ಸಾವಿರ ಕೋಟಿ ಬೆಲೆ ಬಾಳುವ ಜಾಗವನ್ನು ಖಾಸಗಿಯವರಿಗೆ ನೀಡಿ ಕಮಿಷನ್ ಪಡೆದ ಬಿಜೆಪಿ ನಾಯಕರು: ಎಎಪಿ ಆರೋಪ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೇ, ಕೆರೆಗಳ ಒತ್ತುವರಿ ನಡೆಯುತ್ತಿದೆ. ಕೆರೆಗಳನ್ನು ಸಂರಕ್ಷಿಸಬೇಕಾದ ಜನಪ್ರತಿನಿಧಿಗಳೇ ಕೆರೆಗಳ ಅಕ್ರಮ ಒತ್ತುವರಿಯಲ್ಲಿ ಪಾಲುದಾರರಾಗಿದ್ದಾರೆ. ಇದೀಗ, “₹1000 ಕೋಟಿ ಬೆಲೆಬಾಳುವ 25 ಎಕರೆ ಜುನ್ನಸಂದ್ರ ಕೆರೆಯೂ ಸಂಪೂರ್ಣ ಭೂಮಾಫಿಯಾಗಳ ಹಿಡಿತಕ್ಕೆ ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಬಿಜೆಪಿಯ ಬಸವರಾಜ ಬೊಮ್ಮಾಯಿ, ಮಾಜಿ ಕಂದಾಯ ಸಚಿವ ಆರ್. ಅಶೋಕ್, ಮಹದೇವಪುರ ಮಾಜಿ ಶಾಸಕ ಅರವಿಂದ ಲಿಂಬಾವಳಿ ಅವರು ಈ ಬೃಹತ್ ಹಗರಣದಲ್ಲಿ ಭಾಗಿಯಾಗಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕರಾದ ಮೋಹನ್ ದಾಸರಿ ಆರೋಪಿಸಿದ್ದಾರೆ.

- Advertisement -

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಜುನ್ನಸಂದ್ರ ಕೆರೆ ಅಕ್ರಮ ಒತ್ತುವರಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, “ಇಡೀ ಜಗತ್ತಿನಲ್ಲೇ ಭೂಮಾಫಿಯಾದಲ್ಲಿ ಬೆಂಗಳೂರಿನ ರಾಜಕಾರಣಿಗಳು ಮೊದಲ ಸ್ಥಾನ ಪಡೆಯುತ್ತಾರೆ. ಆರ್‌ಟಿಸಿ ಸರ್ವೇ ನಂ. 32 ರ ಅಡಿ 24.33 ಎಕರೆ ಸರ್ಕಾರಿ ಕೆರೆ ಅಂಗಳವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

“1930ರಲ್ಲಿ ಜೋಡಿದಾರ ಅಕ್ಕಮ್ಮ ಎಂಬುವವರಿಗೆ ಜುನ್ನಸಂದ್ರ ಕೆರೆಯನ್ನು ನಿರ್ವಹಣೆ ಸಲುವಾಗಿ ಅಂದಿನ ಮೈಸೂರು ಮಹಾರಾಜರು ಒಪ್ಪಂದ ಮಾಡಿಕೊಂಡಿದ್ದರು. ಆದರೆ, 1967ರಲ್ಲಿ ಭೂಸುಧಾರಣೆ ಕಾಯ್ದೆ ಜಾರಿಯಾದಾಗ, ಉಳುವವನೇ ಹೊಲದೊಡೆಯ ಎಂಬ ನಿಯಮ ಅನುಷ್ಠಾನಗೊಂಡ ಸಂದರ್ಭ ನಕಲಿ ದಾಖಲೆಗಳನ್ನು ನೀಡಿ ಜುನ್ನಸಂದ್ರ ಕೆರೆ ಭೂಮಿಯನ್ನು ಅಕ್ಕಮ್ಮ ಅವರ ಕುಟುಂಬಸ್ಥರು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾಗುವ, ಸಾರ್ವಜನಿಕ ಆಸ್ತಿಯಾದ ಜುನ್ನಸಂದ್ರ ಕೆರೆ ಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ. 2023 ಡಿಸೆಂಬರ್‌ 21ರಂದು ಹೈಕೋರ್ಟ್‌ ಮಹಾರಾಜರ ಜೊತೆಗಿನ 1930ರ ಒಪ್ಪಂದವನ್ನು ಎತ್ತಿ ಹಿಡಿದಿದೆ. ಜೋಡಿದಾರ ವಂಶಸ್ಥರಿಗೆ ಭೂಮಿ ಸೇರಬೇಕು ಎಂದು ಆದೇಶ ನೀಡಿದೆ. ಆದರೆ, ಕೋರ್ಟ್‌ನಲ್ಲಿ ದಾಖಲೆಗಳನ್ನು ಸಲ್ಲಿಸುವ ಸಂದರ್ಭ ಕೆರೆ ಅಂಗಳ ಎಂಬುದನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಕೋರ್ಟ್‌ ಆದೇಶದಲ್ಲಿಯೂ ಕೆರೆ ಅಂಗಳ ಅಕ್ಕಮ್ಮ ವಂಶಸ್ಥರಿಗೆ ಸೇರಬೇಕು ಎಂದು ಹೇಳಿಲ್ಲ. ಸುಳ್ಳು ದಾಖಲೆ ನೀಡಿ ನ್ಯಾಯಾಲಯದ ದಿಕ್ಕು ತಪ್ಪಿಸಲಾಗಿದೆ” ಎಂದರು.

2014ರಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು, “ಆಗಲೇ ಜುನ್ನಸಂದ್ರ ಕೆರೆಯನ್ನು ಸರ್ಕಾರ ತನ್ನ ವಶಕ್ಕೆ ಪಡೆದುಕೊಂಡಿತ್ತು. 2021ರಲ್ಲಿ ಈ ಕೆರೆಯನ್ನು ಉಳಿಸಲು ಆಮ್ ಆದ್ಮಿ ಪಕ್ಷ ಹೋರಾಟಕ್ಕೆ ಮುಂದಾಗಿದ್ದಾಗ, ತಡೆಯುವ ಪ್ರಯತ್ನ ಮಾಡಿದ್ದರು. ಅಂದಿನ ಶಾಸಕರಾಗಿದ್ದ ಅರವಿಂದ ಲಿಂಬಾವಳಿ, ಕಂದಾಯ ಸಚಿವರಾಗಿದ್ದ ಆರ್. ಅಶೋಕ್‌ ಮತ್ತು ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಇವರೆಲ್ಲಾ ಸೇರಿ ₹1000 ಕೋಟಿ ಬೆಲೆ ಬಾಳುವ ಜಾಗವನ್ನು ಖಾಸಗಿಯವರಿಗೆ ನೀಡಿ ತಮ್ಮ ಕಮಿಷನ್ ಪಡೆದುಕೊಂಡಿದ್ದಾರೆ” ಎಂದು ಮೋಹನ್ ದಾಸರಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಫೆಬ್ರುವರಿ 6ರಿಂದ ₹29ಗೆ ಸಿಗಲಿದೆ ‘ಭಾರತ್ ಬ್ರ್ಯಾಂಡ್’ ಅಕ್ಕಿ

“ಕೂಡಲೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅರವಿಂದ ಲಿಂಬಾವಳಿ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಕಾನೂನು ಹೋರಾಟದ ಮೂಲಕ ಮತ್ತೆ ಕೆರೆಯನ್ನು ಉಳಿಸಿಕೊಳ್ಳಬೇಕು” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

“ಸರ್ಕಾರಿ ಕೆರೆಯನ್ನು ಉಳಿಸಿ ಎಂದು ನಾವು ಅಭಿಯಾನ ಮಾಡುತ್ತಿದ್ದೇವೆ. ಕೆಂಪೇಗೌಡರು ಕಟ್ಟಿದ್ದ ಕೆರೆಗಳನ್ನು ಹೇಗೆ ರಿಯಲ್ ಎಸ್ಟೇಟ್ ಮಾಫಿಯಾಗಳು ಹಾಳು ಮಾಡುತ್ತಿವೆ ಎನ್ನುವುದು ಆತಂಕ ಮೂಡಿಸುತ್ತಿದೆ. ಈ ಹಗರಣದಲ್ಲಿ ದೊಡ್ಡ ರಾಜಕಾರಣಿಗಳು, ಅಧಿಕಾರಿಗಳು ಶಾಮೀಲಾಗಿದ್ದಾರೆ, ಈ ವಿಚಾರದಲ್ಲಿ ಹೋರಾಡುತ್ತಿರುವ ಅಶೋಕ ಮೃತ್ಯುಂಜಯ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದರು.

ಆಮ್ ಆದ್ಮಿ ಪಕ್ಷದ ಮುಖಂಡ ಅಶೋಕ ಮೃತ್ಯುಂಜಯ ಅವರು ಮಾತನಾಡಿ, “ಭೂ ಅಕ್ರಮ ಒತ್ತುವರಿ ವಿಚಾರವಾಗಿ ಬಿಎಂಟಿಎಫ್‌ಗೆ ದೂರು ನೀಡಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ದೂರು ನೀಡಲಾಗಿದೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕೆರೆ ಉಳಿಸಿಕೊಳ್ಳಲು ಪ್ರಯತ್ನ ಪಟ್ಟಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಯುವ ಘಟಕ ರಾಜ್ಯಾಧ್ಯಕ್ಷ ಲೋಹಿತ್ ಜಿ. ಹನುಮಾಪುರ, ಎಎಪಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ದರ್ಶನ್ ಜೈನ್, ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಹಾಜರಿದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...