ಪಲ್ಲಕ್ಕಿ ಟ್ರ್ಯಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿ ಬಳಿ ನಡೆದಿದೆ.
ವೀರಸಂದ್ರ ನಿವಾಸಿ ರಂಗನಾಥ (33), ಯಾರಂಡಹಳ್ಳಿ ನಿವಾಸಿ ಹರಿಬಾಬು (25) ಮೃತ ದುರ್ದೈವಿಗಳು. ಗೊಲ್ಲಹಳ್ಳಿ ಗ್ರಾಮದ ಜಾತ್ರೆ ಪಲ್ಲಕಿ ಉತ್ಸವದ ವೇಳೆ ಅವಘಡ ಸಂಭವಿಸಿದೆ.
ಗೊಲ್ಲಹಳ್ಳಿ ಗ್ರಾಮದ ಜಾತ್ರೆ ಪಲ್ಲಕಿ ಉತ್ಸವದ ಹಿನ್ನೆಲೆ, ಹೆಬ್ಬಗೋಡಿ ವ್ಯಾಪ್ತಿಯಿಂದ ಟ್ರ್ಯಾಕ್ಟರ್‌ನಲ್ಲಿ ಹೊರಟ ದೇವರ ಪಲ್ಲಕ್ಕಿ ನಾನಾ ಬಡಾವಣೆ ಹಾಗೂ ರಸ್ತೆಗಳ ಮುಖಾಂತರ ಸಂಚಾರ ಮಾಡಿ ವಾಪಸ್ ಹೋಗುವಾಗ ಮುಂಜಾನೆ 5.30ರ ಸಮಯದಲ್ಲಿ ಟ್ರ್ಯಾಕ್ಟರ್ ಚಲಿಸಿದ ಮಾರ್ಗದಲ್ಲಿ ವಿದ್ಯುತ್ ತಂತಿ ಪಲ್ಲಕ್ಕಿಗೆ ಸ್ಪರ್ಶಿಸಿದೆ. ಈ ವೇಳೆ ಟ್ರ್ಯಾಕ್ಟರ್ ಚಾಲಕನ ರಕ್ಷಣೆಗೆ ಧಾವಿಸಿದ ವ್ಯಕ್ತಿಗೆ ವಿದ್ಯುತ್ ಶಾಕ್ ಹೊಡೆದಿದೆ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಇಬ್ಬರನ್ನು ರಕ್ಷಣೆ ಮಾಡಿ, ಅಸ್ವಸ್ಥಗೊಂಡ ಇಬ್ಬರನ್ನು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಮಾರ್ಗಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಆರಂಭವಾದ ಮಳೆ ಆರ್ಭಟ; ಮತ್ತೆ ಪ್ರವಾಹದ ಹಾದಿ ಹಿಡಿದ ಬೆಂಗಳೂರು
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.