ಬೀದರ್‌ | ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Date:

ಮಾಜಿ ಸಚಿವ, ಅಖಿಲ‌ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.

- Advertisement -

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ಕಳೆದ ಒಂದೆರಡು ವಾರದಿಂದ ಬೀದರ್‌ ನಗರದ ಗುದುಗೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಭೀಮಣ್ಣ ಖಂಡ್ರೆ ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಜಿಲ್ಲೆಯಲ್ಲಿಯೇ ಉಳಿದು ಅನೇಕ ಸಲ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಆದರೂ ಆರೋಗ್ಯ ಮತ್ತಷ್ಟು ಕ್ಷೀಣಿಸುತ್ತ ಹೋಗಿರುವ ಹಿನ್ನೆಲೆ ಖಂಡ್ರೆ ಕುಟುಂಬದವರ ಸಮ್ಮುಖದಲ್ಲಿ ಭೀಮಣ್ಣ ಖಂಡ್ರೆ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ದು ಚಿಕಿತ್ಸೆ ಮುಂದುವರಿಸಿದರು. ಚಿಕಿತ್ಸೆಗೆ ಸ್ಪಂದಿಸದೆ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ, ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮೃತ ಭೀಮಣ್ಣ ಖಂಡ್ರೆ ಅವರಿಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರೂ ಆದ ಪುತ್ರ ಈಶ್ವರ ಖಂಡ್ರೆ, ಬೀದರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರಕುಮಾರ್ ಖಂಡ್ರೆ ಹಾಗೂ ಮೊಮ್ಮಗ, ಬೀದರ್ ಸಂಸದ ಸಾಗರ ಖಂಡ್ರೆ ಸೇರಿದಂತೆ ಪುತ್ರ, ಪುತ್ರಿಯರು ಹಾಗೂ ಮೊಮ್ಮಕ್ಕಳು ಇದ್ದಾರೆ.

ಇದನ್ನೂ ಓದಿ : ಬೀದರ್‌ | ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ ಆರೋಪ : ವಸತಿ ಶಾಲೆ ಪ್ರಾಚಾರ್ಯ ಅಮಾನತು

ಭೀಮಣ್ಣ ಖಂಡ್ರೆ ಅವರು ಪಾರ್ವತಮ್ಮ-ಶಿವಲಿಂಗಪ್ಪ ದಂಪತಿಯ ಮಗನಾಗಿ 1925 ನವೆಂಬರ್ 1ರಂದು ಭಾಲ್ಕಿಯಲ್ಲಿ ಜನಿಸಿದರು. 1952ರಲ್ಲಿ ಭಾಲ್ಕಿ ಪುರಸಭೆ ಚುನಾವಣೆಯಲ್ಲಿ ಗೆದ್ದು ರಾಜಕೀಯ ಪ್ರವೇಶಿಸಿದರು. 1962ರಲ್ಲಿ ಪ್ರಜಾ ಸೋಸಿಯಲಿಸ್ಟ್ ಪಾರ್ಟಿಯಿಂದ ಸ್ಪರ್ಧಿಸಿ ಮೊದಲ ಬಾರಿಗೆ ಭಾಲ್ಕಿ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದರು. ನಂತರ 1967, 1978 ಹಾಗೂ 1983ರಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರು. ವಿಧಾನ ಪರಿಷತ್‌ ಸದಸ್ಯರಾಗಿ, ಸಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಜಿಪಂ, ತಾಪಂ ಮೀಸಲಾತಿ ಹಂಚಿಕೆಯಲ್ಲಿ ಒಬಿಸಿಗೆ ಅನ್ಯಾಯ: ಶ್ರೀಕಾಂತ ಸ್ವಾಮಿ ಆರೋಪ

ಬೀದರ್ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ಎಂಟು ತಾಲೂಕು ಪಂಚಾಯಿತಿಗಳ ಚುನಾವಣೆಗೆ...

‘ಎಸ್ಐಆರ್’ ವಿರುದ್ಧ ಸಿಡಿದೆದ್ದ ರೈತ-ದಲಿತ ಸಂಘಟನೆಗಳು: ಅ.23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರಗಳನ್ನು...

ಬಸವಕಲ್ಯಾಣದಲ್ಲಿ ಅ.24ರಿಂದ ʼಕಲ್ಯಾಣ ಪರ್ವʼ ರಜತ ಮಹೋತ್ಸವ

ವಿಶ್ವಗುರು ಬಸವಣ್ಣನವರ ತತ್ವ-ಸಿದ್ಧಾಂತಗಳು, ವಚನ ಸಾಹಿತ್ಯದ ಸಂದೇಶ ಹಾಗೂ ಶರಣರ ಸಮಾನತೆಯ...