ಸಾವಿರ ಕೋಟಿ ಬೆಲೆ ಬಾಳುವ ಜಾಗವನ್ನು ಖಾಸಗಿಯವರಿಗೆ ನೀಡಿ ಕಮಿಷನ್ ಪಡೆದ ಬಿಜೆಪಿ ನಾಯಕರು: ಎಎಪಿ ಆರೋಪ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೇ, ಕೆರೆಗಳ ಒತ್ತುವರಿ ನಡೆಯುತ್ತಿದೆ. ಕೆರೆಗಳನ್ನು ಸಂರಕ್ಷಿಸಬೇಕಾದ ಜನಪ್ರತಿನಿಧಿಗಳೇ ಕೆರೆಗಳ ಅಕ್ರಮ ಒತ್ತುವರಿಯಲ್ಲಿ ಪಾಲುದಾರರಾಗಿದ್ದಾರೆ. ಇದೀಗ, “₹1000 ಕೋಟಿ ಬೆಲೆಬಾಳುವ 25 ಎಕರೆ ಜುನ್ನಸಂದ್ರ ಕೆರೆಯೂ ಸಂಪೂರ್ಣ ಭೂಮಾಫಿಯಾಗಳ ಹಿಡಿತಕ್ಕೆ ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಬಿಜೆಪಿಯ ಬಸವರಾಜ ಬೊಮ್ಮಾಯಿ, ಮಾಜಿ ಕಂದಾಯ ಸಚಿವ ಆರ್. ಅಶೋಕ್, ಮಹದೇವಪುರ ಮಾಜಿ ಶಾಸಕ ಅರವಿಂದ ಲಿಂಬಾವಳಿ ಅವರು ಬೃಹತ್ ಹಗರಣದಲ್ಲಿ ಭಾಗಿಯಾಗಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕರಾದ ಮೋಹನ್ ದಾಸರಿ ಆರೋಪಿಸಿದ್ದಾರೆ.

ಬೆಂಗಳೂರಿನ ಪ್ರೆಸ್‌ಕ್ಲಬ್ನಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಜುನ್ನಸಂದ್ರ ಕೆರೆ ಅಕ್ರಮ ಒತ್ತುವರಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, “ಇಡೀ ಜಗತ್ತಿನಲ್ಲೇ ಭೂಮಾಫಿಯಾದಲ್ಲಿ ಬೆಂಗಳೂರಿನ ರಾಜಕಾರಣಿಗಳು ಮೊದಲ ಸ್ಥಾನ ಪಡೆಯುತ್ತಾರೆ. ಆರ್ಟಿಸಿ ಸರ್ವೇ ನಂ. 32 ಅಡಿ 24.33 ಎಕರೆ ಸರ್ಕಾರಿ ಕೆರೆ ಅಂಗಳವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“1930ರಲ್ಲಿ ಜೋಡಿದಾರ ಅಕ್ಕಮ್ಮ ಎಂಬುವವರಿಗೆ ಜುನ್ನಸಂದ್ರ ಕೆರೆಯನ್ನು ನಿರ್ವಹಣೆ ಸಲುವಾಗಿ ಅಂದಿನ ಮೈಸೂರು ಮಹಾರಾಜರು ಒಪ್ಪಂದ ಮಾಡಿಕೊಂಡಿದ್ದರು. ಆದರೆ, 1967ರಲ್ಲಿ ಭೂಸುಧಾರಣೆ ಕಾಯ್ದೆ ಜಾರಿಯಾದಾಗ, ಉಳುವವನೇ ಹೊಲದೊಡೆಯ ಎಂಬ ನಿಯಮ ಅನುಷ್ಠಾನಗೊಂಡ ಸಂದರ್ಭ ನಕಲಿ ದಾಖಲೆಗಳನ್ನು ನೀಡಿ ಜುನ್ನಸಂದ್ರ ಕೆರೆ ಭೂಮಿಯನ್ನು ಅಕ್ಕಮ್ಮ ಅವರ ಕುಟುಂಬಸ್ಥರು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

Advertisements

“ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾಗುವ, ಸಾರ್ವಜನಿಕ ಆಸ್ತಿಯಾದ ಜುನ್ನಸಂದ್ರ ಕೆರೆ ಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ. 2023 ಡಿಸೆಂಬರ್‌ 21ರಂದು ಹೈಕೋರ್ಟ್ಮಹಾರಾಜರ ಜೊತೆಗಿನ 1930 ಒಪ್ಪಂದವನ್ನು ಎತ್ತಿ ಹಿಡಿದಿದೆ. ಜೋಡಿದಾರ ವಂಶಸ್ಥರಿಗೆ ಭೂಮಿ ಸೇರಬೇಕು ಎಂದು ಆದೇಶ ನೀಡಿದೆ. ಆದರೆ, ಕೋರ್ಟ್ನಲ್ಲಿ ದಾಖಲೆಗಳನ್ನು ಸಲ್ಲಿಸುವ ಸಂದರ್ಭ ಕೆರೆ ಅಂಗಳ ಎಂಬುದನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಕೋರ್ಟ್ಆದೇಶದಲ್ಲಿಯೂ ಕೆರೆ ಅಂಗಳ ಅಕ್ಕಮ್ಮ ವಂಶಸ್ಥರಿಗೆ ಸೇರಬೇಕು ಎಂದು ಹೇಳಿಲ್ಲ. ಸುಳ್ಳು ದಾಖಲೆ ನೀಡಿ ನ್ಯಾಯಾಲಯದ ದಿಕ್ಕು ತಪ್ಪಿಸಲಾಗಿದೆ” ಎಂದರು.

2014ರಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು, “ಆಗಲೇ ಜುನ್ನಸಂದ್ರ ಕೆರೆಯನ್ನು ಸರ್ಕಾರ ತನ್ನ ವಶಕ್ಕೆ ಪಡೆದುಕೊಂಡಿತ್ತು. 2021ರಲ್ಲಿ ಕೆರೆಯನ್ನು ಉಳಿಸಲು ಆಮ್ ಆದ್ಮಿ ಪಕ್ಷ ಹೋರಾಟಕ್ಕೆ ಮುಂದಾಗಿದ್ದಾಗ, ತಡೆಯುವ ಪ್ರಯತ್ನ ಮಾಡಿದ್ದರು. ಅಂದಿನ ಶಾಸಕರಾಗಿದ್ದ ಅರವಿಂದ ಲಿಂಬಾವಳಿ, ಕಂದಾಯ ಸಚಿವರಾಗಿದ್ದ ಆರ್. ಅಶೋಕ್ಮತ್ತು ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಇವರೆಲ್ಲಾ ಸೇರಿ ₹1000 ಕೋಟಿ ಬೆಲೆ ಬಾಳುವ ಜಾಗವನ್ನು ಖಾಸಗಿಯವರಿಗೆ ನೀಡಿ ತಮ್ಮ ಕಮಿಷನ್ ಪಡೆದುಕೊಂಡಿದ್ದಾರೆ” ಎಂದು ಮೋಹನ್ ದಾಸರಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಫೆಬ್ರುವರಿ 6ರಿಂದ ₹29ಗೆ ಸಿಗಲಿದೆ ‘ಭಾರತ್ ಬ್ರ್ಯಾಂಡ್’ ಅಕ್ಕಿ

“ಕೂಡಲೇ ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅರವಿಂದ ಲಿಂಬಾವಳಿ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಕಾನೂನು ಹೋರಾಟದ ಮೂಲಕ ಮತ್ತೆ ಕೆರೆಯನ್ನು ಉಳಿಸಿಕೊಳ್ಳಬೇಕು” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

“ಸರ್ಕಾರಿ ಕೆರೆಯನ್ನು ಉಳಿಸಿ ಎಂದು ನಾವು ಅಭಿಯಾನ ಮಾಡುತ್ತಿದ್ದೇವೆ. ಕೆಂಪೇಗೌಡರು ಕಟ್ಟಿದ್ದ ಕೆರೆಗಳನ್ನು ಹೇಗೆ ರಿಯಲ್ ಎಸ್ಟೇಟ್ ಮಾಫಿಯಾಗಳು ಹಾಳು ಮಾಡುತ್ತಿವೆ ಎನ್ನುವುದು ಆತಂಕ ಮೂಡಿಸುತ್ತಿದೆ. ಹಗರಣದಲ್ಲಿ ದೊಡ್ಡ ರಾಜಕಾರಣಿಗಳು, ಅಧಿಕಾರಿಗಳು ಶಾಮೀಲಾಗಿದ್ದಾರೆ, ವಿಚಾರದಲ್ಲಿ ಹೋರಾಡುತ್ತಿರುವ ಅಶೋಕ ಮೃತ್ಯುಂಜಯ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದರು.

ಆಮ್ ಆದ್ಮಿ ಪಕ್ಷದ ಮುಖಂಡ ಅಶೋಕ ಮೃತ್ಯುಂಜಯ ಅವರು ಮಾತನಾಡಿ, “ಭೂ ಅಕ್ರಮ ಒತ್ತುವರಿ ವಿಚಾರವಾಗಿ ಬಿಎಂಟಿಎಫ್ಗೆ ದೂರು ನೀಡಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ದೂರು ನೀಡಲಾಗಿದೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೆರೆ ಉಳಿಸಿಕೊಳ್ಳಲು ಪ್ರಯತ್ನ ಪಟ್ಟಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಯುವ ಘಟಕ ರಾಜ್ಯಾಧ್ಯಕ್ಷ ಲೋಹಿತ್ ಜಿ. ಹನುಮಾಪುರ, ಎಎಪಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ದರ್ಶನ್ ಜೈನ್, ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಈ ಹೋರಾಟಕ್ಕೆ ಗೆಲುವು ಸಿಗಲಿ
    ಇದರ ಸುತ್ತಮುತ್ತಲಿನ ಸಂಗಟನೆಗಳನ್ನು ಸೇರಿಸಿ ಹೋರಾಡಬೇಕಿದೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X