ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಶೋಧ ಕಾರ್ಯ ನಡೆಸಿ 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆಯಾಗಿದೆ.
ಶಂಕರಪುರದಲ್ಲಿ ₹3 ಕೋಟಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಶಾರದದೇವಿ ರಸ್ತೆ ಪ್ರದೇಶದಲ್ಲಿ ₹3 ಕೋಟಿ 39 ಲಕ್ಷ ಮೌಲ್ಯದ 4 ಕೆಜಿ 800 ಗ್ರಾಂ, ಮರ್ಕೈಂಟಲ್ ಬ್ಯಾಂಕ್ ಬಳಿ ₹2 ಕೋಟಿ 13 ಲಕ್ಷ ಮೌಲ್ಯದ 3 ಕೆಜಿ 400 ಗ್ರಾಂ, ಜಯನಗರದ 3ನೇ ಬ್ಲಾಕ್ನಲ್ಲಿ ₹5 ಕೋಟಿ 33 ಲಕ್ಷ ಮೌಲ್ಯದ 7 ಕೆಜಿ 598 ಗ್ರಾಂ, ಸಾರಸ್ವತ್ ಬ್ಯಾಂಕ್, ಚಾಮರಾಜಪೇಟೆಯಲ್ಲಿ ₹84 ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ
ಬಸವನಗುಡಿ ಅಂಚೆ ಕಚೇರಿ ಬಳಿಯ ಪ್ರದೇಶದಲ್ಲಿ ₹3 ಲಕ್ಷ 34 ಸಾವಿರ ಮೌಲ್ಯದ 6.38 ಕ್ಯಾರೆಟ್ ವಜ್ರ, ಮಾತಾ ಶಾರದಾ ದೇವಿ ರಸ್ತೆ ಪ್ರದೇಶದಲ್ಲಿ ₹3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ, ಜಯನಗರದಲ್ಲಿ ₹6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆಯಾಗಿದೆ.
ಒಟ್ಟು ₹16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, ₹6 ಕೋಟಿ 45 ಲಕ್ಷ ಮೌಲ್ಯದ ವಜ್ರ ವಶಪಡಿಸಿಕೊಳ್ಳಲಾಗಿದೆ. ₹1.33 ಕೋಟಿ ನಗದು ಪತ್ತೆಯಾಗಿದೆ.