ಬಿಟ್ ಕಾಯಿನ್ ಹಗರಣ​ | ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

Date:

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್ಸ್‌ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ವ್ಯಕ್ತಿ ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್. ಈ ಹಿಂದೆ ಬಿಟ್‌ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಸುಧೀರ್ಘ ವಿಚಾರಣೆ ನಡೆಸಿದ ಸಿಐಡಿ ಪೊಲೀಸರು ಚಂದ್ರಾಧರ್ ಅವರನ್ನು ಬಂಧನ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಇತ್ತೀಚೆಗೆ ಸಿಐಡಿ ಬಂಧಿಸಿತ್ತು.

ಏನಿದು ಪ್ರಕರಣ?

2015ರಲ್ಲಿ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಕೇಸ್ ತನಿಖೆ ವೇಳೆ ಬಿಟ್‌ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ಯುನೋ ಕಾಯಿನ್​ ಕಳವು ಪ್ರಕರಣ ದಾಖಲಾಗಿತ್ತು. ಯೂನೋಕಾಯಿನ್ ಟೆಕ್ನಾಲಜೀಸ್ ಕಂಪನಿಯ ಸಹ ಸಂಸ್ಥಾಪಕ ಬಿ.ವಿ.ಹರೀಶ್ ಎಂಬವರು ಶ್ರೀಕಿ ವಿರುದ್ಧ ದೂರು ನೀಡಿದ್ದರು.

ಕಂಪನಿಯ 60.6 ಬಿಟ್ ಕಾಯಿನ್​ಗಳನ್ನು ಕಳವು ಮಾಡಲಾಗಿದೆ. ಪ್ರತಿ ಬಿಟ್ ಕಾಯಿನ್ ಬೆಲೆ ₹1.67 ಲಕ್ಷದಂತೆ ಸುಮಾರು ₹1.14 ಕೋಟಿ ಮೌಲ್ಯದ ಬಿಟ್ ಕಾಯಿನ್ ಕಳವು ಮಾಡಲಾಗಿದೆ ಎಂದು ಆರೋಪಿಸಿ ಅವರು ಪ್ರಕರಣ ದಾಖಲಿಸಿದ್ದರು. 2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು.

ಈ ಸುದ್ದಿ ಓದಿದ್ದೀರಾ? ‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿ ಆರೋಪಿ ಬಂಧನ ಮಾಡಿದ್ದರು. ಆತ ಜಾಮೀನಿನ ಮೇಲೆ ಹೊರಗಡೆ ಬಂದಿದ್ದನು. ಈ ನಂತರ ಸಿಸಿಬಿ ಪೊಲೀಸರ ವಿರುದ್ಧ ದಾಖಲೆಗಳನ್ನು ತಿರುಚಿರುವ ಆರೋಪಗಳು ಕೇಳಿಬಂದಿತ್ತು. ಹಾಗಾಗಿ, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...