ಕೆನಡಾದಲ್ಲಿ ಗುಂಡೇಟಿಗೆ ಕನ್ನಡಿಗ ಬಲಿ: ಬೆಂಗಳೂರು ಮೂಲದ ಯುವಕನ ಹತ್ಯೆ

Date:

ಕೆನಡಾದಲ್ಲಿ ನಡೆದ ಗುಂಡಿನ ದಾಳಿಯ ಘಟನೆಯಲ್ಲಿ ಕರ್ನಾಟಕ ಮೂಲದ ಯುವಕನೊಬ್ಬ ಬಲಿಯಾದ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ನೆಲಮಂಗಲ ಮೂಲದ ಚಂದನ್ ಕುಮಾರ್(37) ಎಂದು ಗುರುತಿಸಲಾಗಿದೆ.

- Advertisement -

ಉತ್ತಮ ಭವಿಷ್ಯವನ್ನು ಅರಸಿ ಕೆನಡಾದಲ್ಲಿ ನೆಲೆಸಿದ್ದ ಚಂದನ್ ಕುಮಾರ್ ಅವರು, ಅಲ್ಲಿನ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಲ್ಲಿರುವ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಲಭ್ಯವಿರುವ ಮಾಹಿತಿಯ ಪ್ರಕಾರ, ಚಂದನ್ ಕುಮಾರ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಥವಾ ಕಾರಿನ ಸಮೀಪವಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ವರದಿಯಲ್ಲಿ ಲಭ್ಯವಾಗಿರುವ ದೃಶ್ಯಾವಳಿಗಳ ಪ್ರಕಾರ, ಚಂದನ್ ಅವರ ಕಾರಿನ ಮುಂಭಾಗದ ಗಾಜಿನ ಮೇಲೆ ಗುಂಡು ಹೊಕ್ಕಿರುವ ಗುರುತುಗಳು ಸ್ಪಷ್ಟವಾಗಿ ಕಂಡುಬಂದಿವೆ. ಇದು ಪಾಯಿಂಟ್ ಬ್ಲಾಂಕ್ ರೇಂಜ್‌ನಲ್ಲಿ ಅಥವಾ ಸಮೀಪದಿಂದ ನಡೆಸಲಾದ ದಾಳಿ ಇರಬಹುದೆಂದು ಶಂಕಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ|ಮೋದಿ ರಾಜಿ ರಾಜಕಾರಣದಿಂದ ಭಾರತದ ಸ್ವಾಭಿಮಾನ- ಸಾರ್ವಭೌಮತೆಗೆ ಧಕ್ಕೆ

ಮಗನ ಹತ್ಯೆಯ ವಿಷಯ ತಿಳಿಯುತ್ತಿದ್ದಂತೆಯೇ ಚಂದನ್ ಅವರ ನಿವಾಸದಲ್ಲಿ ಶೋಕ ಮಡುಗಿದೆ. ಪೋಷಕರು ಮತ್ತು ಸಂಬಂಧಿಕರು ಮಗನನ್ನು ಕಳೆದುಕೊಂಡ ದುಃಖದಲ್ಲಿ ಕಣ್ಣೀರಿಡುತ್ತಿದ್ದಾರೆ. “ಕೆಲಸಕ್ಕೆಂದು ಹೋಗಿದ್ದ ಮಗ ಸುರಕ್ಷಿತವಾಗಿರುತ್ತಾನೆ ಎಂದು ಭಾವಿದ್ದೆವು, ಆದರೆ ಹೀಗಾಗುತ್ತದೆ ಎಂದು ಊಹಿಸಿರಲಿಲ್ಲ,” ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಸದ್ಯ ಕೆನಡಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹತ್ಯೆಗೆ ನಿಖರವಾದ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ. ಇದೊಂದು ದ್ವೇಷದ ಹಿನ್ನೆಲೆಯಲ್ಲಿ ನಡೆದ ಹತ್ಯೆಯೇ ಖಲಿಸ್ತಾನ ಸಂಘಟನೆ ನಡೆಸಿದ ಹತ್ಯೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇತ್ತ ಚಂದನ್ ಅವರ ಮೃತದೇಹವನ್ನು ಆದಷ್ಟು ಬೇಗ ಬೆಂಗಳೂರಿಗೆ ತರಿಸಿಕೊಡಲು ಕುಟುಂಬಸ್ಥರು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮತ್ತು ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಸ್‌ಐಟಿ ರಚನೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...