ಬಿಬಿಎಂಪಿ | ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ

Date:

Advertisements

ಕಳೆದ ಹಲವು ದಿನಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಾದಚಾರಿ ಮಾರ್ಗ ಒತ್ತುವರಿ ತೆರುವು ಕಾರ್ಯಾಚರಣೆ ನಡೆಸುತ್ತಿದ್ದು, ಶನಿವಾರವೂ ಈ ಕಾರ್ಯಾಚರಣೆ ಮುಂದುವರೆದಿದೆ.

ಪೂರ್ವ ವಲಯ

ಪೂರ್ವ ವಲಯದ ಇಂದಿರಾನಗರ 100 ಅಡಿ ರಸ್ತೆ ಮತ್ತು ಸಿ.ಎಂ.ಹೆಚ್ ರಸ್ತೆಯಲ್ಲಿ ಯೋಜನಾ ವಿಭಾಗದಿಂದ ಕೈಗೊಂಡಿರುವ ವೈಟ್ ಟಾಪಿಂಗ್ ರಸ್ತೆಯ ಪಾದಚಾರಿ ಮಾರ್ಗಗಳಲ್ಲಿ ಮಾಡಿಕೊಂಡಿದ್ದ ಒತ್ತುವರಿಯನ್ನು ತೆರವುಗೊಳಿಸಿ ಇನ್ನು ಮುಂದೆ ಒತ್ತುವರಿ ಮಾಡಿಕೊಳ್ಳದಂತೆ ಬೀದಿಬದಿ ವ್ಯಾಪಾರಸ್ಥರಿಗೆ ಪಾಲಿಕೆ ಎಚ್ಚರಿಕೆ ನೀಡಿದೆ.

Advertisements

ಶನಿವಾರ ನಡೆಸಿದ ತಪಾಸಣೆಯಲ್ಲಿ ಇಂದಿರಾನಗರ 100 ಅಡಿ ರಸ್ತೆ ಮತ್ತು ಸಿ.ಎಂ.ಹೆಚ್ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಅಳವಡಿಸಿದ್ದ ತಾತ್ಕಾಲಿಕ ನಾಮಫಲಕಗಳು, ಅಂಗಡಿಗಳನ್ನು ತೆರವುಗೊಳಿಸಿ ಇನ್ನುಮುಂದೆ ಪಾದಚಾರಿ ಮಾರ್ಗ ಒತ್ತುವರಿ ಮಾಡದಂತೆ ಸೂಚನೆ ನೀಡಲಾಗಿದೆ.

ಇನ್ನು ಕೆಲವೆಡೆ ಹೋಟೆಲ್, ಕಾರ್ ಶೋರೂಮ್ ಮುಂಭಾಗ ಪಾದಚಾರಿ ಮಾರ್ಗಕ್ಕೆ ಹೊಂದಿಕೊಂಡಂತೆ ಕಾಂಕ್ರಿಂಟ್ ರ‍್ಯಾಂಪ್ ಅನ್ನು ನಿರ್ಮಿಸಿದ್ದು, ಅದನ್ನು ಸ್ಥಳದಲ್ಲೇ ಜೆಸಿಬಿಯ ಮೂಲಕ ತೆರವುಗೊಳಿಸಲಾಗಿದೆ. ಅದಲ್ಲದೆ ಆಸ್ಪತ್ರೆಯ ಮುಂಭಾಗ ಸ್ಟೀಲ್ ರ‍್ಯಾಂಪ್ ಅಳವಡಿಸಿದ್ದು, ಅದನ್ನು ಅವಶ್ಯಕತೆಯಿರುವಾಗ ಮಾತ್ರ ಅಳವಡಿಸಿಕೊಳ್ಳಲು ಸೂಚನೆ ನೀಡಿದೆ.

ಕಲ್ಟ್ ಫಿಟ್ ಬಳಿ ಶಾಶ್ವತ ನಾಮಫಲಕ ಅಳವಡಿಸಿದ್ದು, ಅದನ್ನು ಸ್ಥಳದಲ್ಲೇ ತೆರವುಗೊಳಿಸಲಾಗಿದೆ. ಇನ್ನು ಬಹುತೇಕ ಕಡೆ ಪಾದಚಾರಿ ಮಾರ್ಗಗಳಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿದ್ದು, ಇನ್ನು ಮುಂದೆ ಪಾದಚಾರಿ ಮಾರ್ಗಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡದಂತೆ ನೋಡಿಕೊಳ್ಳಲು ಮಳಿಗೆಗಳ ಸಿಬ್ಬಂದಿಗೆ ಎಚ್ಚರಿಕೆ ನೀಡಿದೆ.

ತೆರವು ಕಾರ್ಯಾಚರಣೆಯ ವೇಳೆ ಯೋಜನಾ ವಿಭಾಗದ ಮುಖ್ಯ ಅಭಿಯಂತರರಾದ ಲೋಕೇಶ್, ಅಧೀಕ್ಷಕ ಅಭಿಯಂತರರಾದ ಹೇಮಲತಾ ಸೇರಿದಂತೆ ಇನ್ನಿತರರು ಇದ್ದರು.

ದಕ್ಷಿಣ ವಲಯ

ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಚಿಕ್ಕಪೇಟೆಯ ಸಿದ್ದಯ್ಯ ರಸ್ತೆ ಪಾದಚಾರಿ ಮಾರ್ಗದಲ್ಲಿ ಅನುಪಯುಕ್ತ ವಸ್ತುಗಳನ್ನು ಆಯಾ ಮಳಿಗೆಗಳ ಮುಂಭಾಗ ಹಾಕಲಾಗಿದ್ದು, ಇದರಿಂದ ಪಾದಚಾರಿಗಳ ಓಡಾಟಕ್ಕೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಈ ಪೈಕಿ ಕೂಡಲೆ ಎಲ್ಲ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಮುಂದಿನ ದಿನಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಿಚಾಯಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿದ ಆರೋಪಿಗಳ ಬಂಧನ

ಪಶ್ಚಿಮ ವಲಯ

ಗಾಂಧಿನಗರದ ಅವೆನ್ಯೂ ರಸ್ತೆ ಮೈಸೂರು ಬ್ಯಾಂಕ್ ಬಳಿಯ ಕೃಷ್ಣ ಬಿಲ್ಡಿಂಗ್ ಮುಂಭಾಗ ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ಪುಸ್ತಕಗಳು ಸೇರಿದಂತೆ ಇನ್ನಿತರ ವ್ಯಾಪಾರ ಮಾಡುತ್ತಿರುವವರನ್ನು ತೆರವುಗೊಳಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

Download Eedina App Android / iOS

X