ಬೆಂಗಳೂರು | ಮಾರ್ಚ್​ 28ರಂದು 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು; ಬಿಸಿಗಾಳಿಯ ಮುನ್ಸೂಚನೆ

Date:

Advertisements

ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಬಿರು ಬಿಸಿಲಿನ ವಾತಾವರಣ ತುಂಬಿದೆ. ಬೇಸಿಗೆ ಕಾಲ ಆರಂಭಕ್ಕೂ ಮುನ್ನವೇ, ರಾಜ್ಯದಲ್ಲಿ ರಣ ಬಿಸಿಲಿನ ಅನುಭವವಾಗಿದೆ. ಇದೀಗ, ಬೇಸಿಗೆಯ ಸಮಯದಲ್ಲಿ ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ ಕಳೆದ ಏಳು ವರ್ಷಕ್ಕೆ ಹೋಲಿಕೆ ಮಾಡಿದರೇ ಈ ವರ್ಷ ಅತ್ಯಧಿಕ ತಾಪಮಾನ ದಾಖಲಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ತಾಪಮಾನ ದಿನೇದಿನೆ ಹೆಚ್ಚಳವಾಗುತ್ತಿರುವುದಷ್ಟೇ ಅಲ್ಲ, ವರ್ಷದಿಂದ ವರ್ಷಕ್ಕೂ ಹೆಚ್ಚಳವಾಗುತ್ತಿದೆ. ನಗರದ ವಾತಾವರಣದಲ್ಲಿ ಉಷ್ಣಾಂಶ ಗುರುವಾರ ಏಳು ವರ್ಷಗಳ ಗರಿಷ್ಠ ಮಟ್ಟಕ್ಕೆ ತಲುಪಿದ್ದು, 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಳೆದ ಏಳು ವರ್ಷಕ್ಕೆ ಹೋಲಿಕೆ ಮಾಡಿದರೆ ಬೆಂಗಳೂರಿನಲ್ಲಿ ಈ ವರ್ಷ ಅಂದರೆ, 2024 ಮಾರ್ಚ್​ 28ರವರೆಗೆ ಅತ್ಯಧಿಕ ತಾಪಮಾನ ದಾಖಲಾಗಿದೆ.

ಕಳೆದ ಏಳು ವರ್ಷಗಳಲ್ಲಿ ಮಾರ್ಚ್‌ 28ರಂದು ವರದಿಯಾದ ಗರಿಷ್ಠ ತಾಪಮಾನ ಇದಾಗಿದೆ. ಈ ಸಲ ಮಾರ್ಚ್‌ ತಿಂಗಳು ಬೆಂಗಳೂರು ನಗರದ ತಾಪಮಾನದಲ್ಲಿ ಭಾರಿ ಹೆಚ್ಚಳವಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ ಪ್ರಕಾರ, 2017ರ ಮಾ.28ರಂದು 37.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ವರದಿಯಾಗಿತ್ತು. 2018ರಲ್ಲಿ ಈ ದಿನ 36.6 ಡಿಗ್ರಿ ಸೆಲ್ಸಿಯಸ್‌, 2019ರಲ್ಲಿ 37.5 ಡಿಗ್ರಿ ಸೆಲ್ಸಿಯಸ್‌, 2020ರಲ್ಲಿ 37.1 ಡಿಗ್ರಿ ಸೆಲ್ಸಿಯಸ್‌, 2021ರಲ್ಲಿ 37.4 ಡಿಗ್ರಿ ಸೆಲ್ಸಿಯಸ್‌, 2022ರಲ್ಲಿ 36.7 ಡಿಗ್ರಿ ಸೆಲ್ಸಿಯಸ್‌ ಹಾಗೂ 2023ರಲ್ಲಿ 36.9 ಡಿಗ್ರಿ ಸೆಲ್ಸಿಯಸ್‌ ವರದಿಯಾಗಿದೆ.

Advertisements

“ಎಲ್ ನಿನೋ ಪ್ರಭಾವದಿಂದ ರಾಜ್ಯದಲ್ಲಿ ಈ ವರ್ಷ ಬೇಸಿಗೆಯ ಪ್ರಾರಂಭವಾದಾಗಿನಿಂದ 40 ಡಿಗ್ರಿ ಸೆಲ್ಸಿಯಸ್‌ ಅನ್ನು ದಾಟಿದ ಮೊದಲ ನಿದರ್ಶನವಾಗಿದೆ. ಮುಂದಿನ ಮೂರು ದಿನಗಳಲ್ಲಿ ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಹೀಟ್‍ವೇವ್ ಅಲರ್ಟ್ ಅನ್ನು ಎಚ್ಚರಿಸಿದೆ. ಬೆಂಗಳೂರಿನಲ್ಲಿ ದಿನದ ತಾಪಮಾನವು 2 ಡಿಗ್ರಿ ಸೆಲ್ಸಿಯಸ್‌ ವರೆಗೆ ಹೆಚ್ಚಾಗುವ ನಿರೀಕ್ಷೆಯಿದೆ” ಎಂದು ಐಎಮ್‌ಡಿ ವಿಜ್ಞಾನಿಗಳು ತಿಳಿಸಿದ್ದಾರೆ.

ಕಲಬುರಗಿ, ಯಾದಗಿರಿ ಮತ್ತು ಬಳ್ಳಾರಿಯಂತಹ ಉತ್ತರ ಕರ್ನಾಟಕದ ಜಿಲ್ಲೆಗಳು ಮುಂದಿನ ಮೂರು ದಿನಗಳಲ್ಲಿ ಬಿಸಿಗಾಳಿ ಎದುರಿಸಲಿದೆ. ಸಾಮಾನ್ಯವಾಗಿ 40 ಡಿಗ್ರಿ ಸೆಲ್ಸಿಯಸ್‍ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸಿದರೆ, ಸಾಮಾನ್ಯ ತಾಪಮಾನಕ್ಕಿಂತ 4 ಡಿಗ್ರಿ ಸೆಲ್ಸಿಯಸ್‍ನ ಹೆಚ್ಚಳವನ್ನು ದಾಖಲಿಸಿದರೆ, ಶಾಖ ತರಂಗ ಎಚ್ಚರಿಕೆಯನ್ನು ನೀಡಲಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಹೀಟ್‍ವೇವ್ ಎಚ್ಚರಿಕೆ ನೀಡಲಾಗಿದೆ” ಎಂದು ಐಎಂಡಿ ಬೆಂಗಳೂರಿನ ಹಿರಿಯ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ.

ಈ ತಿಂಗಳು ಬೆಂಗಳೂರಿನ ತಾಪಮಾನದಲ್ಲಿ ಭಾರಿ ಏರಿಕೆಯಾಗಿದೆ. ಕಳೆದೊಂದು ವಾರದಿಂದ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಮುಂದಿನ ನಾಲ್ಕು ದಿನಗಳು ಸಹ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಇಷ್ಟೇ ‍ಪ್ರಮಾಣದಲ್ಲಿ ಇರುವ ಸಾಧ್ಯತೆಯಿದೆ.

ಮುಂದಿನ 2 ದಿನಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದ್ದು. ಮುಂದಿನ ಐದು ದಿನಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆಯಿದೆ.

ತಾಪಮಾನ ಹೆಚ್ಚಾದಂತೆ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆ, ಚನ್ನಗಿರಿ, ವಾಡಿ, ಶಹಾಪುರ ಮತ್ತು ಗುರುಮಿಟ್ಕಲ್​ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಮುಂದಿನ 7 ದಿನಗಳಲ್ಲಿ ತೀವ್ರ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ, ಜನರು ಎಚ್ಚರದಿಂದ ಇರಬೇಕು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ವಿಪಕ್ಷಗಳ ಮೇಲೆ ಮೋ-ಶಾ ಪ್ರಯೋಗಿಸುತ್ತಿರುವ ಅಸ್ತ್ರಗಳಿವು

ರಾಯಚೂರಿನಲ್ಲಿ ಅತ್ಯಧಿಕ ತಾಪಮಾನ ದಾಖಲು

ಇಡೀ ರಾಜ್ಯದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಗುರುವಾರ ಅತ್ಯಧಿಕ ತಾಪಮಾನ ದಾಖಲಾಗಿದೆ. ಅಂದರೆ, ಬರೋಬ್ಬರಿ, 42.6 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ಇನ್ನು ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದ‌ರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 41 ರಿಂದ 42.6 ಡಿಗ್ರಿ ಸೆಲ್ಸಿಯಸ್ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಹವಾಮಾನ ಮಾನಿಟರಿಂಗ್ ನೆಟ್‌ವರ್ಕ್ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ರಾಯಚೂರು ಜಿಲ್ಲೆಯ 10 ಸ್ಥಳಗಳು, ಕಲಬುರಗಿ ಜಿಲ್ಲೆಯ 9 ಸ್ಥಳಗಳು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ತಲಾ 4 ಸ್ಥಳಗಳು, ಬಳ್ಳಾರಿ ಜಿಲ್ಲೆಯ 3 ಸ್ಥಳಗಳು, ವಿಜಯಪುರ ಜಿಲ್ಲೆಯ 2 ಸ್ಥಳಗಳು, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ತಲಾ 1 ಸ್ಥಳಗಳಲ್ಲಿ ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವಾಡಿಕೆಗಿಂತ 1.6 ರಿಂದ 3 ಡಿಗ್ರಿ ಸೆಲ್ಸಿಯಸ್​ ನಷ್ಟು ಅಧಿಕ ತಾಪಮಾನವು ದಾಖಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ. ಮುಂದಿನ 5 ದಿನಗಳ ತಾಪಮಾನದ ಮುನ್ಸೂಚನೆ ನೀಡಲಾಗಿದೆ.

ಮಾರ್ಚ್ 28 ರಿಂದ 29 ರವರೆಗೆ ರಾಜ್ಯದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಉಷ್ಣ ಅಲೆ ಇರುವ ಸಾಧ್ಯತೆಯಿದೆ ಎಂದು  ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‍ನಷ್ಟಿದ್ದರೆ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‍ನಷ್ಟು ಹೆಚ್ಚಳವಾಗಿದೆ. ಏಪ್ರಿಲ್ 1 ರಿಂದ ರಾಜ್ಯದ ಕೆಲವೆಡೆ ಮಳೆಯಾಗುವ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X