದಂಡ : ಜಲಮಂಡಳಿ ಎಚ್ಚರಿಕೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ. ಈ ಹಿನ್ನೆಲೆ, ನಗರದ ಜನತೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆದೇಶಿಸಿದೆ.

- Advertisement -

ಸಾರ್ವಜನಿಕ ಹಿತದೃಷ್ಟಿಯಿಂದ ನಿಷೇಧಿತ ಆದೇಶ ಜಾರಿ ತಂದಿರುವ ಮಂಡಳಿ ಈ ಆದೇಶ ಉಲ್ಲಂಘಿಸಿದವರಿಗೆ ದಂಡ ಹಾಕುವುದಾಗಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲ್‌ಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಹಾಗೂ ಸ್ವಚ್ಚತೆಗೆ ಬಳಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34ರ ಅನುಸಾರ ನೀಷೇಧಿಸಲಾಗಿದೆ ಎಂದು ಬಿಡಬ್ಲ್ಯೂಎಸ್ಎಸ್‌ಬಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾದ್ ಮನೋಹರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

”ಈ ನಿಷೇಧ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ₹5000 ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡದ ಮೊತ್ತ ₹5000 ಜತೆಗೆ ಹೆಚ್ಚುವರಿಯಾಗಿ ₹500 ಪ್ರತಿ ದಿನದಂತೆ ದಂಡ ಹಾಕಲಾಗುವುದು” ಎಂದು ಅವರು ಹೇಳಿದ್ದಾರೆ.

”ಸಾರ್ವಜನಿಕರಿಗೆ ಮಂಡಳಿ ನೀಡಿದ ಆದೇಶಗಳನ್ನು ಯಾರಾದರೂ ಉಲ್ಲಂಘನೆ ಮಾಡುವುದು ಕಂಡುಬಂದರೆ, ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ 1916 ಗೆ ತಿಳಿಸಬಹುದು” ಎಂದು ಅವರು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳ: ಹವಾಮಾನ ಇಲಾಖೆ ತಜ್ಞ

”ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವಿದೆ. ಇದನ್ನು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಆಗತ್ಯಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ” ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...