ಬಿಎಂಟಿಸಿ | ಹಲಸಿನ ಹಣ್ಣು ಕೀಳಲು ಹೋಗಿ ಮರದ ಮೇಲಿಂದ ಬಿದ್ದು ಚಾಲಕ ಸಾವು

Date:

Advertisements

ಹಲಸಿನ ಹಣ್ಣು ಕೀಳಲು ಹೋಗಿ ಆಯತಪ್ಪಿ ಮರದ ಮೇಲಿಂದ ಬಿದ್ದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ ಚಾಲಕ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ (34) ಮೃತ ವ್ಯಕ್ತಿ. ಇವರು ಪೀಣ್ಯದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಘಟಕದಲ್ಲಿ ಬಸ್ ಚಾಲಕರಾಗಿ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು.

ಮಾರ್ಚ್‌ 30ರಂದು ಮರದಿಂದ ಹಲಸಿನ ಹಣ್ಣು ಕೀಳಲು ತೆರಳಿದ್ದಾರೆ. ಈ ವೇಳೆ, ಆಯತಪ್ಪಿ ಮರದ ಮೇಲಿನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸಂವಿಧಾನಕ್ಕೆ ಬದ್ಧರಾಗಿ ರಾಜ್ಯಪಾಲರು ಕಾರ್ಯನಿರ್ವಹಿಸಬೇಕು: ಸುಪ್ರೀಂ ಕೋರ್ಟ್ ನ್ಯಾ. ನಾಗರತ್ನ

ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ: ಪ್ರಾಣಿ ವಧೆ ಹಾಗೂ ಮೀನು-ಮಾಂಸ ಮಾರಾಟ ನಿಷೇಧ

"ಗಣೇಶ ಚತುರ್ಥಿ ಪ್ರಯುಕ್ತ ಆಗಸ್ಟ್ 27 ರಂದು ಬುಧವಾರ ಪ್ರಾಣಿ ವಧೆ...

ಬೀದರ್ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ‌ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬೀದರ್ ವತಿಯಿಂದ...

ವಿಜಯಪುರ-ಬಬಲೇಶ್ವರ ಆ.27ರಿಂದ ಎರಡು ಬಸ್ಸುಗಳ ಸೇವೆ ಪ್ರಾರಂಭ

ವಿಜಯಪುರ-ಬಬಲೇಶ್ವರ ಮತ್ತು ಬಬಲೇಶ್ವರ-ವಿಜಯಪುರ ನಡುವೆ ಆಗಸ್ಟ್ 27 ರಿಂದ ಸಾಮಾನ್ಯ ಸಾರಿಗೆ...

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ....

Download Eedina App Android / iOS

X