ಬೆಂಗಳೂರು | ಮೇ ತಿಂಗಳ ನೀರಿನ ಸಮರ್ಪಕ ಪೂರೈಕೆಗೆ ಸಜ್ಜಾಗುತ್ತಿರುವ ಜಲಮಂಡಳಿ

Date:

ಅಂತರ್ಜಲ ಕೊರತೆಯಿಂದ ಆಗಿರುವ ನೀರಿನ ಅಭಾವ ಮೇ ತಿಂಗಳಲ್ಲಿ ಹೆಚ್ಚಾದಲ್ಲಿ ಅದನ್ನ ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಜಲಮಂಡಳಿ ಈಗಿನಿಂದಲೇ ಸಜ್ಜಾಗುತ್ತಿದೆ.

- Advertisement -

ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ಅವರು ಇಂದು ಮಂಡಳಿಯ ನಾನಾ ಕೆರೆಗಳು ಹಾಗೂ ನೀರು ಸರಬರಾಜು ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಪ್ರಮುಖ ಕೆರೆಗಳಲ್ಲಿ ಒಂದಾಗಿರುವಂತಹ ಹೆಸರುಘಟ್ಟ ಕೆರೆಗೆ ಭೇಟಿ ನೀಡಿದ ಅಧ್ಯಕ್ಷರು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರಸ್ತುತ ಕೆರೆಯಲ್ಲಿ 0.3 ಟಿಎಂಸಿಗಳಷ್ಟು ನೀರಿನ ಲಭ್ಯತೆಯಿದೆ. ಅಲ್ಲದೇ, ಈ ಪ್ರದೇಶದಲ್ಲಿರುವಂತಹ ಕೊಳವೆ ಬಾವಿಗಳಲ್ಲೂ ಉತ್ತಮ ನೀರಿದೆ. ಜಲಮಂಡಳಿಯ ಹೆಸರುಘಟ್ಟ ನೀರು ಸರಬರಾಜು ಕೇಂದ್ರದ ಮೂಲಕ ನಗರಕ್ಕೆ ಪ್ರತಿ ದಿನ 10 ಎಂಎಲ್‌ಡಿ ನೀರನ್ನ ಸರಬರಾಜು ಮಾಡಬಹುದಾಗಿದೆ. ಮೇ ತಿಂಗಳಲ್ಲಿ ನೀರಿನ ಕೊರತೆ ಕಂಡು ಬಂದಲ್ಲಿ ಜಲಮಂಡಳಿಯ ನೀರು ಸರಬರಾಜು ವ್ಯವಸ್ಥೆಯ ಮೂಲಕ ಸಮರ್ಪಕವಾಗಿ ಬಳಸಿಕೊಳ್ಳಬಹುದಾಗಿದೆ.

ಕೆರೆಯಿಂದ ಲಭ್ಯವಾಗುವಂತಹ ನೀರನ್ನ ಶುದ್ದೀಕರಿಸಲು ಹೆಸರುಘಟ್ಟ ಜಲಮಂಡಳಿ ನೀರು ಸರಬರಾಜು ಕೇಂದ್ರವನ್ನು ಸಜ್ಜುಗೊಳಿಸಬೇಕು. ಯಾವ ಪ್ರದೇಶದವರೆಗೆ ಈ ನೀರನ್ನ ಪೈಪ್‌ಲೈನ್‌ಗಳ ಮೂಲಕ ತಗೆದುಕೊಂಡು ಹೋಗಬಹುದೋ ಆಯಾ ಪ್ರದೇಶಗಳವರೆಗೆ ನೀರನ್ನು ಸರಬರಾಜು ಮಾಡಬೇಕು. ಯಾವ ಪ್ರದೇಶದಲ್ಲಿ ಪೈಪ್‌ಲೈನ್‌ ವ್ಯವಸ್ಥೆ ಇಲ್ಲವೋ ಆ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ಹೆಸರುಘಟ್ಟ ಕೆರೆ ನೀರನ್ನ ಸರಬರಾಜು ಮಾಡಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವಂತಹ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧ್ಯಕ್ಷರಾದ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೇಸ್‌ಬುಕ್‌ನಲ್ಲಿ ಕಾಲ್‌ ಗರ್ಲ್‌ ಎಂದು ತನ್ನ ಪತ್ನಿಯ ಫೋಟೋ ಹಾಕಿದ ವಿಕೃತ ಪತಿ

ಈ ಸಂಧರ್ಭದಲ್ಲಿ ಜಲಮಂಡಳಿಯ ಮುಖ್ಯ ಎಂಜಿನಿಯರ್‌ ಕಾವೇರಿ ಕಾರ್ಯಾಚರಣೆ ರಾಜಶೇಖರ್‌, ಮುಖ್ಯ ಅಭಿಯಂತರರಾದ ಗಂಗಾಧರ್‌ ಮತ್ತು ದೇವರಾಜ್‌, ಸುಪರಿಂಟೆಂಡ್‌ ಎಂಜಿನಿಯರ್‌ಗಳಾದ ನಾರಾಯಣಸ್ವಾಮಿ, ಬಿಂದು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....