ಬಿಬಿಎಂಪಿ | 202 ಕೆರೆಗಳ ಪೈಕಿ 159 ಕೆರೆಗಳಲ್ಲಿ ಒತ್ತುವರಿ: ಸರ್ವೇ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಸೂಚನೆ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು ಈ ಪೈಕಿ 159 ಕೆರೆಗಳಲ್ಲಿ ಒತ್ತುವರಿಯಾಗಿದೆ. ಅದರಂತೆ 140 ಕೆರೆಗಳಲ್ಲಿ ಒತ್ತುವರಿಯಾಗಿರುವ ಬಗ್ಗೆ ತಹಶೀಲ್ದಾರರಿಗೆ ಪತ್ರ ಬರೆಯಲಾಗಿದೆ. ಈ ಪೈಕಿ 40 ಕೆರೆಗಳ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, 100 ಕೆರೆಗಳಲ್ಲಿ ಸರ್ವೇ ಕಾರ್ಯ ನಡೆಸಬೇಕಿದೆ. ಉಳಿದ ಕೆರೆಗಳಲ್ಲಿ ಸರ್ವೇ ಕಾರ್ಯವನ್ನು ತ್ವರಿತವಾಗಿ ನಡೆಸಬೇಕು ಹಾಗೂ ರಾಜಕಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ ಬರೆಯಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ನಗರದಲ್ಲಿ ರಾಜಕಾಲುವೆ ಹಾಗೂ ಕೆರೆಗಳಲ್ಲಿ ಸರ್ವೇ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆಯಿದ್ದು, ಕಂದಾಯ ಇಲಾಖೆಯ ಅಡಿ ಬರುವ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಗೆ ಪತ್ರ ಬರೆದು ಹೆಚ್ಚು ಭೂಮಾಪಕರನ್ನು ನಿಯೋಜನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

“ನಗರದಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಸರ್ವೇ ನಡೆಸಿ ಮಾರ್ಕ್ ಮಾಡಿ, ತಹಶೀಲ್ದಾರ್ ಅವರಿಂದ ಆದೇಶಗಳನ್ನು ಜಾರಿ ಮಾಡಿರುವಂತಹ ಒತ್ತುವರಿಗಳನ್ನು ಕೂಡಲೇ ತೆರವುಗೊಳಿಸಬೇಕು. ಉಚ್ಚ ನ್ಯಾಯಾಲಯದಲ್ಲಿ ತಡೆಯಾಜ್ಞೆಯಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿಕೊಂಡು ತೆರವು ಕಾರ್ಯಾಚರಣೆ ನಡೆಸಬೇಕು” ಎಂದು ಸೂಚನೆ ನೀಡಿದರು.

Advertisements

“ನಿಗದಿತ ಸಮಯದಲ್ಲಿ ಕೆರೆ ಹಾಗೂ ರಾಜಕಾಲುವೆ ಒತ್ತುವರಿಗಳನ್ನು ಗುರುತಿಸಲು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ. ಒತ್ತುವರಿಗಳನ್ನು ಗುರುತಿಸಿದ ನಂತರ ತಹಶೀಲ್ದಾರ್ ಅವರು ಒತ್ತುವರಿದಾರರಿಗೆ ಆದೇಶಗಳನ್ನು ನೀಡಿದ ಬಳಿಕ ಪಾಲಿಕೆ ಹಾಗೂ ಕಂದಾಯ ಇಲಾಖೆಯು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು” ಎಂದರು.

75 ಒತ್ತುವರಿ ತೆರವುಗೊಳಿಸಿರುವ ವಿವರ

ಬೆಂಗಳೂರಿನಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆ ಪ್ರಕ್ರಿಯೆ ಸಕ್ರಿಯವಾಗಿ ನಡೆಯುತ್ತಿದ್ದು, ಕಳೆದ 15 ದಿನಗಳಲ್ಲಿ ಮಹದೇವಪುರ ವ್ಯಾಪ್ತಿಯಲ್ಲಿ ಬರುವ ಎಬಿಕೆ, ಗುಂಜೂರು, ಕರಿಯಮ್ಮನ ಅಗ್ರಹಾರ, ಬೆಳ್ಳತ್ತೂರಿನಲ್ಲಿ ಹಾಗೂ ಕೆ.ಆರ್.ಪುರದ ಸರ್ವೇ ಸಂಖ್ಯೆ 69ರಲ್ಲಿ ಬರುವ 3 ಅಂತಸ್ತಿನ ಕಟ್ಟಡದಲ್ಲಿ ಬರುವ 10 ಮಳಿಗೆಗಳು ಸೇರಿದಂತೆ 62 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಇನ್ನು ಯಲಹಂಕ ವಲಯ ವ್ಯಾಪ್ತಿಯಲ್ಲಿ 8 ಒತ್ತುವರಿಗಳು ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ 5 ಒತ್ತುವರಿಗಳು ಸೇರಿದಂತೆ ಒಟ್ಟು 75 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದೆ.

ರಾಜಕಾಲುವೆ ಒತ್ತುವರಿ ವಿವರ

ನಗರದಲ್ಲಿ ಹೊಸ ಒತ್ತುವರಿಗಳು ಸೇರಿದಂತೆ 3,176 ಒತ್ತುವರಿಗಳನ್ನು ಗುರುತಿಸಲಾಗಿದ್ದು, 2,322 ಒತ್ತುವರಿಗಳನ್ನು ಇದುವರೆಗೆ ತೆರವುಗೊಳಿಸಲಾಗಿದೆ. ಇನ್ನು 854 ಒತ್ತುವರಿಗಳನ್ನು ತೆರವುಗೊಳಿಸಬೇಕಾಗಿದ್ದು, ಈ ಪೈಕಿ 155 ಒತ್ತುವರಿ ಪ್ರಕರಣಗಳು ನ್ಯಾಯಾಲಯದಲ್ಲಿವೆ. 487 ಒತ್ತುವರಿಗಳಿಗೆ ಆದೇಶಗಳನ್ನು ಜಾರಿಗೊಳಿಸುವ ಹಂತದಲ್ಲಿದೆ. ಇನ್ನು 162 ಒತ್ತುವರಿಗಳಿಗೆ ತಹಶೀಲ್ದಾರರಿಂದ ಆದೇಶಗಳನ್ನು ಜಾರಿಗೊಳಿಸಲಾಗಿದೆ. ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕಿದೆ ಎಂದು ರಾಜಕಾಲುವೆ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಪ್ರತಾಪ್‌ ಸಿಂಹರನ್ನು ಉಚ್ಚಾಟನೆ ಮಾಡಲಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಎಎಪಿ ಒತ್ತಾಯ

ಕೆರೆಗಳ ಒತ್ತುವರಿ ಸರ್ವೇ ಕಾರ್ಯ ತ್ವರಿತವಾಗಿ ನಡೆಸಿ

ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು, 159 ಕೆರೆಗಳಲ್ಲಿ ಒತ್ತುವರಿಯಾಗಿದೆ ಎಂಬುದನ್ನು ಗುರುತಿಸಲಾಗಿದೆ. ಅದರಂತೆ 140 ಕೆರೆಗಳಲ್ಲಿ ಒತ್ತುವರಿಯಾಗಿರುವ ಬಗ್ಗೆ ತಹಶೀಲ್ದಾರರಿಗೆ ಪತ್ರಗಳನ್ನು ಬರೆಯಲಾಗಿದೆ. ಈ ಪೈಕಿ 40 ಕೆರೆಗಳ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, 100 ಕೆರೆಗಳಲ್ಲಿ ಸರ್ವೇ ಕಾರ್ಯ ನಡೆಸಬೇಕಿದೆ. ಉಳಿದ ಕೆರೆಗಳಲ್ಲಿ ಸರ್ವೇಕಾರ್ಯವನ್ನು ತ್ವರಿತವಾಗಿ ನಡೆಸಲು ಸೂಚನೆ ನೀಡಿದರು.

ಸಭೆಯಲ್ಲಿ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಬಿಎಂಟಿಎಫ್ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಡಾ. ವಿ.ಜೆ ಶೋಭಾ ರಾಣಿ(IPS), ಎಲ್ಲಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಇಂಜಿನಿಯರಿಂಗ್ ವಿಭಾಗದ ಪ್ರಧಾನ ಅಭಿಯಂತರರು, ವಲಯ ಮುಖ್ಯ ಅಭಿಯಂತರರು, ರಾಜಕಾಲುವೆ ವಿಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರ್ ಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X