ಬಿಬಿಎಂಪಿ | ಕೆರೆ ಮಿತ್ರ ಮತ್ತು ಹಸಿರು ಮಿತ್ರರಾಗಿ ನೋಂದಾಯಿಸಿಕೊಳ್ಳಲು ಅವಧಿ ವಿಸ್ತರಣೆ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ಕೆರೆಗಳು ಮತ್ತು ಉದ್ಯಾನವನಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನಡೆಸಲು ಆಸಕ್ತಿವುಳ್ಳ ಬೆಂಗಳೂರಿನ ನಾಗರಿಕರನ್ನು ‘ಕೆರೆ ಮಿತ್ರ’ ಹಾಗೂ ‘ಹಸಿರು ಮಿತ್ರ’ರಾಗಿ ಪಾಲಿಕೆಯ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳುವ ಅವಧಿಯನ್ನು ಫೆಬ್ರುವರಿ 12ರವರೆಗೆ ವಿಸ್ತರಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, “ಬೆಂಗಳೂರಿನ ನಿವಾಸಿಗಳು ಅವರು ವಾಸವಿರುವ ವಾರ್ಡ್ ಅಥವಾ ಸಮೀಪದಲ್ಲಿರುವ ಕೆರೆ ಅಥವಾ ಉದ್ಯಾನವನಕ್ಕೆ ಆಸಕ್ತಿ ಇದ್ದಲ್ಲಿ ಕೆರೆ ನಿರ್ವಹಣೆ ಬಗ್ಗೆ ಪ್ರತಿನಿತ್ಯ ಪರಿಶೀಲಿಸಿ, ಅಂತರ್ಜಾಲದಲ್ಲಿ ವಿವರಗಳನ್ನು ದಾಖಲಿಸುವ ಮೂಲಕ ಸಾರ್ವಜನಿಕರ ಅವಶ್ಯಕತೆ ಹಾಗೂ ಕೆರೆ ಮತ್ತು ಉದ್ಯಾನವನಗಳ ಆಗು-ಹೋಗುಗಳನ್ನು ಇನ್ನೂ ಉತ್ತಮವಾಗಿ ನಿಗಾವಹಿಸಲು ಅನುವು ಮಾಡಿಕೊಳ್ಳುವ ಉದ್ದೇಶವಾಗಿದೆ” ಎಂದು ಹೇಳಿದೆ.

“https://www.bbmp.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಕೆರೆ ಮಿತ್ರ ಹಾಗೂ ಹಸಿರು ಮಿತ್ರ ಆಗಿ ನೋಂದಾಯಿಸಿಕೊಳ್ಳಬಹುದು. ಜನವರಿ 31ರ ಬದಲಾಗಿ ಫೆಬ್ರುವರಿ 12ರ ಸಂಜೆ 5 ಒಳಗಡೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

Advertisements

“ಈ ಅವಕಾಶವನ್ನು ನಾಗರಿಕರು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿನಿಧಿಗಳು ಸದುಪಯೋಗಪಡಿಸಿಕೊಳ್ಳಿ” ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ರವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಮಹಿಳೆಯರ ಜತೆಗೆ ಅಸಭ್ಯ ವರ್ತನೆ/ಲೈಂಗಿಕ ಕಿರುಕುಳಕ್ಕೆ 10 ಸಾವಿರ ದಂಡ, ಕಾನೂನು ಕ್ರಮ

ಕೆರೆ ಮಿತ್ರ ಹಾಗೂ ಹಸಿರು ಮಿತ್ರರಾಗಲು ನೋಂದಾಯಿಸಿಕೊಳ್ಳಿ

“ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕೆರೆಗಳು ಮತ್ತು ಉದ್ಯಾನವನಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನೆಡೆಸಲು ಆಸಕ್ತಿವುಳ್ಳ ಬೆಂಗಳೂರಿನ ನಾಗರಿಕರು ‘ಕೆರೆ ಮಿತ್ರ’ರಾಗಿ https://keremithra.bbmpgov.in/registration ಹಾಗೂ ‘ಹಸಿರು ಮಿತ್ರ’ ರಾಗಿ https://hasirumithra.bbmpgov.in/registration ಲಿಂಕ್‌ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X