ಕೆಐಎ ರಸ್ತೆಯಲ್ಲಿ 80 ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಕ್ರಮಕ್ಕೆ ಮುಂದಾದ ಬೆಂಗಳೂರು ಸಂಚಾರ ಪೊಲೀಸ್

Date:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಪ್ರತಿ ಗಂಟೆಗೆ 80 ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಅತಿವೇಗದ ಚಾಲನೆಯ ಪ್ರಕರಣ ದಾಖಲಿಸಿ ದಂಡ ವಿಧಿಸಲು ಬೆಂಗಳೂರು ಸಂಚಾರ ಪೊಲೀಸ್ ಮುಂದಾಗಿದೆ.

- Advertisement -

ಹೌದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ಅದರಲ್ಲೂ ಮುಖ್ಯವಾಗಿ ವಾಹನ ಸವಾರರ ಅತಿವೇಗದ ಚಾಲನೆ ಈ ಅಪಘಾತಗಳು ಉಂಟಾಗುವಲ್ಲಿ ಅತ್ಯಂತ ಪ್ರಮುಖವಾದ ಪಾತ್ರ ವಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ಹಿನ್ನೆಲೆ, ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಅತಿವೇಗದ ಚಾಲನೆಯನ್ನು ಪತ್ತೆ ಹಚ್ಚುವ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಸಂಚಾರ ಪೊಲೀಸ್ ಪ್ರಕಟಣೆ ಮೂಲಕ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?  ಬೆಂಗಳೂರು | ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ

“ಈ ಕ್ಯಾಮೆರಾಗಳು ಸ್ವಯಂ ಚಾಲಿತವಾಗಿ ಅತಿವೇಗದ ಚಾಲನೆಯನ್ನು ಕಂಡು ಹಿಡಿಯುವ ಸಾಮರ್ಥ್ಯವನ್ನು ಹೊಂದಿವೆ.  ಕಾನೂನಾತ್ಮಕವಾಗಿ ನಿಗದಿಪಡಿಸಲಾಗಿರುವ ಪ್ರತಿ ಗಂಟೆಗೆ 80 ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಅತಿವೇಗದ ಚಾಲನೆಯ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗುವುದು” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....