ಕೋಟ್ಯಾಂತರ ರೂಪಾಯಿ ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ

Date:

Advertisements

₹51 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ, ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀಗ ಜಡಿದಿದೆ.

ಬಾಕಿ ಉಳಿಸಿಕೊಂಡಿದ್ದ ತೆರಿಗೆ ಹಣವನ್ನು ಒಂದು ಬಾರಿ ಪೂರ್ತಿ ಪಾವತಿ ಮಾಡುವಂತೆ ಮಂತ್ರಿಮಾಲ್‌ಗೆ ಬಿಬಿಎಂಪಿ ತಾಕೀತು ಮಾಡಿತ್ತು. ಅಲ್ಲದೇ, ಸಮಯಾವಕಾಶ ಕೂಡ ನೀಡಿತ್ತು. ಆದರೆ, ಈ ಮದ್ಯೆ ಮತ್ತೆ ಮಾಲ್‌ ₹32 ಕೋಟಿ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆ, ಬಿಬಿಎಂಪಿ ಕ್ರಮಕ್ಕೆ ಮುಂದಾಗಿದೆ.

ಶನಿವಾರ ವಾರಾಂತ್ಯದ ದಿನವಾಗಿರುವುದರಿಂದ ಮಂತ್ರಿ ಮಾಲ್‌ ವಹಿವಾಟು ಹೆಚ್ಚಾಗಿರುತ್ತದೆ. ಆದರೆ, ವಾರಾಂತ್ಯದ ದಿನವೇ ಮಾಲ್‌ನ ಮುಖ್ಯ ದ್ವಾರಗಳಿಗೆ ಬೀಗ ಹಾಕುವ ಮೂಲಕ ಬಿಬಿಎಂಪಿ ಮಂತ್ರಿ ಮಾಲ್‌ಗೆ ಬಿಸಿ ಮುಟ್ಟಿಸಿದೆ.

Advertisements

ಈ ಹಿಂದೆಯೂ ಮಂತ್ರಿ ಮಾಲ್‌ ಹಲವು ಬಾರಿ ತೆರಿಗೆ ಬಾಕಿ ಉಳಿಸಕೊಂಡು ನಿರ್ಬಂಧಕ್ಕೊಳಗಾಗಿತ್ತು. ಮಾರ್ಚ್‌ 16ರ ಮುಂಜಾನೆಯೇ ಮಾಲ್​ಗೆ ಬೀಗ ಹಾಕಲಾಗಿದ್ದು, ಲೈಸೆನ್ಸ್​ ರದ್ದು​​​ ಮಾಡಲಾಗಿದೆ.

ಈ ಹಿಂದೆಯೂ ಅನೇಕ ಬಾರಿ ತೆರಿಗೆ ವಿಚಾರವಾಗಿ ಮಂತ್ರಿ ಮಾಲ್‌ಗೆ ಬೀಗ ಹಾಕಲಾಗಿತ್ತು. ಇದೀಗ, ಮತ್ತೆ ಶನಿವಾರ ಮುಂಜಾನೆ ಬಿಬಿಎಂಪಿ ಅಧಿಕಾರಿಗಳು, ಮಾರ್ಷಲ್ ಹಾಗೂ ಪೊಲೀಸರ ಬಿಗಿ ಭದ್ರತೆಯಲ್ಲಿ ಮಾಲ್ ಮುಖ್ಯ ಪ್ರವೇಶ ದ್ವಾರಕ್ಕೆ ಬೀಗ ಹಾಕಿದ್ದಾರೆ. ಜತೆಗೆ, ನೋಟಿಸ್ ಕೂಡ ಅಂಟಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾನವ ಕಳ್ಳಸಾಗಣೆ ಆರೋಪ; ಎನ್‌ಸಿಪಿಸಿಆರ್‌ ದಾಳಿ ವೇಳೆ 20 ಬಾಲಕಿಯರು ಪತ್ತೆ

ಬಿಬಿಎಂಪಿ ಕಾಯ್ದೆ 2020ರ ಕಲಂ 156 ಹಾಗೂ ದಿನಾಂಕ 2023ರ ಡಿಸೆಂಬರ್ 6ರ ಸುತ್ತೊಲೆಯಂತೆ, ನಿಮ್ಮ ವ್ಯಾಪಾರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಬಿಬಿಎಂಪಿ ಆದೇಶ ಮೇರೆಗೆ ಬಾಕಿ ಆಸ್ತಿ ತೆರಿಗೆಗಳನ್ನು ಪಾವತಿಸದ ಕಾರಣಕ್ಕಾಗಿ ಆಸ್ತಿಯನ್ನು ಸೀಲ್ ಮಾಡಲಾಗಿದೆ ಎಂದು ಬ್ಯಾನರ್ ಅಳಡಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X