ಶಾಲಾ ವಾಹನಗಳ ವಿರುದ್ಧ 994 ಪ್ರಕರಣ ದಾಖಲಿಸಿದ ಬೆಂಗಳೂರು ಸಂಚಾರ ಪೊಲೀಸರು

Date:

Advertisements

ನಿಗದಿತ ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ಹಾಗೂ ಖಾಸಗಿ ವಾಹನಗಳ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು 994 ಪ್ರಕರಣ ದಾಖಲಿಸಿದ್ದಾರೆ.

ಶಾಲಾ ವಾಹನಗಳಲ್ಲಿ ನಿಗದಿ ಮಾಡಿದ ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ವಾಹನಗಳಲ್ಲಿ ಚಾಲಕರು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ದೂರು ಬಂದ ಹಿನ್ನೆಲೆ, ನಗರ ಸಂಚಾರ ಪೊಲೀಸರು ಮಂಗಳವಾರ ಮಧ್ಯಾಹ್ನ ಈ ವಿಶೇಷ ಕಾರ್ಯಾಚರಣೆ ನಡೆಸಿದರು.

ಉಪ್ಪಾರಪೇಟೆ, ಹೈಗ್ರೌಂಡ್ಸ್, ಮಲ್ಲೇಶ್ವರ, ಶೇಷಾದ್ರಿಪುರ, ರಿಚ್ಮಂಡ್‌ ವೃತ್ತ, ಅಶೋಕ ನಗರ, ಹಲಸೂರು, ಯಶವಂತಪುರ ಸೇರಿದಂತೆ ಹಲವು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

Advertisements

ಬೆಂಗಳೂರಿನಲ್ಲಿ ಸಂಚಾರ ಪೊಲೀಸರು ಬರೋಬ್ಬರಿ 2050 ಶಾಲಾ ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಈ ಪೈಕಿ 994 ಶಾಲಾ ವಾಹನ, 319 ಬಸ್​ಗಳು, 122 ಆಟೋ, 133 ಓಮ್ನಿ, 332 ವ್ಯಾನ್ ಹಾಗೂ ಇತರೆ 88 ವಾಹನಗಳ ಮೇಲೆ ಭಾರತೀಯ ಮೋಟಾರು ವಾಹನ ಕಾಯ್ದೆ 177ರ ಅಡಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಏರ್‌ಪೋರ್ಟ್‌ ಕ್ಯಾಂಟೀನ್‌ನಲ್ಲಿ ಕಳಪೆ ಆಹಾರ; ಚಾಲಕರ ಆಕ್ರೋಶ

“ಚಾಲಕರು ಹಣದ ಆಸೆಗಾಗಿ ಹೆಚ್ಚಿನ ಮಕ್ಕಳನ್ನು ವಾಹನದಲ್ಲಿ ತುಂಬಿಕೊಂಡು ಸಂಚಾರ ಮಾಡುತ್ತಾರೆ. ವಾಹನ ಅಪಘಾತವಾದಾಗ ಮಕ್ಕಳು ಅಪಾಯದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದ ರೀತಿಯಲ್ಲಿ ಮಕ್ಕಳನ್ನು ವಾಹನದಲ್ಲಿ ತುಂಬಿಕೊಂಡಿರುತ್ತಾರೆ. ಈ ಬಗ್ಗೆ ಚಾಲಕರಿಗೆ ಹಲವು ಬಾರಿ ತಿಳಿಸಿದರೂ ಕೂಡ ಸುಧಾರಣೆ ಕಂಡಿಲ್ಲ” ಎಂದು ಬೆಂಗಳೂರು ಸಂಚಾರ ಪೊಲೀಸರೊಬ್ಬರು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X