ರಾಜ್ಯದ ನಾನಾ ಭಾಗಗಳಲ್ಲಿ ಜುಲೈ ತಿಂಗಳಿನಲ್ಲಿ ಅಬ್ಬರಿಸಿದ್ದ ಮಳೆ, ಆಗಸ್ಟ್‌ನಲ್ಲಿ ಕೈಕೊಟ್ಟಿತ್ತು. ಇದೀಗ, ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯಾಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿಯೂ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.
ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶ ಕರಾವಳಿ ಪ್ರದೇಶದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಪ್ರದೇಶ ಹಾಸನ, ಚಿಕ್ಕಮಗಳೂರು ಹಾಗೂ ಕೊಡಗಿಯಲ್ಲಿ ಉತ್ತಮ ಮಲೆಯಾಗಲಿದೆ. ಉತ್ತರ ಒಳನಾಡು ಪ್ರದೇಶಗಳಾದ ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿಯಲ್ಲೂ ಮಳೆಯಾಗಲಿದೆ ಎಂದು ಹೇಳಿದೆ.