ಬೆಂಗಳೂರು | ಮುಖ್ಯ ರಸ್ತೆಯಲ್ಲಿ ಯುವಕನ ಅಪಾಯಕಾರಿ ವ್ಹೀಲಿಂಗ್: ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ವ್ಹೀಲಿಂಗ್ ಮಾಡುವುದು ಅಪಾಯಕಾರಿ ಎಂದು ಪೊಲೀಸರು ಎಷ್ಟೇ ಹೇಳಿದರೂ ಈ ಯುವಕರ ಹುಚ್ಚಾಟಕ್ಕೆ ಬ್ರೇಕ್ ಬಿದ್ದಿಲ್ಲ. ಇದೀಗ, ನಗರದ ಹೊಸೂರು ಹೆದ್ದಾರಿಯ ಚಂದಾಪುರ ಜಂಕ್ಷನ್ ಬಳಿ ಯುವಕನೊಬ್ಬ ಅಪಾಯಕಾರಿ ದ್ವಿಚಕ್ರ ವಾಹನದ ವ್ಹೀಲಿಂಗ್ ಮಾಡುತ್ತಿದ್ದ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

- Advertisement -

ಮಾರ್ಚ್ 13ರಂದು ಬೆಳಿಗ್ಗೆ 9:50ರ ಸುಮಾರಿಗೆ ನಗರದ ಹೊಸೂರು ರಾಷ್ಟ್ರೀಯ ಹೆದ್ದಾರಿ ಚಂದಾಪುರ ಜಂಕ್ಷನ್ ಬಳಿ ಯುವಕನೊಬ್ಬ ಈ ಅಪಾಯಕಾರಿ ವ್ಹೀಲಿಂಗ್ ಮಾಡಿದ್ದಾನೆ. ಈ ಯುವಕ ವ್ಹೀಲಿಂಗ್ ಮಾಡೋದಕ್ಕೆ ನಂಬರ್ ಫ್ಲೇಟ್ ಇಲ್ಲದ ದ್ವಿಚಕ್ರ ವಾಹನ ಬಳಕೆ ಮಾಡಿದ್ದಾನೆ. ಈತ ಪ್ರಮುಖ ರಸ್ತೆಯಲ್ಲಿ ಮುಂದೆ ವೀಲ್ಹಿಂಗ್ ಮಾಡುತ್ತಿದ್ದರೇ, ಆತನ ಇತರ ಮೂರು ಜನ ಸ್ನೇಹಿತರು ಹೆಲ್ಮೆಟ್‌ ಹಾಕದೇ ಒಂದೇ ಬೈಕ್‌ನಲ್ಲಿ ಕುಳಿತು ಆತನನ್ನು ಹಿಂಬಾಲಿಸಿ, ವಿಡಿಯೋ ಮಾಡಿದ್ದಾರೆ. ಈ ಯುವಕನ ಹುಚ್ಚಾಟವನ್ನು ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಮಹಿಳೆಯ ಅಂಗಾಂಗ ಪತ್ತೆ

ಎಕ್ಸ್‌ನ ‘ಥರ್ಡ್‌ ಐ’ ಎಂಬ ಹೆಸರಿನ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ಈ ಅಪಾಯಕಾರಿ ಸಾಹಸವನ್ನು ಮಾರ್ಚ್‌ 13ರಂದು ಬೆಳಿಗ್ಗೆ 9:50ರ ಸುಮಾರಿಗೆ ಹೊಸೂರು ರಾಷ್ಟ್ರೀಯ ಹೆದ್ದಾರಿಯ ಚಂದಾಪುರ ಜಂಕ್ಷನ್ ಬಳಿ ನಡೆಸಲಾಯಿತು. ಸ್ಟಂಟ್ ಮಾಡಿದ ಸವಾರ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದು, ಬೈಕ್ ಹಿಂಬಾಲಿಸಿಕೊಂಡು ಬಂದ ಆತನ ಸ್ನೇಹಿತರು ವಿಡಿಯೋ ಶೂಟ್ ಮಾಡಿದ್ದಾರೆ. ಅವರ ವಾಹನ ಸಂಖ್ಯೆ AP39 EC1411” ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ಈ ವಿಡಿಯೋವನ್ನು ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸರು, ಈ ಪ್ರಕರಣ ಗಮನಿಸುವಂತೆ ಬೆಂಗಳೂರು ಗ್ರಾಮಾಂತರದ ಎಸ್​ಪಿಗೆ ಟ್ಯಾಗ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...