ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಕಾಂಗ್ರೆಸ್ ವಿರುದ್ಧ ಜ. 3ರಂದು ರಾಜ್ಯಾದ್ಯಂತ ಪ್ರತಿಭಟನೆ: ವಿಜಯೇಂದ್ರ

Date:

ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರಕಾರವಾಗಿದ್ದು, ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ, ಜ. 3ಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

- Advertisement -

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ; ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂತಹ ಸಂದರ್ಭವನ್ನು ಬಂಧನ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ” ಎಂದು ಟೀಕಿಸಿದರು.

“ಹಳೆಯ ಕೇಸನ್ನು ಮತ್ತೆ ಓಪನ್ ಮಾಡಿ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿರುವುದು ಖಂಡನೀಯ. ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬುಧವಾರ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮಾತ್ರವಲ್ಲದೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ” ಎಂದು ಪ್ರಕಟಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

ದುಸ್ಸಾಹಸಕ್ಕೆ ಕೈಹಾಕಿದ ಸಿಎಂ

ದೇಶವೇ ಸಂಭ್ರಮದಲ್ಲಿ ಇರುವಾಗ ರಾಮಭಕ್ತನನ್ನು ಬಂಧಿಸುವುದಾದರೆ ನಿಮಗೆಷ್ಟು ಧೈರ್ಯ? ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ. ರಾಜ್ಯ ಸರಕಾರಕ್ಕೆ ಆದ್ಯತೆ ಯಾವುದು? ಸಂದರ್ಭ ಮತ್ತು ನಿಮ್ಮ ಉದ್ದೇಶ ಏನು? ತಪ್ಪು ಮಾಡಿದ್ದಾರೆ ಅಥವಾ ಇಲ್ಲವೇ ಎಂದು ನೀವು ತೀರ್ಮಾನ ಮಾಡುವುದಲ್ಲ; 31 ವರ್ಷ ಹಳೆಯ ಕೇಸನ್ನು ಈಗಲೇ ರೀ ಓಪನ್ ಮಾಡಬೇಕಿತ್ತೇ? ಮುಂದೆ ನಡೆಯುವ ಘಟನೆಗೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರೇ ಹೊಣೆಗಾರರಾಗುತ್ತಾರೆ” ಎಂದು ಎಚ್ಚರಿಸಿದರು.

“ಹಿಂದೂಗಳು, ಹಿಂದೂ ಕಾರ್ಯಕರ್ತರ ಭಾವನೆಗೆ ಧಕ್ಕೆ ತರುವುದರಲ್ಲಿ ಇವರು ನಿಸ್ಸೀಮರು. ಹಿಂದೂಗಳಿಗೆ ನೋವು ಕೊಡುವುದರಲ್ಲಿ ಕಾಂಗ್ರೆಸ್ಸಿಗರಿಗೆ ಎಲ್ಲಿಲ್ಲದ ಸಂತೋಷ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...