ಬಿಬಿಎಂಪಿ | ಫ್ರೀಡಂ ಪಾರ್ಕ್ ಪಾರ್ಕಿಂಗ್ ಸೌಲಭ್ಯ ನಿರ್ವಹಣೆ ಗುತ್ತಿಗೆ ಪಡೆದ ಕೆಂಗೇರಿ ಸಂಸ್ಥೆ

Date:

Advertisements

ಬೆಂಗಳೂರಿನ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್ನಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ (ಎಂಎಲ್ಸಿಪಿ) ಸೌಲಭ್ಯವನ್ನು ನಿರ್ವಹಿಸುವ ಗುತ್ತಿಗೆಯನ್ನು ಕೆಂಗೇರಿ ಮೂಲದ ಸಂಸ್ಥೆಯೊಂದು ಪಡೆದುಕೊಂಡಿದೆ.

ಕಂಪನಿಯು ವಾರ್ಷಿಕ ₹1.55 ಕೋಟಿ ಹಣವನ್ನು ಪಾಲಿಕೆಗೆ ಪಾವತಿಸಲಿದೆ. ಈ ಯೋಜನೆಗೆ ಹಾಕಿದ ಹೂಡಿಕೆಯನ್ನು ಬಿಬಿಎಂಪಿ ಮರುಪಡೆಯಲು ಸುಮಾರು 50 ವರ್ಷಗಳನ್ನು ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಆಗಸ್ಟ್ 2022ರಲ್ಲಿ ನೋಂದಾಯಿಸಲಾದ ಪ್ರಿನ್ಸ್ರಾಯಲ್ ಪಾರ್ಕಿಂಗ್ ಸೊಲ್ಯೂಷನ್ ಬ್ಯುಸಿನೆಸ್ ಪ್ರೈವೇಟ್ ಲಿಮಿಟೆಡ್ಗೆ ಬಿಬಿಎಂಪಿ ಕಾರ್ಯಾಚರಣೆ ಮತ್ತು ನಿರ್ವಹಣೆ ಕರ್ತವ್ಯಗಳನ್ನು ವಹಿಸಿದೆ.

Advertisements

ಈ ಪಾರ್ಕಿಂಗ್‌ ಯೋಜನೆಗೆ ಗುತ್ತಿಗೆದಾರರನ್ನು ಪಡೆಯಲು ಬಿಬಿಎಂಪಿ ಏಳು ಬಾರಿ ವಿಫಲಗೊಂಡಿದೆ. ಕೊನೆಯದಾಗಿ ಇದೀಗ, ಗುತ್ತಿಗೆದಾರರನ್ನು ಪಡೆದುಕೊಳ್ಳುವಲ್ಲಿ ಬಿಬಿಎಂಪಿ ಅಧಿಕಾರಿಗಳು ಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೌಲಭ್ಯದ ಸುತ್ತಮುತ್ತಲಿನ ರಸ್ತೆಗಳನ್ನು ನೋಪಾರ್ಕಿಂಗ್ ವಲಯಗಳಾಗಿ ಸೂಚಿಸುವಂತೆ ನಗರ ಸಂಚಾರ ಪೊಲೀಸರಿಗೆ ವಿನಂತಿಸಿದ್ದೇವೆಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿನ ಕೊರತೆಯಿಂದ ಒಣಗುತ್ತಿರುವ ಧೋಬಿ ಘಾಟ್‌ಗಳು

ಫ್ರೀಡಂ ಪಾರ್ಕ್ನಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ (ಎಂಎಲ್ಸಿಪಿ) ಅನ್ನು ₹80 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಗುತ್ತಿಗೆದಾರರನ್ನು ಹುಡುಕಲು ಬಿಬಿಎಂಪಿ ಅಸಮರ್ಥತೆಯಿಂದಾಗಿ ನವೆಂಬರ್ 2021ರಿಂದ ಈ ಪಾರ್ಕಿಂಗ್ ನಿಷ್ಕ್ರಿಯವಾಗಿದೆ.

ಸೆಂಟ್ರಲ್ ಕಾಲೇಜು ಮೆಟ್ರೋ ನಿಲ್ದಾಣದಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಸೌಲಭ್ಯವು ಏಕಕಾಲದಲ್ಲಿ 556 ನಾಲ್ಕುಚಕ್ರ ವಾಹನಗಳು ಮತ್ತು 445 ದ್ವಿಚಕ್ರ ವಾಹನಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X