ಬೀದರ್‌ | 15 ತಿಂಗಳಾದರೂ ಪದವೀಧರ ಶಿಕ್ಷಕರಿಗಿಲ್ಲ ನಾಲ್ಕು ತಿಂಗಳ ಪಗಾರ!

Date:

ಬೀದರ್‌ ಜಿಲ್ಲೆಯ ವಿವಿಧ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 444 ಪದವೀಧರ ಶಿಕ್ಷಕರಿಗೆ ನಾಲ್ಕು ತಿಂಗಳ ಹಿಂಬಾಕಿ ವೇತನ ಪಾವತಿಯಾಗಿಲ್ಲ. ಇದರಿಂದಾಗಿ ಶಿಕ್ಷಕರು ತೊಂದರೆ ಅನುಭವಿಸುವಂತಾಗಿದ್ದು, ನಿತ್ಯ ಶಿಕ್ಷಣ ಇಲಾಖೆ ಕಚೇರಿಗೆ ಎಡತಾಕುವಂತಾಗಿದೆ.

- Advertisement -

ಜಿಲ್ಲೆಯಲ್ಲಿ 2023ರ ನವೆಂಬರ್‌ 5 ರಂದು ಕೌನ್ಸೆಲಿಂಗ್ ನಡೆಸಿ, ನವೆಂಬರ್‌ 6ರಂದು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಸರ್ಕಾರ ಪದವೀಧರ ಶಿಕ್ಷಕರನ್ನು ನೇಮಕ ಮಾಡಿದೆ. ಆದರೆ, ನೇಮಕವಾದ ಶಿಕ್ಷಕರಿಗೆ ಮೊದಲ ನಾಲ್ಕು ತಿಂಗಳ ವೇತನ ಈವರೆಗೆ ಶಿಕ್ಷಕರ ಕೈಸೇರಿಲ್ಲ. ಇದು ಬೀದರ್‌ ಅಷ್ಟೇ ಅಲ್ಲದೆ, ಕಲ್ಯಾಣ ಕರ್ನಾಟಕ ಭಾಗದ ಇತರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೂ ಇದೇ ರೀತಿ ಮೊದಲ ನಾಲ್ಕೈದು ತಿಂಗಳ ಸಂಬಳ ಜಮೆಯಾಗಿಲ್ಲ ಎಂದು ಶಿಕ್ಷಕರು ಹೇಳುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

2023ರ ಮಾರ್ಚ್‌ನಿಂದ ನಿರಂತರವಾಗಿ ವೇತನ ಪಾವತಿಯಾಗಿದೆ. ಆದರೆ ಅವರು ನೇಮಕವಾಗಿದ್ದು, 2023ರ ನವೆಂಬರ್‌ನಲ್ಲಿ. ಹೀಗಾಗಿ ಜಿಲ್ಲೆಯಲ್ಲಿ ನವೆಂಬರ್‌ನಲ್ಲಿ ನೇಮಕವಾದ 430 ನೂತನ ಪದವಿ ಶಿಕ್ಷಕರಿಗೆ 2023ರ ನವೆಂಬರ್‌, ಡಿಸೆಂಬರ್‌ ಹಾಗೂ 2024ರ ಜನವರಿ, ಫೆಬ್ರವರಿಯ ನಾಲ್ಕು ತಿಂಗಳ ವೇತನ ಬಾಕಿಯಿದೆ. ನಂತರ ನೇಮಕವಾದ ಉಳಿದ ಕೆಲ ಶಿಕ್ಷಕರದ್ದು ಮೂರು ತಿಂಗಳ ವೇತನ ಬಾಕಿ ಇದೆ. ಹೀಗೆ ನಾಲ್ಕು ತಿಂಗಳ ವೇತನ 15 ತಿಂಗಳಾದರೂ ಬಂದಿಲ್ಲ. ಇದು ಬಾಕಿ ಇರಿಸಿಕೊಳ್ಳಲಾಗಿದೆ ಎಂಬುದು ಶಿಕ್ಷಕರ ಆರೋಪ.

ಯಾವ ತಾಲ್ಲೂಕಿನಲ್ಲಿ ಎಷ್ಟು ಜನ ಪದವೀಧರ ಶಿಕ್ಷಕರು?

ಬೀದರ್‌ ಜಿಲ್ಲೆಯಲ್ಲಿ ವಿವಿಧ ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ (6 ರಿಂದ 8ನೇ ತರಗತಿ) ಖಾಲಿ ಇರುವ ಹುದ್ದೆ ಭರ್ತಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೊದಲ ಆದ್ಯತೆ ನೀಡಿ, ಅದರಂತೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಆಂಗ್ಲ ಭಾಷಾ ಹುದ್ದೆಗಳ ಭರ್ತಿ ಮಾಡಲಾಯಿತು. ಜಿಲ್ಲೆಯಲ್ಲಿ ಔರಾದ್‌ 89, ಬಸವಕಲ್ಯಾಣ 128, ಭಾಲ್ಕಿ 72, ಬೀದರ್‌ 39, ಹುಮನಾಬಾದ್‌ 116 ಸೇರಿ ಒಟ್ಟು 444 ಶಿಕ್ಷಕರನ್ನು ನೇಮಕ ಮಾಡಲಾಗಿದೆ.

ಕಲ್ಯಾಣ ಕರ್ನಾಟಕ, ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲೆಗಳ 371(ಜೆ) ಹುದ್ದೆಗಳ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ಇದ್ದುದರಿಂದ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಲು ಕಾನೂನಾತ್ಮಕ ತೊಡಕು ಎದುರಾಗಿತ್ತು. ನ್ಯಾಯಾಲಯದಲ್ಲಿನ ಕೆಲ ಪ್ರಕರಣಗಳನ್ನು ಇತ್ಯರ್ಥಗೊಳಿಸಿದ ನಂತರ ಜಿಲ್ಲೆಯಲ್ಲಿ 444 ಪ್ರಾಥಮಿಕ ಶಾಲೆಗಳಿಗೆ ಪದವೀಧರ ಶಿಕ್ಷಕರನ್ನು 2023ರ ನವೆಂಬರ್‌ನಲ್ಲಿ ನೇಮಕ ಮಾಡಲಾಯಿತು.

ಒಂದು ವರ್ಷಕ್ಕೂ ಅಧಿಕ ದಿನ ಕಳೆದರೂ ಕಳೆದ ವರ್ಷದಲ್ಲಿನ 4 ತಿಂಗಳ ಸಂಬಳ ದೊರೆಯದಂತಾಗಿದೆ. ಆರ್ಥಿಕ ಇಲಾಖೆ ಅನುಮೋದನೆ ನೀಡದೇ ಇರುವುದರಿಂದ ಈ ಸಮಸ್ಯೆ ಉಂಟಾಗಿದ್ದು, ವೇತನಕ್ಕಾಗಿ ನೂತನ ಶಿಕ್ಷಕರು ಅಲೆದಾಡುವಂತಾಗಿದೆ. ಎಲ್ಲ 444 ಶಿಕ್ಷಕರಿಗೆ ನಾಲ್ಕು ತಿಂಗಳ ವೇತನ ಅಂದಾಜು ₹8 ಕೋಟಿಗೂ ಅಧಿಕ ಬಿಡುಗಡೆಯಾಗಬೇಕಿದೆ.

ʼಜಿಲ್ಲೆಯಲ್ಲಿ ಪದವೀಧರ ಶಿಕ್ಷಕರ ವೇತನ ಬಾಕಿ ಉಳಿದಿರುವ ಬಗ್ಗೆ ಗಮನಕ್ಕಿದೆ. ಆರ್ಥಿಕ ಇಲಾಖೆ ಆದೇಶದ ಬಳಿಕ ಬಾಕಿ ವೇತನ ಪಾವತಿ ಮಾಡಲಾಗುವುದುʼ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಲೀಂ ಪಾಷ ʼಈದಿನ.ಕಾಮ್‌ʼ ಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | 12ನೇ ಶತಮಾನದಲ್ಲೇ ಸರ್ವೋದಯ ಪರಿಕಲ್ಪನೆ ನೀಡಿದ ಬಸವಣ್ಣ : ಸಚಿವ ಎಚ್.ಸಿ.ಮಹಾದೇವಪ್ಪ

ʼ2022-23ನೇ ಸಾಲಿನಲ್ಲಿ ನೇಮಕವಾದ ಪದವೀಧರ ಶಿಕ್ಷಕರ (ಜಿಪಿಟಿ) ಹಿಂಬಾಕಿ ವೇತನ ಬಿಡುಗಡೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಗಿದ್ದು, ಕೂಡಲೇ ಕ್ರಮವಹಿಸುವುದಾಗಿ ಅವರು ಭರವಸೆ ನೀಡಿದ್ದಾರೆʼ ಎಂದು ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಸಂಸ್ಥಾಪಕ ಅಧ್ಯಕ್ಷ ರವಿ ಡೋಳೆ ಹೇಳಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...