ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಪೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದ ಪ್ರಿಯಾ ಎಕ್ಸ್‌ಪೋರ್ಟ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಅಥಣಿ ಶಾಸಕ ಲಕ್ಷ್ಮಣ್ ಸವದಿ ಮತ್ತು ಸಾಂಗಲಿ ಉದ್ಯಮಿಯೊಬ್ಬರ ಸಹಭಾಗಿತ್ವದಲ್ಲಿ ಈ ಕಾರ್ಖಾನೆಯು ನಡೆಯುತ್ತಿದೆ. ಮೆಕ್ಕೆಜೋಳ ಪಾಲಿಷ್ ಮಾಡಿ, ವಿದೇಶಗಳಿಗೆ ಎಕ್ಸ್‌ಪೋರ್ಟ್ ಮಾಡುವ ಕಾರ್ಖಾನೆಯಾಗಿದೆ.
ಶೋಭಾ ತೇಲಿ ಮೃತ ರ್ದುದೈವಿಯಾಗಿದ್ದು, ಗಾಯಗೊಂಡವರ ಇಬ್ಬರ ಸ್ಥಿತಿ ಚಿಂತಾಜನಿಕವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ
ಹೈ ಪ್ರೆಶರ್ನಿಂದ ಬಾಯ್ಲರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ಲಾಸ್ಟ್ ಆದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗುಜ್ಜಾಗಿದೆ. ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಸ್ಥಳಕ್ಕಾಗಮಿಸಿ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತು ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.