ಭಾರತೀಯ ವಿದ್ಯಾಭವನ – ಬಿಬಿಎಂಪಿ ಪಬ್ಲಿಕ್ ಶಾಲೆಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಿಕ್ಷಣ ವ್ಯಾಪ್ತಿಗೆ ಒಳಪಡುವ ಭಾರತೀಯ ವಿದ್ಯಾಭವನ ಮತ್ತು ಬಿಬಿಎಂಪಿ ಪಬ್ಲಿಕ್ ಶಾಲೆಯ ಜಂಟಿ ಸಹಯೋಗದಲ್ಲಿ ಫ್ರೀ ನರ್ಸರಿ ತರಗತಿ (ಸಿಬಿಎಸ್‌ಸಿ ಪಠ್ಯಕ್ರಮ)ಗೆ 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಭಾರತೀಯ ವಿದ್ಯಾಭವನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಬ್ಲಿಕ್ ಸ್ಕೂಲ್, ನಂ. 215ನೇ ಮುಖ್ಯ ರಸ್ತೆ ಕ್ರಾಂತಿಕವಿ ಸರ್ವಜ್ಞ ರಸ್ತೆ, ಶ್ರೀರಾಮಪುರ, ಬೆಂಗಳೂರು-21 ಈ ವಿದ್ಯಾಸಂಸ್ಥೆಯಲ್ಲಿ ಫ್ರೀ ನರ್ಸರಿ ತರಗತಿಗೆ ಮಾರ್ಚ್‌ 11 ರಿಂದ ಮಾರ್ಚ್ 25 ರವರೆಗೆ ಅರ್ಜಿ ವಿತರಿಸಲಾಗುವುದು ಎಂದು ಪಾಲಿಕೆ ಹೇಳಿದೆ.

ಅರ್ಜಿ ನಮೂನೆ ಸಲ್ಲಿಸಲು ಮಾರ್ಚ್‌ 26 ರಿಂದ ಏಪ್ರಿಲ್ 10 ರವರೆಗೆ ಕಾಲಾವಕಾಶ ನೀಡಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ(ಶಿಕ್ಷಣ) 1ನೇ ಮಹಡಿಯ ಅನೆಕ್ಸ್- 3 ಕಟ್ಟಡ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಲ್ಲಿಸಬೇಕು. ಮೇ 20 ರಂದು ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ ಎಂದು ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಮಹಾ ಶಿವರಾತ್ರಿ’ಯಂದು ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧ

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು

  • ಮಗುವಿನ ಪಾಸ್ ಪೋರ್ಟ್ ಸೈಜ್ ಫೋಟೋ – 5 ಸಂಖ್ಯೆ
  • ಮಗುವಿನ ಜತೆಗಿರುವ ತಂದೆ ತಾಯಿಯ ಭಾವಚಿತ್ರ(ಕುಟುಂಬ ಭಾವ ಚಿತ್ರ)2B Size
  • ಮಗುವಿನ ಜನನ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ತಂದೆ / ತಾಯಿಯ ಆಧಾರ್ ಕಾರ್ಡ್ ಜೆರಾಕ್ಸ್
  • ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್
  • ತಂದೆ / ತಾಯಿಯ ಖಾಯಂ ವಿಳಾಸವಿರುವ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿ (ಭಾರತೀಯ ವಿದ್ಯಾಭವನ
  •  ಶಾಲೆಗೆ 3 ಕಿ.ಲೋ. ಸುತ್ತಮುತ್ತಲಿನ ಅಂತರದಲ್ಲಿ ವಾಸವಾಗಿರಬೇಕು)
  • ಮಗುವಿನ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು (ಎತ್ತರ, ತೂಕ, ರಕ್ತದ ಗುಂಪು)

ಅರ್ಜಿ ಪರಿಶೀಲನೆಯ ದಿನ ಮೇ 20ರಂದು ಪೋಷಕರು ಮಗುವಿನ ಜತೆಗೆ ದಾಖಲಾತಿಗೆ ಸಂಬಂಧಿಸಿದ ಎಲ್ಲ ಮೂಲ ದಾಖಲೆಗಳನ್ನು ತರಬೇಕು ಇದು ಕಡ್ಡಾಯ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕನ್ನಡ ನಾಮಫಲಕ ಹಾಕಿ ಇಂಗ್ಲಿಷ್ ಕಲಿಸುತ್ತಿರುವುದು ಆತಂಕ ತರಿಸಿದೆ : ಡಾ.ಪುರುಷೋತ್ತಮ ಬಿಳಿಮಲೆ

ನಮ್ಮೆಲ್ಲರ ನಿರಾಸಕ್ತಿ, ಅನ್ಯ ಭಾಷೆಯ ವ್ಯಾಮೋಹದಿಂದ ನಮ್ಮ ಕನ್ನಡ ಭಾಷೆ ಸೊರಗುತ್ತಿದೆ....

ಮಂಡ್ಯ | ‘ಸೊಳ್ಳೆ ಉತ್ಪಾದನಾ ಕೇಂದ್ರ’ವಾದ ವೈದ್ಯಕೀಯ ಕಾಲೇಜು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು...

ವಿಜಯಪುರ | ಎನ್‌ಎಸ್‌ಎಸ್ ಸ್ವಯಂ ಸೇವಕರಲ್ಲಿ ತಾಳ್ಮೆ, ಶಿಸ್ತಿನ ಜೊತೆಗೆ ಧೈರ್ಯ ತುಂಬುತ್ತದೆ: ಡಾ.ಪ್ರತಾಪ್ ಲಿಂಗಯ್ಯ

"ಎನ್‌ಎಸ್‌ಎಸ್ ಎಂಬುದು ಮನುಷ್ಯನಲ್ಲಿ ಸಹನೆ, ತಾಳ್ಮೆ ಹಾಗೂ ಶಿಸ್ತಿನ ಜೊತೆಗೆ ಧೈರ್ಯವನ್ನು...

ಬಸವರಾಜ ರಾಯರೆಡ್ಡಿ ಮಾಹಿತಿ ತಿಳಿದುಕೊಂಡು ಮಾತನಾಡಲಿ: ದಿನೇಶ್ ಗೂಳಿಗೌಡ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ...