ಬೆಂಗಳೂರಿಗರಿಗೆ ತಟ್ಟಲಿದೆ ನೀರು, ವಿದ್ಯುತ್ ದರ ಏರಿಕೆಯ ಬಿಸಿ | ಏಪ್ರಿಲ್ 1ರಿಂದಲೇ ಜಾರಿ

Date:

ಹೊಸ ಆರ್ಥಿಕ ವರ್ಷದ ಮೊದಲ ದಿನವೇ ರಾಜ್ಯದ ಜನತೆಗೆ ವಿದ್ಯುತ್ ಹಾಗೂ ನೀರಿನ  ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಏಪ್ರಿಲ್ 1ರಿಂದ ಹೊಸ ದರ ಜಾರಿಗೆ ತರುವ ಬಗ್ಗೆ ಅಂತಿಮ ಹಂತದ ಚರ್ಚೆಯಲ್ಲಿ ತೊಡಗಿದೆ.

- Advertisement -

ಯೂನಿಟ್‌ಗೆ 40–50 ಪೈಸೆ ಹೆಚ್ಚಳ ಸಾಧ್ಯತೆ ಇದ್ದು, ಬೆಸ್ಕಾಂ (BESCOM) ಸೇರಿದಂತೆ ಐದು ಎಸ್ಕಾಂಗಳ ಪ್ರಸ್ತಾವನೆಯಂತೆ ಪ್ರತಿ ಯೂನಿಟ್ ವಿದ್ಯುತ್‌ಗೆ ಸುಮಾರು 40 ರಿಂದ 50 ಪೈಸೆವರೆಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ. ನಷ್ಟದಲ್ಲಿರುವ ವಿದ್ಯುತ್ ವಿತರಣಾ ಕಂಪನಿಗಳು ಆದಾಯದ ಕೊರತೆ ಸರಿಪಡಿಸಲು ಈ ಕ್ರಮ ಅನಿವಾರ್ಯ ಎಂದು ಅಧಿಕಾರಿಗಳು ವಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಯಾರಿಗೆ ಪರಿಣಾಮ?

ಗೃಹ ಬಳಕೆದಾರರು, ವಾಣಿಜ್ಯ ಬಳಕೆದಾರರು, ಕೈಗಾರಿಕಾ ಕ್ಷೇತ್ರ, ಈ ಮೂರು ವರ್ಗಗಳಿಗೂ ದರ ಏರಿಕೆಯ ನೇರ ಪರಿಣಾಮ ಬೀಳಲಿದೆ.

ಗೃಹ ಜ್ಯೋತಿ ಫಲಾನುಭವಿಗಳಿಗೆ ವಿನಾಯಿತಿ :

‘ಗೃಹ ಜ್ಯೋತಿ’ ಯೋಜನೆಯಡಿ 200 ಯೂನಿಟ್ ಒಳಗೆ ವಿದ್ಯುತ್ ಬಳಸುವ ಗ್ರಾಹಕರ ಬಿಲ್ ಅನ್ನು ಸರ್ಕಾರವೇ ಭರಿಸುವುದರಿಂದ ಅವರಿಗೆ ನೇರ ಹೊರೆ ಇರುವುದಿಲ್ಲ. ಆದರೆ 200 ಯೂನಿಟ್ ಮೀರಿದ ಬಳಕೆದಾರರು ಹೆಚ್ಚಿದ ದರವನ್ನು ಪಾವತಿಸಬೇಕಾಗುತ್ತದೆ.

ಸ್ಥಿರ ಶುಲ್ಕವೂ ಏರಿಕೆ ಸಾಧ್ಯತೆ

ಯೂನಿಟ್ ದರ ಮಾತ್ರವಲ್ಲದೆ, ಸ್ಥಿರ ಶುಲ್ಕವನ್ನೂ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ.

ವಾಣಿಜ್ಯ ವಿದ್ಯುತ್ ದರ ಏರಿಕೆಯಾದರೆ ಹೋಟೆಲ್, ಸಣ್ಣ ಕೈಗಾರಿಕೆಗಳ ಉತ್ಪಾದನಾ ವೆಚ್ಚ ಹೆಚ್ಚಾಗಿ, ಅದರ ಪರಿಣಾಮವಾಗಿ ವಸ್ತುಗಳ ಬೆಲೆ ಏರಿಕೆ ಸಾಧ್ಯತೆ ಇದೆ.

ನೀರಿನ ದರವೂ ಏರಿಕೆ :

ಏಪ್ರಿಲ್ 1ರಿಂದ ಬೆಂಗಳೂರಿನಲ್ಲಿ ನೀರಿನ ಬಿಲ್ಲಿನಲ್ಲೂ ಶೇ. 3ರಷ್ಟು ಹೆಚ್ಚಳ ಜಾರಿಗೆ ಬರಲಿದೆ.

ನೀರಿನ ಸರಬರಾಜು ವೆಚ್ಚ, ನಿರ್ವಹಣಾ ವೆಚ್ಚ, ವಿದ್ಯುತ್ ಮತ್ತು ಮೂಲಸೌಕರ್ಯ ಖರ್ಚು ಹೆಚ್ಚಳ ಮಾಡಲಾಗುತ್ತಿದ್ದು ಜಲಮಂಡಳಿಯ ಆರ್ಥಿಕ ಒತ್ತಡ ಕಡಿಮೆ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷವೇ ಪ್ರತಿವರ್ಷ ನೀರಿನ ದರವನ್ನು ಶೇ. 3ರಷ್ಟು ಹೆಚ್ಚಿಸಲು ಅನುಮೋದನೆ ನೀಡಲಾಗಿದ್ದು, ಅದರ ಭಾಗವಾಗಿ ಈ ವರ್ಷದ ಏರಿಕೆ ಜಾರಿಯಾಗುತ್ತಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಏಪ್ರಿಲ್ 1ರಿಂದ ವಿದ್ಯುತ್ ಹಾಗೂ ನೀರಿನ ದರ ಏರಿಕೆಯಿಂದ ಬೆಂಗಳೂರಿನ ಜನತೆಗೆ ದ್ವಿಗುಣ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ನಡುವೆಯೇ ಈ ದರ ಏರಿಕೆ ಜನರಲ್ಲಿ ಮಿಶ್ರ ಪ್ರತಿಕ್ರಿಯೆ ಮೂಡಿಸಿದೆ.

ಇದನ್ನೂ ಓದಿ : ದೇಶದಲ್ಲಿ ಪದವೀಧರ ನಿರುದ್ಯೋಗಿಗಳೇ ಹೆಚ್ಚು! ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವರದಿ ಬಿಚ್ಚಿಟ್ಟ ಸತ್ಯವೇನು?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆಯರಿಲ್ಲದ ಸಂಪುಟ; ಮಾತು ತಪ್ಪಿತೇ ಕಾಂಗ್ರೆಸ್?

ರಾಜ್ಯದ ಮಹಿಳೆಯರು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟಿದ್ದರೂ, ಅಧಿಕಾರದ ವಿಚಾರ ಬಂದಾಗ ಅವರು...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...