ಬಿಜೆಪಿ ಶಾಸಕಾಂಗ ಸಭೆ ಶುಕ್ರವಾರ ನಿಗದಿ, ಜೆ ಪಿ ನಡ್ಡಾ ಆಗಮನ: ಬಿ ವೈ ವಿಜಯೇಂದ್ರ

Date:

  • ‘ಪಕ್ಷದಲ್ಲಿ ಹಿರಿಯರಿದ್ದರೂ ಕೂಡ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ’
  • ‘ಯಾರೂ ವಿರೋಧ ಮಾಡುವುದಿಲ್ಲ, ಸಂತೋಷದಿಂದ ಒಪ್ಪಿದ್ದಾರೆ’

ಶುಕ್ರವಾರ (ನ.17) ಬಿಜೆಪಿ ಶಾಸಕಾಂಗ ಸಭೆ ನಿಗದಿಯಾಗಿದ್ದು, ಈ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರು ಬರಲಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.

- Advertisement -

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ದೇವಸ್ಥಾನಕ್ಕೆ ಆಗಮಿಸಿ, ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಪಕ್ಷದಲ್ಲಿ ಹಿರಿಯರಿದ್ದರೂ ಕೂಡ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

“ಪಕ್ಷ ಬಲಪಡಿಸಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಜಯ ಸಾಧಿಸಬೇಕು. ಕರ್ನಾಟಕ ಲೋಕಸಭಾ ಚುನಾವಣೆಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಬೇಕು. ಮೋದಿಜಿ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಶವಾದಿ ರಾಜಕಾರಣ- ಬಿಜೆಪಿ ಎರಡೆಳೆ ನಾಲಗೆಗೆ ಇನ್ನೆಷ್ಟು ದೊಡ್ಡ ಸಾಕ್ಷಿ ಬೇಕು?

ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಬಿಜೆಪಿಯೊಳಗೆ ಅಸಮಾಧಾನ ಇದೆ ಅಲ್ವಾ ಎಂದು ಪ್ರಶ್ನಿಸಿದಾಗ, “ರಾಷ್ಟ್ರೀಯ ನಾಯಕರು ತೀರ್ಮಾನ ಮಾಡಿ ಆಯ್ಕೆ ಮಾಡಿದ್ದಾರೆ. ಇದು ಅಮಿತ್ ಶಾ, ಜೆ ಪಿ ನಡ್ಡಾ ತೀರ್ಮಾನ. ಯಾರೂ ವಿರೋಧ ಮಾಡುವುದಿಲ್ಲ, ಸಂತೋಷದಿಂದ ಒಪ್ಪಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ...

ರಾಜ್ಯದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದರೂ, ಹಿಂಗಾರು ಮಳೆಯ ಅಬ್ಬರ...