ಬಿಬಿಎಂಪಿ | ₹85 ಕೋಟಿ ಮೌಲ್ಯದ ಆಸ್ತಿ ಒತ್ತುವರಿ ತೆರವು

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಯಲಹಂಕದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ 2.75 ಎಕರೆ ಪ್ರದೇಶದ ₹85 ಕೋಟಿ ಮೌಲ್ಯದ ಆಸ್ತಿಯನ್ನು ಕಾರ್ಯಾಚರಣೆ ನಡೆಸಿ ಪಾಲಿಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಯಲಹಂಕ ವಲಯ ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋತಿಹೊಸಹಳ್ಳಿ ಗ್ರಾಮದ ಸರ್ವೇ ಸಂಖ್ಯೆ 52ರಲ್ಲಿ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿದ್ದರು. ಈ ಆಸ್ತಿ ಸುಮಾರು ₹85 ಕೋಟಿ ಮೌಲ್ಯದಾಗಿದೆ. ಈ ಪಾಲಿಕೆಯ ಜಾಗದಲ್ಲಿ ಕೆಲವು ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡು ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದರು.

ಫೆ.13 ರಂದು ಬಿಬಿಎಂಪಿಯ ಯಲಹಂಕ ವಲಯದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಯ ಸಹಯೋಗದೊಂದಿಗೆ ತೆರವು ಕಾರ್ಯಾಚರಣೆಯನ್ನು ನಡೆದಿದ್ದಾರೆ.

4 ಜೆಸಿಬಿ, 6 ಟಿಪ್ಪರ್‌, 12 ಟ್ರಾಕ್ಟರ್‌, 140 ಪೊಲೀಸ್ ಸಿಬ್ಬಂದಿ, 70 ಜನ ಕಾರ್ಮಿಕರು ಮತ್ತು ಗ್ಯಾಂಗ್‌ಮನ್‌ಗಳ ಸಹಾಯದೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ, ಸುಮಾರು 2.755 ಎಕರೆ (120000.00 ಚದರ ಅಡಿಗಳ ಆಸ್ತಿ) ಜಾಗದ ಸುಮಾರು ₹85 ಕೋಟಿ ಪಾಲಿಕೆ ಸ್ವತ್ತನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಯೋಧ್ಯೆಗೆ ಮೆಮು ರೈಲು ರವಾನೆ; ಕೋಲಾರ ಜನರ ಪರದಾಟ

”ಪಾಲಿಕೆ ವಶಕ್ಕೆ ಪಡೆದ ನಂತರ ಸಂಪೂರ್ಣ ಜಾಗಕ್ಕೆ ಚೈನ್‌ಲಿಂಕ್ ಫೆನ್ಸಿಂಗ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ತ್ವರಿತಗತಿಯಲ್ಲಿ ಫೆನ್ಸಿಂಗ್ ಕಾರ್ಯವನ್ನು ಪೂರ್ಣಗೊಳಿಸಲಾಗುವುದು” ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X