ಬಿಎಂಟಿಸಿ | ಮಾದಾವರದಿಂದ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಗೆ ಸಾರಿಗೆ

Date:

Advertisements

ಡಿ.23 ರಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾದಾವರ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರ್ಗ ಸಂಖ್ಯೆ ನೈಸ್-10ಗೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಅತ್ತಿಬೆಲೆ ಹಾಗೂ ಸರ್ಜಾಪುರ ಬಸ್‌ ನಿಲ್ದಾಣಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ” ತಿಳಿಸಿದರು.

ನೈಸ್ ಸಾರಿಗೆ

ಬೆಂಗಳೂರು ಹೊರವಲಯದ ಪ್ರಯಾಣಿಕರ ಅನುಕೂಲಕ್ಕಾಗಿ ನಾನಾ ಪ್ರಮುಖ ಸ್ಥಳಗಳಿಂದ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ವಿಪ್ರೋ ಗೇಟ್‌ಗೆ ಬೆಳಗ್ಗೆ ಮತ್ತು ಸಂಜೆ ಒಟ್ಟು 65 ಸುತ್ತುವಳಿ (ಟ್ರಿಪ್)ಗಳನ್ನು ನೈಸ್ ರಸ್ತೆ ಮಾರ್ಗವಾಗಿ ಬಿಎಂಟಿಸಿ ಬಸ್‌ ಕಾರ್ಯಾಚರಣೆಗೊಳಿಸುತ್ತದೆ.

Advertisements

ತುಮಕೂರು ರಸ್ತೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ನೈಸ್ ರಸ್ತೆ ಜಂಕ್ಷನ್‌ನಿಂದ ನಾನಾ ಸಾರಿಗೆಗಳ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಸುರಕ್ಷಿತ ಪ್ರಯಾಣದ ದೃಷ್ಟಿಯಿಂದ ಡಿ.23 ರಿಂದ ಜಾರಿಗೆ ಬರುವಂತೆ ಮಾದಾವರದಿಂದ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಾರ್ಗ ಸಂಖ್ಯೆ: ನೈಸ್-10 ರಲ್ಲಿ 21 ಅನುಸೂಚಿ(ಷೆಡ್ಯೂಲ್)ಗಳನ್ನು ಪ್ರತಿ 10 ನಿಮಿಷಕ್ಕೊಂದರಂತೆ ಒಟ್ಟು 147 ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಸಾರಿಗೆಗಳಲ್ಲಿ ಮಾಗಡಿ ರಸ್ತೆ ನೈಸ್ ಜಂಕ್ಷನ್, ಮೈಸೂರು ರಸ್ತೆ ನೈಸ್ ಜಂಕ್ಷನ್, ಕನಕಪುರ ರಸ್ತೆ ನೈಸ್ ಜಂಕ್ಷನ್ ಹಾಗೂ ಬನ್ನೇರುಘಟ್ಟ ರಸ್ತೆ ನೈಸ್ ಜಂಕ್ಷನ್‌ಗಳಲ್ಲಿ ನಿಲುಗಡೆ ಇದೆ.

ಮಾದಾವರದಿಂದ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣ ದರ

ಮಾದಾವರದಿಂದ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣ ದರ ₹35 ಹಾಗೂ ಟೋಲ್ ಬಳಕೆದಾರರ ಶುಲ್ಕ ₹25 ಒಟ್ಟು ₹60 ಪ್ರಯಾಣ ದರ ನಿಗದಿಪಡಿಸಲಾಗಿದೆ. ಶಕ್ತಿ ಯೋಜನೆಯ ಫಲಾನುಭವಿಗಳಿಗೆ ನೈಸ್‌ ಸಾರಿಗೆ ಸೌಲಭ್ಯವು ಸಂಪೂರ್ಣ ಉಚಿತವಾಗಿರುತ್ತದೆ ಎಂದು ತಿಳಿಸಿದೆ.

ವಾಯು ವಜ್ರ ಸಾರಿಗೆ

ನಗರದ ನಾನಾ ಪ್ರಮುಖ ಸ್ಥಳಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಸ್ತುತ 17 ಮಾರ್ಗಗಳಲ್ಲಿ, 132 ಅನುಸೂಚಿಗಳಿಂದ ಒಟ್ಟು 912 ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸುತ್ತಿದ್ದು, ಇದರ ಜತೆಗೆ ತುಮಕೂರು ರಸ್ತೆ ಕಡೆಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾದಾವರ ನೈಸ್ ರಸ್ತೆ ಜಂಕ್ಷನ್ (ಬಿಐಇಸಿ)ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಾರ್ಗ ಸಂಖ್ಯೆ: ಕೆಐಎ-18 ರಲ್ಲಿ 5 ಅನುಸೂಚಿಗಳಿಂದ 27 ಸುತ್ತುವಳಿ ಕಾರ್ಯಾಚರಣೆಗೊಳಿಸಲಾಗುವುದು ಎಂದು ಹೇಳಿದೆ.

ಮೆಟ್ರೋ ಫೀಡರ್ ಸಾರಿಗೆ

ಬೆಂಗಳೂರು ನಗರದಲ್ಲಿ 73.81 ಕಿ.ಮೀ. ಉದ್ದದ ಮೆಟ್ರೋ ಮಾರ್ಗವಿದೆ. ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ನಾನಾ ಮೆಟ್ರೋ ನಿಲ್ದಾಣಗಳಿಂದ ಪ್ರಸ್ತುತ 38 ಮಾರ್ಗಗಳಲ್ಲಿ 141 ಅನುಸೂಚಿಗಳಿಂದ ಒಟ್ಟು 2,264 ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಜಾಲಹಳ್ಳಿ ಮೆಟ್ರೋ ನಿಲ್ದಾಣ ಹಾಗೂ ದಾಸರಹಳ್ಳಿ ಮೆಟ್ರೋ ನಿಲ್ದಾಣಗಳಿಂದ ಮಾರ್ಗ ಸಂಖ್ಯೆ: ಎಂಎಫ್-25ಎ, ಎಂಎಫ್-29, ಎಂಎಫ್-30, ಎಂಎಫ್-31 ಒಟ್ಟು 4 ಮಾರ್ಗಗಳಲ್ಲಿ 7 ಅನುಸೂಚಿಗಳಿಂದ 104 ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.

ಸಾಮಾನ್ಯ ಸಾರಿಗೆ

ಚಿಕ್ಕಬಾಣಾವರದಿಂದ ದಾಸರಹಳ್ಳಿ 8ನೇ ಮೈಲಿ, ಅಂದ್ರಹಳ್ಳಿ, ಹೇರೋಹಳ್ಳಿ ಕ್ರಾಸ್, ಸುಂಕದಕಟ್ಟೆ ಮಾರ್ಗವಾಗಿ ಸುಮನಹಳ್ಳಿ ಜಂಕ್ಷನ್‌ಗೆ ಮಾರ್ಗ ಸಂಖ್ಯೆ: ಬಿಸಿ-8 ರಲ್ಲಿ 6 ಅನುಸೂಚಿಗಳಿಂದ 56 ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು ಎಂದು ಹೇಳಿದೆ.

ಮೆಟ್ರೋ ಫೀಡರ್ ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸುವ 9ಮೀ ಉದ್ದದ ಮಿಡಿ ಬಸ್ಸುಗಳನ್ನು ವಿಶೇಷ ರೀತಿಯಲ್ಲಿ ಬ್ರ್ಯಾಂಡಿಂಗ್ ಮಾಡಲಾಗುವುದು.

N-CAP ಯೋಜನೆಯಡಿಯಲ್ಲಿನ 9.0 ಮೀ. ಉದ್ದದ 120 ಹವಾ ನಿಯಂತ್ರಣ ರಹಿತ ಎಲೆಕ್ಟ್ರಿಕ್ ಬಸ್‌ಗಳನ್ನು ಮೆಟ್ರೋ ಫೀಡರ್ ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲಾಗುವುದು.

ಏಪ್ರಿಲ್-2024ರ ಅಂತ್ಯದೊಳಗೆ ನಗರದಲ್ಲಿ ಸಂಸ್ಥೆಯಿಂದ ಪ್ರಸ್ತುತ ಆಚರಣೆಗೊಳಿಸುತ್ತಿರುವ 121 ಮೆಟ್ರೋ ಸಾರಿಗೆಗಳ ಜತೆಗೆ 179 ಸಾರಿಗೆಗಳನ್ನು ಹೆಚ್ಚಿಸಿ, ಒಟ್ಟು 300ಮೆಟ್ರೋ ಫೀಡರ್ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗುವುದು ಎಂದು ಸಂಸ್ಥೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಶುಕ್ರವಾರ 78 ಜನರಿಗೆ ಕೊರೋನಾ ಸೋಂಕು ದೃಢ: ಓರ್ವ ಸಾವು

ಸರಾಸರಿ 40 ಲಕ್ಷ ಪ್ರಯಾಣಿಕರು ಪ್ರಯಾಣ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಾರ್ವಜನಿಕ ಸೇವಾ ಸಂಸ್ಥೆಯಾಗಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಪ್ರಯಾಣಿಕರ ದಟ್ಟಣೆ ಮತ್ತು ಬೇಡಿಕೆಗೆ ಅನುಗುಣವಾಗಿ ಸಾರಿಗೆಗಳನ್ನ ಕಾರ್ಯಾಚರಣೆಗೊಳಿಸುವ ಧ್ಯೇಯದೊಂದಿಗೆ ಪ್ರಯಾಣಿಕರಿಗೆ ದಕ್ಷ, ಉತ್ತಮ, ಸುಲಭ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದೆ.

ಸಾರ್ವಜನಿಕ ಪ್ರಯಾಣಿಕರ ಹೊಣೆಗಾರಿಕೆಯಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಿಂದ 25 ಕಿ.ಮೀ. ವರೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದ್ದು, ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಸಾರಿಗೆ ಸೌಲಭ್ಯ ಒದಗಿಸುವ ಒದಗಿಸುವ ಏಕೈಕ ಸಾರಿಗೆ ಸಂಸ್ಥೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿದಿನ 5571 ಬಸ್‌ಗಳಿಂದ 57,565 ಸುತ್ತುವಳಿಗಳನ್ನು 11.33 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X