ಬಿಜೆಪಿಗರು ಮನುವಾದಿ, ಸರ್ವಾಧಿಕಾರಿ ಧೋರಣೆಯಲ್ಲಿ ನಂಬಿಕೆ ಇಟ್ಟವರು: ಸಚಿವ ರಾಮಲಿಂಗಾರೆಡ್ಡಿ

Date:

“ಬಿಜೆಪಿಗರ ಪೂರ್ವಜರು ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್‌ನವರಾಗಿದ್ದಾರೆ. ಅವರು ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರಲ್ಲ. ಮನುವಾದಿ, ಸರ್ವಾಧಿಕಾರಿ ಧೋರಣೆಯಲ್ಲಿ ನಂಬಿಕೆ ಇಟ್ಟವರಾಗಿದ್ದಾರೆ. ಸಂವಿಧಾನ ವಿರೋಧಿಗಳಾಗಿದ್ದಾರೆ. ಭಾರತದಲ್ಲಿ ಈಗ ಸರ್ವಾಧಿಕಾರ ಚಾಲ್ತಿಯಲ್ಲಿದೆ. ಸಂವಿಧಾನ ಬದಲಾದರೆ, ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶ ಹೇಗಿತ್ತೋ ಆ ಪರಿಸ್ಥಿತಿಗೆ ಕೊಂಡೊಯ್ಯುತ್ತಾರೆ” ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಕಳವಳ ವ್ಯಕ್ತಪಡಿಸಿದರು.

- Advertisement -

‘ಇಂಡಿಯಾ’ ಒಕ್ಕೂಟದ ಭಾಗವಾಗಿ ಕಾಂಗ್ರೆಸ್‌ ಪ್ರತಿನಿಧಿಯಾಗಿ ಎಎಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಮಲಿಂಗಾರೆಡ್ಡಿ ಅವರು ಮಾತನಾಡಿ ಬಿಜೆಪಿ ವಿರುದ್ಧ ಹರಿಹಾಯ್ದರು. ಈ ವೇಳೆ ಮಾತನಾಡಿದ ಅವರು, “2ಜಿ ಹಗರಣದಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಅಕ್ರಮ ನಡೆದಿರುವುದನ್ನು ಸಾಬೀತು ಪಡಿಸಲಾಗಲಿಲ್ಲ. ಆದರೂ ಅವುಗಳು ಭಾರತದ ಅತಿದೊಡ್ಡ ಹಗರಣಗಳೆಂದು ಸುಳ್ಳು ಬಿತ್ತಿದರು. ಅಬಕಾರಿ ನೀತಿ ಹಗರಣದಲ್ಲಿಯೂ ಎಎಪಿ ಪಾತ್ರದ ಬಗ್ಗೆ ನಿರಂತರವಾಗಿ ಸುಳ್ಳು ಹಬ್ಬಿಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಆದರೆ, ಎರಡು ವರ್ಷಗಳೇ ಕಳೆದರೂ ಒಂದು ರೂಪಾಯಿ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿಲ್ಲ. ಚುನಾವಣೆ ಬಾಂಡ್‌ ಮೂಲಕ ಸಾವಿರಾರು ಕೋಟಿ ಅಕ್ರಮ ಎಸಗಿರುವುದು ಕಣ್ಮುಂದೆ ಇದ್ದರೂ ಬಿಜೆಪಿ ವಿರುದ್ಧ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುತ್ತಿಲ್ಲ. ಮುಂದೆ ಒಳ್ಳೆಯ ದಿನಗಳು ಬರಲಿವೆ. ಕೇಜ್ರಿವಾಲ್‌ ಆರೋಪ ಮುಕ್ತರಾಗಲಿದ್ದಾರೆ. ಬಿಜೆಪಿಯ ಎಲ್ಲ ಭ್ರಷ್ಟರು ಜೈಲು ಸೇರಲಿದ್ದಾರೆ” ಎಂದು ಆಶಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಒಂದೇ ವಾರದಲ್ಲಿ ಸರ್ಕಾರದ ಹೆಸರಿನಲ್ಲಿ‌ ಎರಡು ನಕಲಿ ಆದೇಶ; ₹4 ಕೋಟಿ ಗುತ್ತಿಗೆ ವಂಚನೆ

“ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್‌ ಅವರು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿರುವುದನ್ನು ನೋಡಿ ಸ್ಫೂರ್ತಿಗೊಂಡು ನಮ್ಮ ಕ್ಷೇತ್ರದ 22 ಶಾಲೆಗಳನ್ನು ಅಭಿವೃದ್ಧಿಪಡಿಸಿದೆವು. ಮೊದಲು 4,000 ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳು ಇದ್ದವರು 5,500 ಮಕ್ಕಳಾಗಿದ್ದಾರೆ” ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸಂತಸ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...