ಭಾಲ್ಕಿ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭೀಮಾ ನರಸಿಂಗ ಸೂರ್ಯವಂಶಿ (60) ಎಂಬ ಆರೋಪಿ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಮೆಹಕರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಬಾಲಕಿಯ ಕುಟುಂಬಸ್ಥರಿಗೆ ಆರೋಪಿ ಪರಿಚಿತನಾಗಿದ್ದ, ಬಾಲಕಿ ಕಳೆದ ಎರಡು ವರ್ಷಗಳಿಂದ ಶಾಲೆ ಬಿಟ್ಟಿದ್ದಳು. ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ ಆರೋಪಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗಿದ್ದು, ಅತ್ಯಾಚಾರದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಮೆಹಕರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ.