ಬಿಬಿಎಂಪಿ | ಫ್ರೀಡಂ ಪಾರ್ಕ್ ಪಾರ್ಕಿಂಗ್ ಸೌಲಭ್ಯ ನಿರ್ವಹಣೆ ಗುತ್ತಿಗೆ ಪಡೆದ ಕೆಂಗೇರಿ ಸಂಸ್ಥೆ

Date:

ಬೆಂಗಳೂರಿನ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ (ಎಂಎಲ್‌ಸಿಪಿ) ಸೌಲಭ್ಯವನ್ನು ನಿರ್ವಹಿಸುವ ಗುತ್ತಿಗೆಯನ್ನು ಕೆಂಗೇರಿ ಮೂಲದ ಸಂಸ್ಥೆಯೊಂದು ಪಡೆದುಕೊಂಡಿದೆ.

- Advertisement -

ಕಂಪನಿಯು ವಾರ್ಷಿಕ ₹1.55 ಕೋಟಿ ಹಣವನ್ನು ಪಾಲಿಕೆಗೆ ಪಾವತಿಸಲಿದೆ. ಈ ಯೋಜನೆಗೆ ಹಾಕಿದ ಹೂಡಿಕೆಯನ್ನು ಬಿಬಿಎಂಪಿ ಮರುಪಡೆಯಲು ಸುಮಾರು 50 ವರ್ಷಗಳನ್ನು ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಆಗಸ್ಟ್ 2022ರಲ್ಲಿ ನೋಂದಾಯಿಸಲಾದ ಪ್ರಿನ್ಸ್‌ರಾಯಲ್ ಪಾರ್ಕಿಂಗ್ ಸೊಲ್ಯೂಷನ್ ಬ್ಯುಸಿನೆಸ್ ಪ್ರೈವೇಟ್ ಲಿಮಿಟೆಡ್‌ಗೆ ಬಿಬಿಎಂಪಿ ಕಾರ್ಯಾಚರಣೆ ಮತ್ತು ನಿರ್ವಹಣೆ ಕರ್ತವ್ಯಗಳನ್ನು ವಹಿಸಿದೆ.

ಈ ಪಾರ್ಕಿಂಗ್‌ ಯೋಜನೆಗೆ ಗುತ್ತಿಗೆದಾರರನ್ನು ಪಡೆಯಲು ಬಿಬಿಎಂಪಿ ಏಳು ಬಾರಿ ವಿಫಲಗೊಂಡಿದೆ. ಕೊನೆಯದಾಗಿ ಇದೀಗ, ಗುತ್ತಿಗೆದಾರರನ್ನು ಪಡೆದುಕೊಳ್ಳುವಲ್ಲಿ ಬಿಬಿಎಂಪಿ ಅಧಿಕಾರಿಗಳು ಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸೌಲಭ್ಯದ ಸುತ್ತಮುತ್ತಲಿನ ರಸ್ತೆಗಳನ್ನು ನೋ–ಪಾರ್ಕಿಂಗ್ ವಲಯಗಳಾಗಿ ಸೂಚಿಸುವಂತೆ ನಗರ ಸಂಚಾರ ಪೊಲೀಸರಿಗೆ ವಿನಂತಿಸಿದ್ದೇವೆ” ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿನ ಕೊರತೆಯಿಂದ ಒಣಗುತ್ತಿರುವ ಧೋಬಿ ಘಾಟ್‌ಗಳು

ಫ್ರೀಡಂ ಪಾರ್ಕ್‌ನಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ (ಎಂಎಲ್‌ಸಿಪಿ) ಅನ್ನು ₹80 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಗುತ್ತಿಗೆದಾರರನ್ನು ಹುಡುಕಲು ಬಿಬಿಎಂಪಿ ಅಸಮರ್ಥತೆಯಿಂದಾಗಿ ನವೆಂಬರ್ 2021ರಿಂದ ಈ ಪಾರ್ಕಿಂಗ್ ನಿಷ್ಕ್ರಿಯವಾಗಿದೆ.

ಸೆಂಟ್ರಲ್ ಕಾಲೇಜು ಮೆಟ್ರೋ ನಿಲ್ದಾಣದಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಈ ಸೌಲಭ್ಯವು ಏಕಕಾಲದಲ್ಲಿ 556 ನಾಲ್ಕು–ಚಕ್ರ ವಾಹನಗಳು ಮತ್ತು 445 ದ್ವಿಚಕ್ರ ವಾಹನಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...