‘ಬಿಜೆಪಿ ವೇಷ ಮರೆಸಿ ಮಾತನಾಡುತ್ತದೆ’ ಹೇಳಿಕೆ; ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

Date:

‘ಬಿಜೆಪಿ ವೇಷ ಮರೆಸಿ ಮಾತನಾಡುತ್ತದೆ’ ಎಂದು ಶಿವಮೊಗ್ಗ ಘಟನೆಗೆ ಸಂಬಂಧಿಸಿದಂತೆ ಹೇಳಿಲ್ಲ. ಹಿಂದಿನ ಘಟನೆಗಳನ್ನು ಉದ್ದೇಶಿಸಿ ನಾನು ಹೇಳಿಕೆ ನೀಡಿದ್ದೇನೆ. ಶಿವಮೊಗ್ಗ ಘಟನೆಗೂ ನನ್ನ ಹೇಳಿಕೆಗೂ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

- Advertisement -

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಶಿವಮೊಗ್ಗ ಘಟನೆಯಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸಾಮಾನ್ಯವಾಗಿ ಬಿಜೆಪಿ ಯಾವ ರೀತಿ ವರ್ತಿಸುತ್ತದೆ ಎಂಬುದರ ಬಗ್ಗೆ ಮಾತನಾಡಿದ್ದೇನೆ. ಶಿವಮೊಗ್ಗ ಘಟನೆ ಆಧಾರಿಸಿ ಆ ಹೇಳಿಕೆ ನೀಡಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಯಾರೇ ತಪ್ಪು ಮಾಡಿದ್ದರೂ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಈ ಹಿಂದೆ ಪುಲಿಕೇಶಿನಗರ ಗಲಾಟೆಯಲ್ಲೂ ನಾನು ಅದನ್ನೇ ಹೇಳಿದ್ದೆ” ಎಂದು ಹೇಳಿದ್ದಾರೆ.

ಸಂಕ್ರಾಂತಿ ವೇಳೆಗೆ ರಾಜಕೀಯ ಪಥ ಬದಲಾಗುತ್ತದೆ ಎಂದಿರುವ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, “ಯೋಗೇಶ್ವರ್​ ಅವರು ಬಹಳ ಪಕ್ಷ ಬದಲಾಯಿಸಿ ಬಿಟ್ಟಿದ್ದಾರೆ. ಅದಕ್ಕೇ ಅವರ ಹೇಳಿಕೆಗೆ ಮಹತ್ವ ಕೊಡುವ ಅವಶ್ಯಕತೆ ಇಲ್ಲ. ನಮ್ಮ ಸರ್ಕಾರ ಐದು ವರ್ಷಗಳ ಅಧಿಕಾರವನ್ನು ಪೂರೈಸುತ್ತದೆ. ಅವರು ವಿರೋಧ ಪಕ್ಷದಲ್ಲಿ ಇದ್ದಾರೆ. ಅವರು ವಿರೋಧ ಪಕ್ಷದಲ್ಲಿ ಇದ್ದುಕೊಂಡು ಸಲಹೆ ಸೂಚನೆಗಳನ್ನು ಕೊಡಲಿ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...