ಸಮಾಜ ಘಾತುಕ ಕೃತ್ಯಗಳಲ್ಲಿ ಶ್ರೀಕಾಂತ ಪೂಜಾರಿ ಭಾಗಿ; ಬಿಜೆಪಿ ಪ್ರತಿಭಟನೆ ಸಂವಿಧಾನಕ್ಕೆ ಎಸಗುವ ಅಪಚಾರ: ಸಿದ್ದರಾಮಯ್ಯ

Date:

ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

- Advertisement -

ಈ ಕುರಿತು ಎಕ್ಸ್‌ ಖಾತೆಯಲ್ಲಿ ಬಂಧನವನ್ನು ಸಮರ್ಥಿಸಿಕೊಂಡು ಪೋಸ್ಟ್‌ ಮಾಡಿರುವ ಅವರು, “ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಈತನ ಎಲ್ಲ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ – ಧಾರವಾಡ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ” ಎಂದಿದ್ದಾರೆ.

“ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ? ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...